ಪರಶುರಾಮ ಪ್ರತಿಮೆ ವಿಚಾರ: ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
Team Udayavani, Aug 5, 2024, 12:43 PM IST
ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದು, ಪ್ರಸ್ತುತ ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರಿನ ಮನೆಗೆ ತೆರಳಿ ಕಾಂಗ್ರೆಸ್‌ನ ಮುಖಂಡರು ನಡೆಸಿದ ದಬ್ಬಾಳಿಕೆ ರಾಜಕಾರಣವನ್ನು ಖಂಡಿಸಿ ಸೋಮವಾರ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣದ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಕಾಂಗ್ರೆಸ್ ರಾಜಕಾರಣದ ಶ್ಯೆಲಿ ಜನರಿಗೆ ಹೊಸದಲ್ಲ. ಇತಿಹಾಸ , ಧಾರ್ಮಿಕತೆಯನ್ನು ಅವರು ನಂಬುವುದಿಲ್ಲ. ಸುನಿಲ್ ಕುಮಾರ್ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ವಿವಿಧ ಹಗರಣಗಳನ್ನು ಮಾಡಿರುವ ಕಾಂಗ್ರೆಸ್ ಗೆ ಈಗ ಭಯ ಶುರುವಾಗಿದೆ. ಮೂರ್ತಿ ಸ್ಥಾಪನೆ ಮಾಡಿದ್ದ ಕೆಂಗೇರಿಯ ಗೋಡೌನ್ ಗೆ ಪೊಲೀಸರು ದಾಳಿ ನಡೆಸಿದಾಗ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಹೋಗಿದ್ದಾದರೂ ಯಾತಕ್ಕೆ ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ: Vijayalakshmi Darshan: ಪತಿ ದರ್ಶನ್‌ಗಾಗಿ ಟೆಂಪಲ್ ರನ್ ಮುಂದುವರೆಸಿದ ಪತ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.