N.Hವೇಗಮಿತಿ ಸೂಚನ ಫಲಕ ಇರುವಲ್ಲಿ ಮೊಬೈಲ್ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್ ಕಾರ್ಯಾಚರಣೆ
Team Udayavani, Aug 2, 2024, 6:55 AM IST
ಮಂಗಳೂರು: ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ವಾಹನಗಳ ವೇಗಮಿತಿ ಅಧಿಸೂಚನೆ ಪ್ರಕಾರ “ಮೊಬೈಲ್ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್’ಗಳನ್ನು ಉಪಯೋಗಿಸಿ ಪೊಲೀಸರು ಈಗಾಗಲೇ ಕಾರ್ಯಾಚರಣೆ ಆರಂಭಿಸಿದ್ದಾರೆ.
ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ.ಸದ್ಯದ ಮಟ್ಟಿಗೆ ಜಿಲ್ಲೆಯ ಹೆದ್ದಾರಿಗಳಲ್ಲಿ ಮಾತ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಂಗಳೂರು ನಗರದೊಳಗಿನ ರಸ್ತೆಗಳಲ್ಲಿ ವೇಗದ ಮಿತಿ ಇನ್ನಷ್ಟೇ ನಿರ್ಧಾರವಾಗಬೇಕಿದೆ. ಆದ್ದರಿಂದ ಹೆದ್ದಾರಿಗಳಲ್ಲಿ ಕೆಲವು ಕಡೆಗಳಲ್ಲಿ ಬೋರ್ಡ್ ಅಳವಡಿಕೆ ಮಾಡಿದ್ದು, ಅಂತಹ ಸ್ಥಳಗಳಲ್ಲಿ ಪೊಲೀಸರು ವಾಹನಗಳ ವೇಗ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಮಿತಿ ಮೀರಿದರೆ ದಂಡ ಪಕ್ಕಾ
100 ಕಿ.ಮೀ. ವೇಗದಲ್ಲಿ ಸಾಗಬಹುದಾದ ಹೆದ್ದಾರಿ ಜಿಲ್ಲಾ ವ್ಯಾಪ್ತಿಯಲ್ಲೇ ಇಲ್ಲ. ಗರಿಷ್ಠ ವೇಗ ಮಿತಿ 80 ಕಿ.ಮೀ. ಕೆಲವು ಕಡೆಗಳಲ್ಲಿ 50 ಕಿ.ಮೀ. 30 ಕಿ.ಮೀ. ಹೀಗೆ ಇದೆ. ಈ ಮಿತಿಯನ್ನು ಮೀರಿ ಸಾಗುವ ವಾಹನಗಳಿಗೆ ದಂಡ ವಿಧಿಸಲಾಗುತ್ತಿದೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತ ಬಿ.ಪಿ. ದಿನೇಶ್ ಕುಮಾರ್ ತಿಳಿಸಿದ್ದಾರೆ.
ಜಾಗೃತಿ ಕಾರ್ಯ: ಎಸ್‌ಪಿ
ಪುರಸಭೆ, ಗ್ರಾಮೀಣ ಭಾಗದಲ್ಲಿ ಇನ್ನಷ್ಟೇ ಕಾರ್ಯಾಚರಣೆ ಆರಂಭಿಸಬೇಕಾಗಿದೆ. ಪ್ರಸ್ತುತ ಹೆದ್ದಾರಿಗಳಲ್ಲಿ ದಂಡ ವಿಧಿಸುವ ಮೂಲಕ ಸಾರ್ವಜನಿಕರಲ್ಲಿ ಈ ಕುರಿತಂತೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.
ಮಂಗಳೂರು ಪೊಲೀಸರಿಂದ ವಿಶೇಷ ಕಾರ್ಯಾಚರಣೆ
ಮಂಗಳೂರು: ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರ, ದೋಷ ಪೂರಿತ ನಂಬರ್ ಪ್ಲೇಟ್, ವೇಗದ ಸಂಚಾರ, ಆಟೋಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಯಾಣಿಕರ ಸಂಚಾರ ಸೇರಿ ದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಗುರುವಾರ ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸಂಚಾರ ವಿಭಾ ಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ಸಂಚಾರ ಠಾಣೆಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ ಭಾಗವಹಿಸಿದ್ದರು.
ಪೊಲೀಸರ ಎಚ್ಚರಿಕೆ
ಕೆಲವು ಕಡೆಗಳಲ್ಲಿ ರಾತ್ರಿ ವೇಳೆಯಲ್ಲೂ ಕಾರ್ಯಾಚರಣೆ ನಡೆಯಿತು. ಕಾರ್ಯಾಚರಣೆ ವೇಳೆ ಏಕಮುಖ ಸಂಚಾರ ಮಾಡುತ್ತಿದ್ದವರ ಮೇಲೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.
ನಂಬರ್ ಪ್ಲೇಟ್: ಸೂಚನೆ
ದೋಷಪೂರಿತ ನಂಬರ್ ಇದ್ದ ವಾಹನಗಳ ಚಾಲಕರಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತೆ ಪೊಲೀಸರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.