Congress ಸರಕಾರ ಕಿತ್ತೂಗೆಯುವುದೇ ನಮ್ಮ ಗುರಿ: ಬಿ.ವೈ.ವಿಜಯೇಂದ್ರ
ಸಿಎಂ ಪರ ನಿಲ್ಲಲು ನಾಯಕರಿಗೆ ಗಾಂಧಿ ಕುಟುಂಬ ಸೂಚನೆ
Team Udayavani, Aug 6, 2024, 6:21 AM IST
ರಾಮನಗರ: ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೂಗೆಯಲು ಪಾದಯಾತ್ರೆ ನಡೆಸುತ್ತಿದ್ದೇವೆಯೇ ಹೊರತು, ನಾವು ಅಧಿಕಾರಕ್ಕೆ ಬರಬೇಕು ಎಂಬ ಕಾರಣದಿಂದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಣ ಲೂಟಿ ಮಾಡುತ್ತಿರುವ ಸರಕಾರವನ್ನು ಕಿತ್ತೂಗೆಯ ಬೇಕು, ಭ್ರಷ್ಟಮುಖ್ಯಮಂತ್ರಿಯನ್ನು ಕೆಳಗಿಳಿಸಿ ಶೋಷಿತ ಸಮುದಾಯಕ್ಕೆ ನ್ಯಾಯ ಕೊಡಬೇಕು ಎಂಬುದೇ ನಮ್ಮ ಪಾದಯಾತ್ರೆಯ ಗುರಿ ಎಂದು ಹೇಳಿದರು.
ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯರ ಪರ ನಿಲ್ಲುವಂತೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ಸುರ್ಜೆವಾಲರಿಗೆ ಗಾಂಧಿ ಕುಟುಂಬ ಹೇಳಿ ಕಳುಹಿಸಿದೆ ಎಂದರು.
ಸರಕಾರ ತೊಲಗಲೇಬೇಕು
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನೆರೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದರು. ಆದರೆ, ಈ ಸರಕಾರ ಒಂದು ಲಕ್ಷ ರೂ. ಸಹ ಕೊಡಲಿಲ್ಲ, ನೆರೆ ಸಂತ್ರಸ್ತ ಉತ್ತರ ಕರ್ನಾಟಕದ ಜನರಿಗೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಆದರೆ, ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನಲ್ಲಿ 100 ಮನೆ ರಾಜ್ಯದಿಂದ ನಿರ್ಮಿಸಿಕೊಡುತ್ತೇವೆ ಎಂದು ಹೇಳಿರುವುದು ಸರಿಯಲ್ಲ. ಕಾಂಗ್ರೆಸ್ ಸರಕಾರವನ್ನು ಬೇಗ ತೊಲಗಿದಷ್ಟು ಅಷ್ಟು ಒಳ್ಳೆಯದು ಎಂದರು.
ಕಾಂಗ್ರೆಸ್ ಹೈಕಮಾಂಡ್ ಸಿದ್ದು ರಾಜೀನಾಮೆ ಪಡೆಯಲಿ: ಯಡಿಯೂರಪ್ಪ
ರಾಮನಗರ: ಮುಡಾ, ವಾಲ್ಮೀಕಿ ನಿಗಮ ಸೇರಿದಂತೆ ಸಾಲು ಸಾಲು ಹಗರಣಗಳಲ್ಲಿ ಮುಳುಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯುವುದನ್ನು ಬಿಟ್ಟು, ಕಾಂಗ್ರೆಸ್ ಹೈಕಮಾಂಡ್ ಅವರ ಪರವಾಗಿ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದರು.
ಚನ್ನಪಟ್ಟಣದಲ್ಲಿ ಸೋಮವಾರ ಪಾದಯಾತ್ರೆ ಯನ್ನುದ್ದೇಶಿ ಮಾತನಾಡಿ, ಭ್ರಷ್ಟ ಸರಕಾರದ ವಿರುದ್ಧ ಆರಂಭಿಸಿರುವ ಈ ಪಾದಯಾತ್ರೆಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.