Maragur; ನೆಲಕ್ಕಪ್ಪಳಿಸಿದ ವೆದರ್ ಮಾನಿಟರಿಂಗ್ ಸಾಧನ: ಆತಂಕ ಬೇಡ ಎಂದ ಜಿಲ್ಲಾಡಳಿತ
Team Udayavani, Aug 2, 2024, 11:08 AM IST
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಬಳಿ ಹವಾಮಾನ ಮಾಹಿತಿ ಸಂಗ್ರಹಕ್ಕೆ ಹಾರಿಸಿರುವ ಪ್ಯಾರಾಚ್ಯೂಟ್ ಮಾದರಿ ಬಾಹ್ಯಾಕಾಶ ಸಾಧನ ನೆಲಕ್ಕೆ ಅಪ್ಪಳಿಸಿದ ಘಟನೆ ಶುಕ್ರವಾರ (ಆ.02) ನಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಸ್ಥಾನಿಕ ಹವಾಮಾನ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸಲು ಬೆಂಗಳೂರಿನ ಇಸ್ರೋ ಕೇಂದ್ರದಿಂದ ಕೆಲ ದಿನಗಳ ಹಿಂದೆ ವಿಶೇಷ ಸಾಧನವನ್ನು ಹಾರಿ ಬಿಡಲಾಗಿದೆ. ಸದರಿ ಸಾಧನ ಸ್ಥಾನಿಕ ಹವಾಮಾನ ಮಾಹಿತಿಯನ್ನು ಇಸ್ರೋ ಕೇಂದ್ರಕ್ಕೆ ರವಾನಿಸಲಿದೆ. ಹೈದರಾಬಾದ್ ಇಸ್ರೋ ನಿರ್ವಹಣಾ ಕೇಂದ್ರದಿಂದ ಈ ಸಾಧನವನ್ನು ನಿಯಂತ್ರಣ ಮಾಡಲಾಗುತ್ತಿತ್ತು.
ಲೋ ಲ್ಯಾಟಿಟ್ಯೂಡ್ ವೆದರ್ ಮಾನಿಟರಿಂಗ್ ಮಾಡಲು ಹಾರಿ ಬಿಡಲಾಗಿರುವ ಈ ಸಾಧನ ಮರಗೂರ ಬಳಿ ಜಮೀನಿನಲ್ಲಿ ಬಿದ್ದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಇಸ್ರೋ ಬಾಹ್ಯಾಕಾಶ ಸಾಧನ ಪತನದಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಬಾಹ್ಯಾಕಾಶ ಸಾಧನ ಪತನದಿಂದ ಆಗಿರುವ ನಷ್ಟ, ವ್ಯತಿರಿಕ್ತ ಪರಿಣಾಮಗಳ ಕುರಿತು ತಜ್ಞರ ಭೇಟಿ ಬಳಿಕವೇ ಮಾಹಿತಿ ಲಭ್ಯವಾಗಲಿದೆ.
ಆತಂಕ ಪಡಬೇಕಿಲ್ಲ: ಡಿ.ಸಿ. ಭೂಬಾಲನ್
ಪೆಲೋಡ್ ಪತನದ ಕುರಿತು ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್, ಕೇಂದ್ರ ಸರ್ಕಾರದ ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿನ ಹೈದರಾಬಾದ್ ನ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ (ಟಾಟಾ ಇನ್ ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್) ಹವಾಮಾನ ಹಾಗೂ ವಾತಾವರಣ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಪೆಲೋಡ್ ಹೆಸರಿನ ಹವಾಮಾನ ಅಧ್ಯಯನಾಶೀಲ ವೈಜ್ಞಾನಿಕ ಉಪಕರಣ ಪ್ಯಾರಾಚೂಟ್ ನ ನೆರವಿನಿಂದ ಚಡಚಣ ತಾಲೂಕಿನ ಗ್ರಾಮವೊಂದರ ಜಮೀನಿನಲ್ಲಿ ಬಂದು ಇಳಿದಿದೆ ಎಂದಿದ್ದಾರೆ.
ಜಿಲ್ಲಾಡಳಿತ ಈ ಕುರಿತು ಸಂಬಂಧಿಸಿದ ಸಂಸ್ಥೆಯನ್ನು ಸಂಪರ್ಕಿಸಿ ಈಗಾಗಲೇ ಮಾಹಿತಿ ಒದಗಿಸಿದೆ. ಸಂಸ್ಥೆಯ ಅಧಿಕಾರಿಗಳ ತಂಡ ಸದ್ಯದಲ್ಲೇ ವಿಜಯಪುರಕ್ಕೆ ಆಗಮಿಸಲಿದೆ. ಜಮೀನಿನಲ್ಲಿ ಬಿದ್ದಿರುವ ಪ್ಯಾರಾಚ್ಯೂಟ್ ಹಾಗೂ ಪೆಲೋಡ್, ಅದಕ್ಕೆ ಸಬಂಧಿಸಿದ ಸಾಧನಾ ಸಲಕರಣೆಗಳನ್ನು ತೆಗೆದುಕೊಂಡು ಹೋಗಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.