Wayanad; ನಿರಾಶ್ರಿತರ ಮನೆಗಳಲ್ಲಿ ಹೆಚ್ಚುತ್ತಿದೆ ಕಳ್ಳತನ; ಸಂಕಷ್ಟದಲ್ಲೂ ಮರೆಯಾದ ಮಾನವೀಯತೆ
Team Udayavani, Aug 4, 2024, 8:42 AM IST
ವಯನಾಡ್: ಕೇರಳದ ವಯನಾಡ್ (Wayanad) ಜಿಲ್ಲೆಯು ಗುಡ್ಡ ಕುಸಿತದ (Landslide) ಕಾರಣದಿಂದ ನಲುಗಿ ಹೋಗಿದೆ. ಹಲವಾರು ಜನರು ತಮ್ಮ ಮನೆಗಳನ್ನು ತೊರೆದು ನಿರಾಶ್ರಿತ ಕೇಂದ್ರಗಳಲ್ಲಿ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಕೆಲವು ಊರುಗಳಲ್ಲಿ ಮಣ್ಣು, ನೀರು ತುಂಬಿದ್ದು ಜನಜೀವನ ಸಹಜತೆಗೆ ಬರಲು ಇನ್ನಷ್ಟು ದಿನ ಬೇಕಾಗಿದೆ. ಇದೇ ವೇಳೆ ಖಾಲಿ ಇರುವ ಮನೆಗಳಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಬಗ್ಗೆ ವರದಿಯಾಗಿದೆ.
ತಾವು ಬಿಟ್ಟು ಬಂದಿರುವ ಮನೆಗಳಲ್ಲಿ ಕಳ್ಳತನ ನಡೆಯುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸ್ಥಳಗಳಲ್ಲಿ ಪೊಲೀಸರು ಗಸ್ತು ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳ್ಳರು ಈ ಬಿಕ್ಕಟ್ಟಿನ ಲಾಭವನ್ನು ಪಡೆದು ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರೆ ಎಂದು ಸ್ಥಳಾಂತರಗೊಂಡ ನಿವಾಸಿಗಳು ಆತಂಕ ಹೊರಹಾಕಿದ್ದಾರೆ.
ರಾತ್ರಿ ವೇಳೆ ಕಳ್ಳತನ ಮಾಡುವ ಉದ್ದೇಶದಿಂದ ಈ ಪ್ರದೇಶಕ್ಕೆ ನುಗ್ಗುವವರನ್ನು ಗುರುತಿಸಿ ಶಿಕ್ಷಿಸಬೇಕು ಎಂದು ಸಂತ್ರಸ್ತ ಕೆಲವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ದುರಂತದಲ್ಲಿ ಎಲ್ಲವನ್ನೂ ಕಳೆದುಕೊಂಡವರು ನಾವೇ ಎಂದು ಸಂತ್ರಸ್ತ ವ್ಯಕ್ತಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದರು.
“ನಾವು ಭೂಕುಸಿತ ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಮನೆಗಳನ್ನು ತ್ಯಜಿಸಿದ್ದೇವೆ. ಆದರೆ ಅದರ ನಂತರ ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ” ಎಂದರು. ಅಲ್ಲದೆ ಸದ್ಯ ಅವರು ತಂಗಿರುವ ರೆಸಾರ್ಟ್ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದರು.
ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.