Reservation: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲು: ರಾಜ್ಯದಲ್ಲಿ ಚರ್ಚೆ ಆರಂಭ


Team Udayavani, Aug 2, 2024, 3:32 PM IST

ಬೆಂಗಳೂರು: ರಾಜ್ಯಗಳಿಗೆ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುವ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 101 ಜಾತಿಗಳಲ್ಲಿ ಹಂಚಿ ಹೋಗಿರುವ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಬೇಕು ಎಂಬ ಚರ್ಚೆ ಆರಂಭಗೊಂಡಿದೆ.

ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರಕಾರವು ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೇರಿಸಿ ಬಳಿಕ ಶೇ. 6 ಎಡಗೈ, ಶೇ. 5.5 ಬಲಗೈ, ಶೇ 4.5ರಷ್ಟು ಬಂಜಾರ, ಭೋವಿ, ಕೊರಚ ಮತ್ತು ಕೊರಮ ಹಾಗೂ ಶೇ. 1 ಮೀಸಲಾತಿಯನ್ನು ಇತರ ಪರಿಶಿಷ್ಟರಿಗೆ ನೀಡಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು. ಆ ಬಳಿಕ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರಕಾರವು ಕೇಂದ್ರ ಸರಕಾರಕ್ಕೆ ಪತ್ರ ಬರೆದು ಒಳಮೀಸಲಾತಿಗೆ ಅವಕಾಶ ಕಲ್ಪಿಸುವಂತೆ ಸಂವಿಧಾನದ 341ನೇ ವಿಧಿಗೆ ತಿದ್ದುಪಡಿ ಮಾಡುವಂತೆ ಪತ್ರ ಬರೆದಿತ್ತು.

ಆದ್ದರಿಂದ ರಾಜ್ಯದ ಒಳಮೀಸಲಾತಿ ಸಂಬಂಧಿತ ಬೆಳವಣಿಗೆಗಳು ಕಾನೂನಿನ ಸುಳಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದವು. ಆದರೆ ಇದೀಗ ಖುದ್ದು ಸುಪ್ರೀಂ ಕೋರ್ಟ್‌ ಒಳಮೀಸಲಾತಿಗೆ ಅವಕಾಶ ಕಲ್ಪಿಸಿರುವುದರಿಂದ ಸಂವಿಧಾನ ತಿದ್ದುಪಡಿಯ ಅಗತ್ಯವಿಲ್ಲದೇ ರಾಜ್ಯ ಸರಕಾರವೇ ಒಳ ಮೀಸಲಾತಿ ಕಲ್ಪಿಸಬಹುದಾಗಿದೆ. ಆದರೆ ಒಟ್ಟು ಮೀಸಲಾತಿಯ ಪ್ರಮಾಣದಲ್ಲಿ ಹೆಚ್ಚು ಕಡಿಮೆ ಮಾಡಲು ಅಥವಾ ಹೊಸದಾಗಿ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರ್ಪಡೆ ಮಾಡಲು ಅಥವಾ ತೆಗೆಯಲು ಸಂವಿಧಾನದ ತಿದ್ದುಪಡಿ ಆವಶ್ಯಕವಾಗಿದೆ ಎನ್ನಲಾಗಿದೆ. ಆದರೆ, ರಾಜ್ಯ ಸರಕಾರ ಪ್ರಸ್ತುತ ಶೇ. 15 ಪರಿಶಿಷ್ಟ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಪಡೆದುಕೊಂಡಿದೆ.

ಸಿಎಂ ಸ್ವಾಗತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ್ದು, ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ಐತಿಹಾಸಿಕವಾದು ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದಿದ್ದಾರೆ.
ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಮ್ಮ ನಿರ್ಣಯಕ್ಕೆ ಜಯ
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಮ್ಮ ಸರಕಾರ ಆಂತರಿಕ ಮೀಸಲಾತಿಯನ್ನು ಸಂಪುಟದಲ್ಲಿ ಒಪ್ಪಿ, ಸರಕಾರಿ ಆದೇಶವನ್ನು ಮಾಡಿ, ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿರುವ ನಿಲುವನ್ನು ಇಂದು ಏಳು ನ್ಯಾಯಾಧೀಶರನ್ನೊಳಗೊಂಡ ಸರ್ವೋಚ್ಚ ನ್ಯಾಯಾಲಯದ ಸಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಐತಿಹಾಸಿಕ ತೀರ್ಪು ಮತ್ತು ಎಸ್ಸಿ ಜನಾಂಗದ ಒಳ ಮೀಸಲಾತಿ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.

ಒಳ ಮೀಸಲಾತಿ ಕಲ್ಪಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ರಾಜ್ಯ ಸರಕಾರಕ್ಕೆ ನೀಡಿದೆ. ನಮ್ಮಲ್ಲಿ ನ್ಯಾ| ಸದಾಶಿವ ಆಯೋಗದ ವರದಿಯ ಆಧಾರದಲ್ಲಿ ಒಳಮೀಸಲಾತಿ ನೀಡುವುದನ್ನು ನಾವು ವಿರೋಧಿಸುತ್ತೇವೆ. ಆ ವರದಿ ವೈಜ್ಞಾನಿಕವಾಗಿದೆ.
ಹೊಸದಾಗಿ ವೈಜ್ಞಾನಿಕವಾಗಿ ಗಣತಿ ನಡೆಸಬೇಕು.
*ಪ್ರಕಾಶ್‌ ರಾಥೋಡ್‌, ವಿಧಾನ ಪರಿಷತ್‌ ಸದಸ್ಯ

ನಮ್ಮ 3 ದಶಕಗಳ ಹೋರಾಟಕ್ಕೆ ಸುಪ್ರೀಂಕೋರ್ಟ್‌ ನಲ್ಲಿ ಜಯ ಸಿಕ್ಕಿದೆ. ಈಗಾಗಲೇ ಮೀಸಲು ಪ್ರಯೋಜನ ಪಡೆದು ಕೆನೆಪದರ ತಲುಪಿದವರಿಗೆ ಮೀಸಲಾತಿ ಅವಶ್ಯಕತೆ ಇಲ್ಲ ಎಂದು ಹೇಳಿರುವುದು ದಲಿತ ಸಮುದಾಯಗಳಲ್ಲಿರುವ ಧ್ವನಿ ಇಲ್ಲದ ವರ್ಗಕ್ಕೆ ಆಶಾಕಿರಣವಾಗಿದೆ.
*ಡಾ| ಚಿ.ನಾ. ರಾಮು, ರಾಷ್ಟ್ರೀಯ ಅಧ್ಯಕ್ಷ, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ

ಒಳಮೀಸಲಾತಿ ಎತ್ತಿಹಿಡಿದಿರುವ ಸುಪ್ರೀಂಕೋರ್ಟ್‌ ತೀರ್ಪು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವು. ಇದು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ ಸಂವಿಧಾನದ ಆಶಯಕ್ಕೆ ಇನ್ನಷ್ಟು ಬಲ ನೀಡಿದಂತಾಗಿದೆ. ಮೂರು ದಶಕಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.
*ಗೋವಿಂದ ಕಾರಜೋಳ, ಚಿತ್ರದುರ್ಗ ಸಂಸದ

ಟಾಪ್ ನ್ಯೂಸ್

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

OM BIrla

Waqf ಸಮಿತಿಯಿಂದ ದೂರ: ಇಂದು ಸ್ಪೀಕರ್‌ ಜತೆ ವಿಪಕ್ಷ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.