Bengaluru:ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಯಲಚೇನಹಳ್ಳಿ-ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ಸೇವೆ ಸ್ಥಗಿತ
Team Udayavani, Aug 3, 2024, 9:24 PM IST
Representative image
ಬೆಂಗಳೂರು: ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಶನಿವಾರ( ಆಗಸ್ಟ್ 3) ಸಂಜೆ 35 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲಿಗೆ ಸಿಲುಕಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಗುರುತಿಸಲು ಮತ್ತು ಕಠಿನ ನಿರ್ಧಾರದ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದಾಗಿ ಗ್ರೀನ್ ಲೈನ್ನಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಸಂಜೆ 5.45 ರ ವೇಳೆಗೆ ಆಗಮಿಸಿದ್ದು ರೈಲು ಸಮೀಪಿಸುತ್ತಿರುವ ವೇಳೆ ಮುಂದೆ ಜಿಗಿದಿದ್ದಾರೆ” ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ‘ಎಕ್ಸ್’ ಪೋಸ್ಟ್ನಲ್ಲಿ ತಿಳಿಸಿದೆ.
ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ಗ್ರೀನ್ ಲೈನ್ನಲ್ಲಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅದು ಹೇಳಿದೆ. ಉಳಿದ ವಿಭಾಗದಲ್ಲಿ ಸೇವೆಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.