Daily Horoscope: ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ, ಕೆಲಸದ ಒತ್ತಡ


Team Udayavani, Aug 2, 2024, 7:34 AM IST

Horoscope new-1

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಪ್ರತಿಭಾ ಪ್ರದರ್ಶನ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯದೊಂದಿಗೆ ಸೆಣಸಾಟ. ಕೃಷಿ ಬೆಳೆಗಳ ರಕ್ಷಣೆಗೆ ಪ್ರಯತ್ನ. ಆಪ್ತರಿಂದ ಸಕಾಲದಲ್ಲಿ ಸಹಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇಶಗಳಲ್ಲಿ ನೌಕರಿಯಲ್ಲಿರುವವರಿಗೆ ತಾಯ್ನಾಡಿಗೆ ಬರುವ ಯೋಗ. ಮುದ್ರಣ ಕ್ಷೇತ್ರದವರಿಗೆ ಸಮಯದೊಂದಿಗೆ ಮೇಲಾಟ. ಗೃಹಿಣಿಯರ ಸ್ವಾವಲಂಬನೆ ಪ್ರಯತ್ನದಲ್ಲಿ ಮುನ್ನಡೆ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಬೌದ್ಧಿಕ ಕೆಲಸಗಾರರಿಗೆ ಒತ್ತಡ. ಕೃಷಿ ಸಾಧನಗಳು, ಕೃಷ್ಯುತ್ನನ್ನಗಳು, ರಸಗೊಬ್ಬರ ಇತ್ಯಾದಿಗಳ ವಿತರಕರಿಗೆ ಉತ್ತಮ ಲಾಭ. ಮನೆಯಲ್ಲಿ ದೇವತಾರ್ಚನೆ ಹಾಗೂ ಮಂಗಲ ಕಾರ್ಯದ ಸಿದ್ಧತೆ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಅಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ, ಸ್ವಂತ ವ್ಯವಹಾರಸ್ಥರಿಗೆ ಸಮಯ ದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾ ವರಣ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಆಪ್ತರಿಂದ ಸಕಾಲಿಕ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಂಘಟಿತ ಪ್ರಯತ್ನ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ.

ತುಲಾ: ಉದ್ಯೋಗಸ್ಥರಿಂದ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಬಂಧುಗಳ ಭೇಟಿ.

ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಬೌದ್ಧಿಕ ಕಾರ್ಯಗಳಲ್ಲಿ ತೊಡಗಿರು ವವರ ಮೇಲೆ ಒತ್ತಡ. ಸಂಸಾರದಲ್ಲಿ ಪ್ರೀತಿ, ನೆಮ್ಮದಿ.

ಮಕರ: ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ.

ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಆಸಕ್ತರಿಂದ ಸಹಕಾರ. ಶಿಕ್ಷಣ ಕ್ಷೇತ್ರದ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು ಸನ್ನಿಹಿತ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಹಿರಿಯ ಅಧಿಕಾರಿಗಳಿಗೆ ರಾಜಕಾರಣಿಗಳ ಕಾಟ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಮಧ್ಯಮ ಲಾಭ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಉತ್ತಮ ಸ್ಪಂದನ. ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ಹಿರಿಯರ ಮನೆಯಲ್ಲಿ ದೇವತಾಕಾರ್ಯ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.