Arrested: 29 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಬಂಧನ
Team Udayavani, Aug 3, 2024, 9:40 PM IST
ಮಣಿಪಾಲ: ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕುಂದಾಪುರದ ಕೃಷ್ಣ ಭಂಡಾರಿ ಬಂಧಿತ ಆರೋಪಿ.
1995ರಲ್ಲಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣದ ಮೂರನೇ ಆರೋಪಿಯಾಗಿದ್ದ ಕೃಷ್ಣ ಭಂಡಾರಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯಕ್ಕೂ ಹಾಜರಾಗಿರಲಿಲ್ಲ. ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ಅವರ ಮಾರ್ಗದರ್ಶನದಲ್ಲಿ ಸಿಬಂದಿ ಪ್ರಸನ್ನ ಸಿ., ಇಮ್ರಾನ್ ಅವರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಕುಂದಾಪುರದಿಂದ ಆತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.