Bengaluru: ಮಹಿಳೆಗೆ ಮುತ್ತಿಟ್ಟಿದ್ದ ಕ್ಯಾಬ್ ಚಾಲಕ ಬಂಧನ ‌

Team Udayavani, Aug 6, 2024, 9:29 AM IST

Bengaluru: ಮಹಿಳೆಗೆ ಮುತ್ತಿಟ್ಟಿದ್ದ ಕ್ಯಾಬ್ ಚಾಲಕ ಬಂಧನ ‌

ಬೆಂಗಳೂರು: ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಬ್ಬಿ ಚುಂಬಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕ್ಯಾಬ್‌ ಚಾಲಕನೊಬ್ಬನನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರು ದಿಣ್ಣೆ ನಿವಾಸಿ ಸುರೇಶ್‌(25) ಬಂಧಿತ. ಆ.2ರಂದು ಮುಂಜಾನೆ ಸುಮಾರು 5.15ಕ್ಕೆ ಕೃಷ್ಣಾನಂದ ನಗರದಲ್ಲಿ ಈ ಘಟನೆ ನಡೆದಿದೆ.

35 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕನಕಪುರ ತಾಲೂಕು ಸಂತೆಕೋಡಿಹಳ್ಳಿ ಗ್ರಾಮದ ಆರೋಪಿ ಸುರೇಶ್‌ ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದು, ಕೋಣನಕುಂಟೆ ಭಾಗದ ಖಾಸಗಿ ಕಂಪನಿಯಲ್ಲಿನ ಉದ್ಯೋಗಿಗಳನ್ನು ಮನೆಯಿಂದ ಪಿಕಪ್‌ ಮಾಡಿ ಕಂಪನಿಗೆ ಬಿಟ್ಟು, ಸಂಜೆ ಕಂಪನಿಯಿಂದ ಮನೆಗೆ ಬಿಡುವ ಕೆಲಸ ಮಾಡುತ್ತಾನೆ. ಆ.2ರಂದು ಮುಂಜಾನೆ ಮಹಿಳೆಯೊಬ್ಬರು ಕೃಷ್ಣಾನಂದ ನಗರದಲ್ಲಿ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಆರೋಪಿ ಸುರೇಶ್‌, ಹಿಂದಿನಿಂದ ಓಡಿ ಬಂದು ಆಕೆಯನ್ನು ತಬ್ಬಿಕೊಂಡು ಚುಂಬಿಸಲು ಮುಂದಾಗಿದ್ದ. ಈ ವೇಳೆ ಮಹಿಳೆ ತೀವ್ರ ಪ್ರತಿರೋಧವೊಡ್ಡಿ ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದ್ದರು. ಆದರೂ ಬೆನ್ನಟ್ಟಿದ ಆರೋಪಿ ಮತ್ತೆ ಆ ಮಹಿಳೆಯನ್ನು ಹಿಡಿದುಕೊಂಡು ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದ. ಬಳಿಕ ಮಹಿಳೆ ಆತನದಿಂದ ಬಿಡಿಸಿಕೊಂಡು ಮನೆಗೆ ಓಡಿ ಹೋಗಿದ್ದರು. ಈ ದೃಶ್ಯ ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ಬಂಧನ: ಘಟನೆಯಿಂದ ಆಘಾತಕ್ಕೊಳಗಾಗಿದ್ದ ಮಹಿಳೆ ಆರಂಭ ದಲ್ಲಿ ದೂರು ನೀಡರಲಿಲ್ಲ. ಆದರೆ, ಆ.4ರಂದು ಸಂಜೆ ಕೋಣನಕುಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯ ವಿಚಾರಣೆ ಮುಂದುವರಿ ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ತವ್ಯ ಲೋಪ: ಎಎಸ್ಸೈ ಸೇರಿ ಮೂವರ ಅಮಾನತು: ಕ್ಯಾಬ್‌ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ಸಿಸಿ ಕ್ಯಾಮೆರಾ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿ ಸಿದ್ದರು. ಆದರೆ, ಘಟನೆ ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಸಿಬ್ಬಂದಿಯನ್ನು ಅಮಾನತು ಗೊಳಿಸಿ ಡಿಸಿಪಿ ಲೋಕೇಶ್‌ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.