Hubli; ಸಿಎಂ ಭ್ರಷ್ಟಾಚಾರದಲ್ಲಿರುವಾಗ ಶಾಸಕರಿಗೆ ಯಾವ ಭಯ ಇರುತ್ತದೆ: ಪ್ರಹ್ಲಾದ ಜೋಶಿ
Team Udayavani, Aug 4, 2024, 12:26 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಶಾಸಕರಿಗೆ ಭಯ ಇಲ್ಲದಂತಾಗಿದೆ. ಸಿದ್ದರಾಮಯ್ಯ ಶುದ್ದ ಹಸ್ತರಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ವಾಲ್ಮೀಕಿ ಹಗರಣದ ಹಣವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳದಿದ್ದರೆ ಕೂಡಲೇ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Pralhad Joshi) ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ದಿನಕ್ಕೊಂದು ಭ್ರಷ್ಟಾಚಾರಗಳು ನಡೆಯುತ್ತಿವೆ. ಒಂದೂವರೆ ವರ್ಷದಲ್ಲಿ ಇವರ ಹಗರಣಗಳು ಮಿತಿ ಮೀರಿವೆ. ಯಾದಗಿರಿಯಲ್ಲಿ ದಲಿತ ಪೊಲೀಸ್ ಅಧಿಕಾರಿ ಸಾವು ಹಲವು ಅನುಮಾನಗಳನ್ನು ಮೂಡಿಸಿದೆ. ಅಲ್ಲಿನ ಶಾಸಕ ನಾಪತ್ತೆಯಾಗಿದ್ದಾರೆ. ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಶಾಸಕರಿಗೆ ಎಲ್ಲಿ ಭಯ ಇರುತ್ತದೆ ಎಂದು ಲೇವಡಿ ಮಾಡಿದರು.
ಹಿಂದುಳಿದ ವರ್ಗದವರು ಮುಖ್ಯಮಂತ್ರಿಯಾಗಿದ್ದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳುತ್ತಿರುವುದು ಅವರ ಹೇಡಿತನ ಹಾಗೂ ಭಾಗಿಯಾಗಿರುವುದನ್ನು ಸಾಬೀತು ಪಡಿಸಿದಂತಿದೆ. ಭ್ರಷ್ಟಾಚಾರ, ಅಪರಾಧ ಕೃತ್ಯಗಳಿಗೆ ಯಾವುದೇ ಸಮಾಜ, ಜಾತಿ, ಧರ್ಮವಿಲ್ಲ. ಈ ರೀತಿ ಹಿಂದುಳಿದ ನಾಯಕ ಎನ್ನುವ ಮೂಲಕ ಈ ಕೃತ್ಯಗಳಿಂದ ತಮ್ಮನ್ನು ಸಂರಕ್ಷಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇವರು ಶುದ್ದ ಹಸ್ತರಾಗಿದ್ದರೆ ಸಿಬಿಐ ತನಿಖೆಗೆ ಕೊಡಲಿ. ಆಯೋಗ, ನ್ಯಾಯಾಂಗ ತನಿಖೆ ಎಂಬುವುದು ತಮ್ಮನ್ನು ರಕ್ಷಿಸಿಕೊಳ್ಳಲು ಮಾಡಿರುವ ಕೆಲಸವಷ್ಟೇ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.