Mangaluru: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ
Team Udayavani, Aug 5, 2024, 11:20 PM IST
ಮಂಗಳೂರು: ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.
ಹುಸೈನ್ ಮಾಲಕತ್ವದ ಸಫವಿ ಹೆಸರಿನ ಬೋಟ್ ಮಂಗಳೂರು ದಕ್ಕೆಯಿಂದ ರವಿವಾರ ಮೀನುಗಾರಿಕೆಗೆ ತೆರಳಿತ್ತು. ಬೋಟ್‌ನಲ್ಲಿ 10 ಮಂದಿ ಮೀನುಗಾರರಿದ್ದರು.
ಸೋಮವಾರ ಮುಂಜಾನೆ 3ರಿಂದ 4 ಗಂಟೆಯ ಅವಧಿಯಲ್ಲಿ ದಕ್ಕೆಯಿಂದ ಸುಮಾರು 88 ನಾಟಿಕಲ್ ಮೈಲು ದೂರದಲ್ಲಿ ಬೋಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಇದರಲ್ಲಿದ್ದ ಮೀನುಗಾರರನ್ನು ಮತ್ತೊಂದು ಬೋಟ್‌ನಲ್ಲಿದ್ದವರು ರಕ್ಷಿಸಿದ್ದಾರೆ.
ಬೋಟ್ ಅವಘಡದಿಂದ ಸುಮಾರು 1 ಕೋ.ರೂ. ನಷ್ಟವುಂಟಾಗಿದೆ ಎಂದು ಬೋಟ್ ಮಾಲಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.