BJP-JDS ಮೈತ್ರಿ ಸುನಾಮಿಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಲಿದೆ: ಬಿಎಸ್ವೈ
ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಖಚಿತ
Team Udayavani, Aug 4, 2024, 9:36 PM IST
ರಾಮನಗರ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ರಾಜಕೀಯದಲ್ಲಿ ಸುನಾಮಿ ಎದ್ದಿದೆ. ಈ ಸುನಾಮಿಯಲ್ಲಿ ಕಾಂಗ್ರೆಸ್ ಪಕ್ಷವು ನಿರ್ಮೂಲನೆಯಾಗಲಿದೆ. ನಮ್ಮ ಮೈತ್ರಿ ರಾಜ್ಯದಲ್ಲಿ ಮತ್ತೆ ಒಗ್ಗಟ್ಟಿ ನಿಂದ ಸರ್ಕಾರ ರಚನೆ ಮಾಡುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರಾಮನಗರದ ಹಳೇ ಬಸ್ ನಿಲ್ದಾಣದ ವೃತ್ತದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ದೇಶದ ಇತಿಹಾಸದಲ್ಲೇ 14 ನಿವೇಶನ ಪಡೆದ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರೇ ನಿಮಗೆ ಮಾನ, ಮರ್ಯಾದೆ ಕಿಂಚಿತ್ತಾದರೂ ಇದ್ದರೆ ಮೊದಲು ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.
ಸರ್ಕಾರದ ಹೆಸರಿನಲ್ಲೇ 60 ಕೋಟಿ ರೂ. ಲೂಟಿ ಮಾಡಿದ್ದಾರೆ. ಸರ್ಕಾರಿ ಖಜಾನೆಯನ್ನು ಲೂಟಿ ಮಾಡಿರುವ ಸಿಎಂ ಅವರಿಗೆ ಯಾವುದೇ ಪ್ರಶ್ನೆ ಕೇಳುವ ಹಕ್ಕಿಲ್ಲ. ರಾಜೀನಾಮೆ ನೀಡುವುದನ್ನು ಬಿಟ್ಟು ಮೊಂಡುತನ ಮಾಡುವುದು ಬೇಡ ಎಂದು ಸಲಹೆ ನೀಡಿದರು.
ಸರ್ಕಾರ ಕಿತ್ತೆಸೆಯುತ್ತೇವೆ:
ನಾವು ಈ ಭ್ರಷ್ಟ ಸರ್ಕಾರವನ್ನು ಕಿತ್ತೂಗೆಯುವವರೆಗೆ ವಿರಮಿಸುವುದಿಲ್ಲ. ಮುಂದೆ ಇದೇ ಮೈತ್ರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಪಾದಯಾತ್ರೆ ಇದಕ್ಕೆ ಸಾಕ್ಷಿಯಾಗಿದ್ದು, ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಜನರೇ ಇದಕ್ಕೆ ಸಾಕ್ಷಿ. ಹಗರಣಗಳಲ್ಲೇ ಮುಳುಗಿರುವ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.