Shiradi Ghat : “ರಸ್ತೆ ನಿರ್ಮಾಣಕ್ಕೆ ಗುಡ್ಡಗಳ 90 ಡಿಗ್ರಿಯಲ್ಲಿ ಸೀಳಿದ್ದರಿಂದ ಭೂ ಕುಸಿತ”
ಶಿರಾಡಿ ಘಾಟಿಯ ಹಲವು ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಶೀಲಿಸಿ ಸಿಎಂ ಸಿದ್ದರಾಮಯ್ಯ ಹೇಳಿಕೆ
Team Udayavani, Aug 3, 2024, 6:04 PM IST
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ ಪದೇ ಪದೇ ಭೂ ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಶಿರಾಡಿ ಘಾಟಿಯ ಹಲವೆಡೆ ಗುಡ್ಡ ಕುಸಿತ ಪ್ರದೇಶಗಳ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದು ಬಳಿಕ ದೊಡ್ಡತಪ್ಲುವಿನಲ್ಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ರ ಮೇಲ್ಭಾಗದಲ್ಲಿ ಮಣ್ಣು ಸಡಿಲವಾಗಿದೆ. ಹೀಗಾಗಿ ಪದೇ ಪದೇ ಕುಸಿಯುತ್ತಿದೆ. ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳ 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟು 45 ಕಿ.ಮೀ. ನಲ್ಲಿ 35 ಕಿ.ಮೀ. ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳ ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳ ಕೈಗೊಂಡಿಲ್ಲ ಎಂದು ಹೇಳಿದರು.
ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತು. ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ನಡೆಸಿದ್ರೆ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು.
ಕೇಂದ್ರ ಸಚಿವ ಗಡ್ಕರಿಯವರಿಗೆ ಪತ್ರ ಬರೆಯುವೆವು:
ಶಿರಾಡಿಘಾಟ್ನಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಭೂಕುಸಿತವಾಗುತ್ತಿದೆ. ಸ್ಥಳೀಯರ ಅಭಿಪ್ರಾಯವನ್ನು ಕೇಂದ್ರ ಸಚಿವರಿಗೆ ತಿಳಿಸುತ್ತೇನೆ. ಸಕಲೇಶಪುರ ಭಾಗದಲ್ಲಿ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆ ಆಗಿದೆ. ಶಿರಾಡಿಘಾಟ್ನಲ್ಲಿ ಹೆದ್ದಾರಿ ಸರಿಪಡಿಸುವಂತೆ ಪತ್ರ ಬರೆಯುವೆ. ದೆಹಲಿಗೆ ಹೋದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಮನವರಿಕೆ ಮಾಡುವೆ ಎಂದು ಹೇಳಿದ್ದಾರೆ.
ಶಿರಾಡಿಘಾಟ್ನಲ್ಲಿ ಮಣ್ಣು ಕುಸಿತದಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿದೆ. 1 ಎಸ್ಡಿಆರ್ಎಫ್ ತಂಡ ಇಲ್ಲೇ ನಿಯೋಜನೆ ಮಾಡಿದ್ದೇವೆ. ಬೇಕಿದ್ದರೆ ಇನ್ನು ಹೆಚ್ಚಿನ ಭದ್ರತೆ ವಹಿಸುತ್ತೇವೆ. ಯಾಕೆ ಭೂ ಕುಸಿತ ಆಗುತ್ತಿದೆ ಎಂಬುದದರ ಬಗ್ಗೆ ಅಭಿಪ್ರಾಯ ಪಡೆದು ಕ್ರಮ ವಹಿಸುತ್ತೇವೆ ಎಂದು ಹೇಳಿದರು.
ವಯನಾಡು ಭೂಕುಸಿತ: 100 ಮನೆಗಳ ನಿರ್ಮಾಣ:
ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ಕರ್ನಾಟಕ ರಾಜ್ಯ ಸರ್ಕಾರ ನಿಂತಿದೆ. ಕೇರಳದಲ್ಲಿ ಭೂಕುಸಿತದಿಂದ ಸೂರು ಕಳೆದುಕೊಂಡವರಿಗೆ ನೂರು ಮನೆ ನಿರ್ಮಿಸಿ ಕೊಡುತ್ತೇವೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ಮಾತನಾಡಿದ್ದೇನೆ. ಮನೆಗಳು ಕೊಚ್ಚಿ ಹೋಗಿವೆ, ಜೀವಗಳು ಹಾನಿಯಾಗಿವೆ. ಅವರಿಗೆ ಸಹಾಯ ಮಾಡಲು ಮನೆ ನಿರ್ಮಿಸಿ ಕೊಡುತ್ತೇವೆ. ಹತ್ತು ಕೋಟಿ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ @pinarayivijayan ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು…
— CM of Karnataka (@CMofKarnataka) August 3, 2024
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.