Dandeli: ಧಾರವಾಡಕ್ಕೆ ಸಮರ್ಪಕ ಬಸ್ ವ್ಯವಸ್ಥೆಯಿಲ್ಲದೆ ಪರದಾಡಿದ ಪ್ರಯಾಣಿಕರು
Team Udayavani, Aug 5, 2024, 9:26 PM IST
ದಾಂಡೇಲಿ : ನಗರದಿಂದ ಧಾರವಾಡಕ್ಕೆ ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ಸಿಲ್ಲದೆ ಪ್ರಯಾಣಿಕರೆಲ್ಲರೂ ಬಸ್ ನಿಲ್ದಾಣದಲ್ಲಿಯೇ ಪರದಾಡಿದ ಘಟನೆ ಸೋಮವಾರ (ಆ.05) ನಡೆದಿದೆ.
ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12:30 ಗಂಟೆವರೆಗೆ ದಾಂಡೇಲಿಯಿಂದ ಧಾರವಾಡಕ್ಕೆ ಸಾರಿಗೆ ಬಸ್ಸಿಲ್ಲದೆ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಪರದಾಡಬೇಕಾಯಿತು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರಿಗೆ ನಿಯಂತ್ರಕರನ್ನು ಆಗ್ರಹಿಸಿದರು. ಪ್ರಯಾಣಿಕರ ಹಾಗೂ ಸಾರ್ವಜನಿಕರ ಒತ್ತಾಯಕ್ಕೆ ಮಣಿದ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಸರಿ ಸುಮಾರು ಮೂರು ಗಂಟೆಯ ನಂತರ ಹಳಿಯಾಳದಿಂದ ದಾಂಡೇಲಿಗೆ ಬಸ್ಸನ್ನು ತರಿಸಿ ದಾಂಡೇಲಿಯಿಂದ ಧಾರವಾಡಕ್ಕೆ ಕಳುಹಿಸಿಕೊಟ್ಟಿದ್ದಾರೆ.
ದಾಂಡೇಲಿಯಿಂದ ಧಾರವಾಡಕ್ಕೆ ಮತ್ತು ಧಾರವಾಡದಿಂದ ದಾಂಡೇಲಿಗೆ ಬರಲು ಸೂಕ್ತ ರೀತಿಯಲ್ಲಿ ಸಾರಿಗೆ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಸಂಬಂಧಪಟ್ಟ ಸಾರಿಗೆ ಇಲಾಖೆಯವರು ಈ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಂಡು ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ಸನ್ನು ಬಿಡಬೇಕೆಂದು ಸಾರ್ವಜನಿಕರು ಹಾಗೂ ಪ್ರಯಾಣಿಕರು ಮಾಧ್ಯಮದ ಮೂಲಕ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.