Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Team Udayavani, Aug 4, 2024, 7:32 AM IST
ಮೇಷ: ಈ ದಿನ ಉದ್ಯೋಗಸ್ಥಾನವನ್ನು ಮರೆತುಬಿಡಿ. ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಹರ್ಷಾನುಭವ. ಮಹಿಳಾ ಉದ್ಯಮಿಗಳಿಗೆ ಯಶಸ್ಸು.ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ.
ವೃಷಭ: ಭವಿಷ್ಯದ ಯೋಜನೆಗಳ ಕುರಿತು ಚಿಂತನೆ ಅನ್ವೇಷಕರದು. ವಿಶಿಷ್ಟ ಅವಕಾಶಗಳ ಅನಾವರಣ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಒಬ್ಬ ಪ್ರಮುಖ ವ್ಯಕ್ತಿಯ ಭೇಟಿ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ.
ಮಿಥುನ: ಕೇಳಿದವರಿಗೆ ಮಾತ್ರ ಸಲಹೆ ನೀಡಿ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಉತ್ತರದ ಕಡೆಗೆ ಸಣ್ಣ ಪ್ರಯಾಣ ಸಂಭವ.
ಕರ್ಕಾಟಕ: ಉದ್ಯೋಗಸ್ಥರಿಗೆ ನಾಳೆಯ ಕೆಲಸಗಳ ಚಿಂತೆ ಕಿರಿಯ ಉದ್ಯಮಿಗಳ ಸ್ನೇಹಕೂಟ ಆಯೋಜನೆ. ಹಿರಿಯರಿಗೆ ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ. ಮಹಿಳೆಯರ ಸೊÌàದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.
ಸಿಂಹ:ಉದ್ಯಮಕ್ಕೆ ಹೊಸರೂಪ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿ. ಪರಿಣತರ ಸಲಹೆ ಯಂತೆ ಹೊಸ ಕ್ರಮಗಳು. ಶಿಕ್ಷಿತ ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ, ನೆಮ್ಮದಿಯ ಅನುಭವ.
ಕನ್ಯಾ: ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಆನಂದ. ಸಹೋದ್ಯೋಗಿ ಮಿತ್ರರ ಸಂತೋಷ ಕೂಟ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ.
ತುಲಾ: ಕೆಲವು ಕ್ಷೇತ್ರಗಳವರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ವಿದೇಶದಲ್ಲಿರುವ ಮಿತ್ರನ ಆಗಮನ.
ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಾಂಸಾರಿಕ ನೆಮ್ಮದಿ ಕೆಡಿಸುವವರಿಗೆ ಮುಖಭಂಗ.
ಧನು:ಉದ್ಯಮದ ವೈವಿಧಿÂàಕರಣ ಯೋಜನೆ ಅನುಷ್ಠಾನ ಆರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ. ನೆರವಿನ ಯೋಜನೆಗಳಲ್ಲಿ ಭಾಗಿ.
ಮಕರ:ಮನೆಯವರ ಜೊತೆಯಲ್ಲಿ ವಿರಾಮದ ಆನಂದಾನುಭವ. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಭೀತಿ. ಯಂತ್ರೋಪಕರಣ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.
ಕುಂಭ:ವಿರಾಮದಂದು ಮಂದಗತಿಯಲ್ಲಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥ ರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಕೃಷ್ಯುತ್ಪಾದನೆ ವೃದ್ಧಿಯಲ್ಲಿ ಯಶಸ್ಸು. ಟೈಲರಿಂಗ್, ವೈಂಡಿಂಗ್ ಬಲ್ಲವರಿಗೆ ಅಧಿಕ ಆದಾಯ.
ಮೀನ: ವಿರಾಮದ ಕಾರಣ ಮೈಮನಗಳಿಗೆ ಆಲಸ್ಯ. ಸೋದರ ಸೋದರಿಯ ಭೇಟಿ. ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.ಅನಾಥಾಶ್ರಮ, ವೃದ್ಧಾ ಶ್ರಮಕ್ಕೆ ಭೇಟಿ, ನೊಂದವರಿಗೆ ಸಾಂತ್ವನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.