Forest Encroachment; 3 ಎಕರೆ ಭೂಮಿ ಮೀರದಿದ್ದರೆ ತೆರವಿಲ್ಲ: ಸಚಿವ ಈಶ್ವರ ಖಂಡ್ರೆ

ಅರಣ್ಯ ಒತ್ತುವರಿ ತೆರವು ಕಾರ್ಯ ಚುರುಕು

Team Udayavani, Aug 6, 2024, 1:01 AM IST

MiForest Encroachment; 3 ಎಕರೆ ಭೂಮಿ ಮೀರದಿದ್ದರೆ ತೆರವಿಲ್ಲ: ಸಚಿವ ಈಶ್ವರ ಖಂಡ್ರೆnister-Eshwar-Khandre

ಬೆಂಗಳೂರು: ರಾಜ್ಯ ಸರಕಾರ 2015ರಲ್ಲಿ ಆದೇಶ ಮಾಡಿದ್ದು, ಜೀವನೋಪಾಯ ಕ್ಕಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವವರ ಪಟ್ಟಾ ಭೂಮಿ ಮತ್ತು ಒತ್ತುವರಿ ಭೂಮಿ ಎರಡೂ ಸೇರಿ 3 ಎಕರೆ ಮೀರದಿದ್ದರೆ ಅಂತಹ ಒತ್ತುವರಿ ತೆರವು ಮಾಡುವುದಿಲ್ಲ ಎಂದು ಹೇಳಿದೆ. ಸರಕಾರ ಈಗಲೂ ಅದಕ್ಕೆ ಬದ್ಧವಾಗಿದೆ. ಅದೇ ರೀತಿ ಅರಣ್ಯ ಹಕ್ಕು ಕಾಯಿದೆ ಅಡಿ ಈಗಾಗಲೇ ಅರ್ಜಿ ಸಲ್ಲಿಸಿರುವವರ ಯಾವುದೇ ಮನೆ, ಜಮೀನು ತೆರವು ಮಾಡುವುದಿಲ್ಲ. ಆದರೆ 2015ರ ಅನಂತರದ ಹೊಸ ಒತ್ತುವರಿ ವಿಚಾರದಲ್ಲಿ ಕ್ರಮ ಜರಗಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ವಯನಾಡು ಭೂ ಕುಸಿತದ ಬೆನ್ನಲ್ಲೇ ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ಆತಂಕದ ಛಾಯೆ ಮನೆ ಮಾಡಿದ್ದು, ಒತ್ತುವರಿ ತೆರವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸ್ಪಷ್ಟ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ 69 ಎಕರೆ ಒತ್ತುವರಿ ತೆರವುಗೊಳಿಸಿದೆ.

69 ಎಕರೆ ಒತ್ತುವರಿ ತೆರವು
ರಾಜ್ಯದ 10 ಜಿಲ್ಲೆ ಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್‌ ಕ್ಷಣದಿಂದಲೇ ತೆರವುಗೊಳಿಸುವಂತೆ ಖಂಡ್ರೆ ಸೂಚನೆ ನೀಡಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿಯಲ್ಲಿ 17.17 ಎಕರೆ, ಹಲಸೂರಿನಲ್ಲಿ 13.38 ಎಕರೆ ಹಾಗೂ ತನುಡಿಯಲ್ಲಿ 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ತೆರವು ಮಾಡಿಸಲಾಗಿದೆ. ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್‌ ದೀಕ್ಷಿತ್‌ ಅವರ ಆದೇಶದಂತೆ ಈ ಕ್ರಮ ಜರಗಿಸಲಾಗಿದೆ.

ಕಸ್ತೂರಿ ರಂಗನ್‌ ವರದಿ ಮತ್ತೆ ಮುನ್ನೆಲೆಗೆ
ಇದೆಲ್ಲ ವಿಚಾರಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕಸ್ತೂರಿ ರಂಗನ್‌ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಈಗ ಮತ್ತೂಂದು ಅಧಿಸೂಚನೆ ಹೊರಡಿಸಿದೆ. ರಾಜ್ಯದ 20,668 ಚದರ ಕಿಲೋ ಮೀಟರ್‌ಗೂ ಹೆಚ್ಚು ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಹೇಳಿದೆ. ರಾಜ್ಯದ 10 ಜಿÇÉೆಗಳ ಅಂದರೆ ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಬೆಳಗಾವಿಯ 33 (ತಾಲೂಕು ಪುನರ್‌ ವಿಂಗಡಣೆಯ ಅನಂತರ 39) ತಾಲೂಕುಗಳ 1,533 ಗ್ರಾಮಗಳನ್ನು ಗುರುತಿಸಲಾಗಿದೆ ಎಂದರು.

ಸಾಧಕ-ಬಾಧಕ ಅರಿಯಲು ಸಮಿತಿ ರಾಜ್ಯ ಸರಕಾರ ಈಗಾಗಲೇ ಈ ವರದಿ ತಿರಸ್ಕರಿಸುವ ತೀರ್ಮಾನ ಕೈಗೊಂಡಿದ್ದು, ಈಗ ಕೇಂದ್ರ ಸರಕಾರ ಹೊರಡಿಸಿರುವ ಅಧಿಸೂಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಚಿವ ಸಂಪುಟದಲ್ಲಿ ಸಮಾಲೋಚಿಸಿ, ಸರ್ವ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಬಾಧ್ಯಸ್ಥರೊಂದಿಗೆ ಅಂದರೆ 1,533 ಗ್ರಾಮಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ನಿವಾಸಿಗಳೊಂದಿಗೆ ಚರ್ಚಿಸಿ, ಸಾಧಕ ಬಾಧಕ ಅರಿತು ವರದಿ ನೀಡಲು ನಿವೃತ್ತ ಐಎಫ್ಎಸ್‌ ಅಧಿಕಾರಿಸಂಜಯ್‌ ಕುಮಾರ್‌ ಸಮಿತಿ ರಚಿಸಲಾಗಿತ್ತು. ಆ ಸಮಿತಿ ಸದಸ್ಯರು ತಮ್ಮನ್ನು ಔಪಚಾರಿಕವಾಗಿ ಭೇಟಿ ಮಾಡಿದರು. ಆದರೆ ಯಾವುದೇ ಗ್ರಾಮಕ್ಕೆ ಭೇಟಿ ನೀಡಲಿಲ್ಲ. ಜನರೊಂದಿಗೆ ಮಾತುಕತೆ ನಡೆಸಲಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.