Mangaluru: 10 ಕಡೆ ವ್ಯಾಪಾರ ವಲಯ, 2 ಫುಡ್ ಸ್ಟ್ರೀಟ್
ಪಾಲಿಕೆಯ ಷರತ್ತು ಪಾಲಿಸುವ ವ್ಯಾಪಾರಿಗಳಿಗೆ ಮಾತ್ರ ಗುರುತಿನ ಚೀಟಿ: ಆಪರೇಷನ್ ಸಮರ್ಥಿಸಿದ ಮೇಯರ್
Team Udayavani, Aug 6, 2024, 5:01 PM IST
ಮಹಾನಗರ: ಬೀದಿಬದಿ ವ್ಯಾಪಾರಿಗಳಿಗೆ ಪಾಲಿಕೆಯು 18 ಷರತ್ತುಗಳನ್ನು ವಿಧಿಸಿದ್ದು, ಅವುಗಳಿಗೆ ಒಪ್ಪಿಗೆ ಸೂಚಿಸಿದ 10 ಮಂದಿ ವ್ಯಾಪಾರಸ್ಥರಿಗೆ ಮಾತ್ರವೇ ಗುರುತಿನ ಚೀಟಿ ನೀಡಲಾಗಿದೆ. ಉಳಿದವರಿಗೆ ವಿತರಿಸಲು ಸಾಧ್ಯವಾಗಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ನಗರದಲ್ಲಿ ಅನಧಿಕೃತ ಬೀದಿ ಬದಿ ವ್ಯಾಪಾರಗಳ ತೆರವಿಗೆ ನಡೆಯುತ್ತಿರುವ ಆಪರೇಷನ್ ಟೈಗರ್ ಕಾರ್ಯಾಚರಣೆಯನ್ನು ಸಮರ್ಥಿಸಿದ ಅವರು, ನಗರದಲ್ಲಿ 12 ಕಡೆ ವ್ಯಾಪಾರ ವಲಯ, ಫುಡ್ ಸ್ಟ್ರೀಟ್ ಯೋಜನೆ ಇದ್ದು, ಷರತ್ತುಗಳನ್ನು ಪಾಲಿಸುವವರಿಗೆ ಮಾತ್ರ ಅವಕಾಶ ಎಂದು ಸ್ಪಷ್ಟಪಡಿಸಿದರು.
ಸೋಮವಾರ ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದಿಬದಿ ವ್ಯಾಪಾರವೆಂದರೆ ಕುಳಿತುಕೊಂಡು, ತಳ್ಳುಗಾಡಿ ಅಥವಾ ತಲೆಯಲ್ಲಿ ಹೊತ್ತು ವ್ಯಾಪಾರ. ಇಂತಹ ವ್ಯಾಪಾರಕ್ಕೆ ಪಾಲಿಕೆ ವ್ಯಾಪ್ತಿಯ 10 ಕಡೆಗಳಲ್ಲಿ ವ್ಯಾಪಾರ ವಲಯ ಗುರುತಿಸಲಾಗಿದೆ. ತಿಂಗಳೊಳಗೆ ಅವುಗಳನ್ನು ಹಸ್ತಾಂತರ ಮಾಡಲಾಗುವುದು. ನಗರ ಯೋಜನಾ ಸಮಿತಿಯಲ್ಲಿ ನಿರ್ಧರಿಸಿ ಪರಿಶೀಲನೆ ಮಾಡಿ ಕ್ರಮ ವಹಿಸಲಾಗುವುದು. ನಗರದ ಎರಡು ಪ್ರಮುಖ ರಸ್ತೆಗಳನ್ನು ಗುರುತಿಸಿ ಟೆಂಡರ್ ಮೂಲಕ ‘ಫುಡ್ ಸ್ಟ್ರೀಟ್’ ವ್ಯವಸ್ಥೆ ಕಲ್ಪಿಸಲು ಕೂಡ ಪಾಲಿಕೆ ಮುಂದಾಗಿದೆ ಎಂದು ತಿಳಿಸಿದರು.
10 ಮಂದಿಗೆ ಗುರುತಿನ ಚೀಟಿ
ನಗರದಲ್ಲಿ 2500ರಷ್ಟು ತಳ್ಳುಗಾಡಿ, ಗೂಡಂಗಡಿಗಳಿವೆ. ಒಬ್ಬರ ಹೆಸರಿನಲ್ಲಿ 200ಕ್ಕೂ ಅಧಿಕ ತಳ್ಳುಗಾಡಿಗಳಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಪಾಲಿಕೆ ಮುಂದಿನ ಕ್ರಮ ವಹಿಸಲಿದೆ ಎಂದು ಮೇಯರ್ ಹೇಳಿದರು.
ಪ್ರಧಾನ ಮಂತ್ರಿಗಳ ದೀನ್‌ದಯಾಳ್ ಸ್ವನಿಧಿ ಯೋಜನೆಯಡಿ ಈಗಾಗಲೇ 667 ಮಂದಿ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ಕ್ರಮ ವಹಿಸಲಾಗಿತ್ತು. ಆದರೆ, ವ್ಯಾಪಾರಿಗಳು ಷರತ್ತುಗಳಿಗೆ ಒಪ್ಪದ ಕಾರಣ ಕೇವಲ 10 ಮಂದಿಗೆ ಮಾತ್ರವೇ ಸಾಂಕೇತಿಕವಾಗಿ ಗುರುತಿನ ಚೀಟಿ ನೀಡಲಾಗಿದೆ ಎಂದು ಮೇಯರ್ ಹೇಳಿದರು.
ಗುರುತಿನ ಚೀಟಿ ನೀಡಲಾಗಿಲ್ಲ ಎಂದ ಮೇಲೆ ಪಿಎಂ ಸ್ವನಿಧಿಯಲ್ಲಿ ಸಾಲ ಯಾವ ಆಧಾರದಲ್ಲಿ ಸಾಲ ನೀಡಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಸಾಲ ಪಡೆದ 667 ಮಂದಿಯಲ್ಲಿ 63 ಮಂದಿ ತಳ್ಳುಗಾಡಿ ವ್ಯಾಪಾರಿಗಳು. ಕೆಲವರು ಮನೆಗಳಲ್ಲೇ ಆಹಾರ ತಯಾರಿಸಿ ಮಾರಾಟ ಮಾಡುವವರೂ ಇದ್ದಾರೆ ಎಂದರು. ಉಪ ಮೇಯರ್ ಸುನೀತಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಭರತ್ ಕುಮಾರ್, ಲೋಹಿತ್ ಅಮೀನ್, ಅಧಿಕಾರಿಗಳು ಉಪಸ್ಥಿತರಿದ್ದರು.
ಮಣ್ಣಗುಡ್ಡೆ, ಬಿಜೈ ಪರಿಸರದಲ್ಲಿ ಕಾರ್ಯಾಚರಣೆ
ಸೋಮವಾರವೂ “ಆಪರೇಷನ್ ಟೈಗರ್ ಕಾರ್ಯಾಚರಣೆ’ ನಗರದಲ್ಲಿ ಮುಂದುವರೆದಿದೆ. ಮಣ್ಣಗುಡ್ಡೆ, ಬಿಜೈ, ಕಾಪಿಕಾಡ್ ರಸ್ತೆಯಲ್ಲಿ ಅನಧಿಕೃತ ಅಂಗಡಿಗಳನ್ನು ಪೊಲೀಸ್ ಬಂದೋಬಸ್ತ್ನೊಂದಿಗೆ ಕಾರ್ಯಾಚರಣೆ ನಡೆಸಿ ತೆರವು ಮಾಡಲಾಯಿತು. ಪಾಲಿಕೆಯ ವಲಯ ಆಯುಕ್ತೆ ರೇಖಾ ಜೆ. ಶೆಟ್ಟಿ ನೇತೃತ್ವ ವಹಿಸಿದ್ದರು. ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಚ್ಛತೆಯ ಕೊರತೆ, ಶರಾಬು ಕೂಡಾ ಮಾರಾಟ!
ನಗರದ ಹೃದಭಾಗವಾದ ಕೆಪಿಟಿ ರಸ್ತೆ, ಲೇಡಿಗೋಶನ್, ಸ್ಟೇಟ್‌ಬ್ಯಾಂಕ್, ಕಂಕನಾಡಿ, ಪಂಪ್‌ವೆಲ್, ಸುರತ್ಕಲ್ ಸಹಿತ ವಿವಿಧ ಕಡೆ ಸಾವಿರಾರು ಸಂಖ್ಯೆಯಲ್ಲಿ ಗೂಡಂಗಡಿಗಳು ಕಾರ್ಯಾಚರಿಸುತ್ತಿದ್ದವು. ಇವುಗಳನ್ನು ತೆರವುಗೊಳಿಸಲಾಗಿದ್ದು, ಕಾರ್ಯಾಚರಣೆ ಸಂದರ್ಭದಲ್ಲಿ ಬಹುತೇಕ ಆಹಾರ ಪೂರೈಕೆಯ ಗೂಡಂಗಡಿಗಳು ಸೇರಿದಂತೆ ಬೀದಿ ಬದಿ ವ್ಯಾಪಾರದ ಸ್ಥಳಗಳಲ್ಲಿ ಸ್ವತ್ಛತೆಯಕೊರತೆ ಕಂಡುಬಂದಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ವಿವರಿಸಿದರು. ಕೆಲ ಗೂಡಂಗಡಿಗಳಲ್ಲಿ ಶರಾಬು ಮಾರಾಟ, ಆಹಾರಪದಾರ್ಥಗಳಿಗೆ ಅಜಿನೊಮೋಟೋ ಮೊದಲಾದ ಪದಾರ್ಥಗಳನ್ನು ಉಪಯೋಗಿಸುತ್ತಿರುವುದು ಕಂಡುಬಂದಿದೆ. ನಗರದಲ್ಲಿ ಡೆಂಗ್ಯೂ, ಮಲೇರಿಯಾ ಹೆಚ್ಚುತ್ತಿರುವುದು, ಪಾದಚಾರಿಗಳು, ವಾಹನ ಸವಾರರಿಗೆ ತೊಂದರೆಯಾಗುತ್ತಿರುವುದರಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದು ನಿರಂತರವಾಗಿ ಮುಂದುವರಿಯಲಿದೆ ಎಂದು ಅವರು ಹೇಳಿದರು.
ಷರತ್ತುಗಳಿಗೆ ಒಪ್ಪಿ ಮಾತುಕತೆಗೆ ಬನ್ನಿ
ಫೋನ್ ಇನ್, ಮನಪಾ ಸಾಮಾನ್ಯ ಸಭೆಗಳಲ್ಲಿ ಅನಧಿಕೃತ ಗೂಡಂಗಡಿ, ಬೀದಿಬದಿ ವ್ಯಾಪಾರಿಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ತೀವ್ರ ಆಕ್ಷೇಪವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜು. 29ರಿಂದ ಟೈಗರ್ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಬಗ್ಗೆ ಸಾಕಷ್ಟು ಆಕ್ಷೇಪ, ಟೀಕೆ, ಪ್ರತಿರೋಧ ವ್ಯಕ್ತವಾಗಿದೆ. ಕಾರ್ಯಾಚರಣೆ ಆರಂಭದ ಕೆಲವು ದಿನಗಳ ಮೊದಲು ಬೀದಿಬದಿ ವ್ಯಾಪಾರಿಗಳ ಸಂಘಟನೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಆಪ್ತ ಕಾರ್ಯದರ್ಶಿ ಮೂಲಕ ಮನವಿ ನೀಡಿದ್ದಾರೆ. ಬಳಿಕ ನನ್ನನ್ನು ಯಾರೂ ಭೇಟಿ ಮಾಡಿಲ್ಲ. ಷರತ್ತು ಒಪ್ಪಿ ವ್ಯಾಪಾರ ನಡೆಸುವವರಿಗೆ ಗುರುತಿನ ಚೀಟಿ ನೀಡಲು ಮನಪಾ ಬದ್ಧವಾಗಿದೆ. ಹಾಗಾಗಿ ವ್ಯಾಪಾರಸ್ಥರ ಸಮಿತಿಯ ಪದಾಧಿಕಾರಿಗಳು ಮುಕ್ತವಾಗಿ ಚರ್ಚೆ ಮಾಡಿ ಬಡ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸಲು ಅವಕಾಶ ನೀಡಬೇಕು ಎಂದರು.
ಕೋರ್ಟ್ ಮೂಲಕ ತಡೆಯಾಜ್ಞೆ
ನಗರದ ಹಲವೆಡೆ ಕಟ್ಟಡಗಳಲ್ಲಿರುವ ಅಂಗಡಿ ಮಾಲಕರು ಫುಟ್‌ಪಾತ್‌ಗಳನ್ನು, ರಸ್ತೆಗಳನ್ನು, ವ್ಯಾಪಾರಕ್ಕೆ ಬಳಸುತ್ತಿದ್ದಾರೆ. ಇದನ್ನು ತೆರವುಗೊಳಿಸಲು ನೋಟಿಸ್ ನೀಡಿದೆ. ಆದರೆ, ಅವರು ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದರಿಂದ ಹಿನ್ನಡೆಯಾಗುತ್ತಿದೆ ಎಂದು ಮೇಯರ್ ತಿಳಿಸಿದರು.
ಬೀದಿ ವ್ಯಾಪಾರಕ್ಕೆ ಪ್ರಮುಖ ಷರತ್ತು
- ತಳ್ಳುಗಾಡಿ ವ್ಯಾಪಾರದ ಗುರುತಿನ ಚೀಟಿ, ಪ್ರಮಾಣಪತ್ರ ಕಡ್ಡಾಯ
- ಜೀವನೋಪಾಯಕ್ಕೆ ಬೇರೆ ಸಂಪನ್ಮೂಲ ಹೊಂದಿರಬಾರದು
- ನಿಗದಿತ ಪ್ರದೇಶದಲ್ಲಿ ಮಾತ್ರವೇ ವ್ಯಾಪಾರ. ಶಾಶ್ವತ ಅಂಗಡಿ ನಿರ್ಮಿಸುವಂತಿಲ್ಲ, ಬಾಡಿಗೆ, ಲೀಸ್‌ಗೆ ನೀಡುವಂತಿಲ್ಲ
- ವ್ಯಾಪಾರಸ್ಥ ಅಥವಾ ಕುಟುಂಬಸ್ಥನ ಹೆಸರಲ್ಲಿ ಮಾತ್ರವೇ ಗುರುತಿನ ಚೀಟಿ ಇರಬೇಕು
- ಸಂಚಾರಕ್ಕೆ, ಪಾದಚಾರಿಗಳಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡತಕ್ಕದ್ದು. ಜನದಟ್ಟಣೆ ಜಾಗದಲ್ಲಿ ಅವಕಾಶವಿಲ್ಲ
- ವ್ಯಾಪಾರಿಗೆ ವ್ಯಾಪಾರದ ಸ್ಥಳದ ಮೇಲೆ ಯಾವುದೇ ಮಾಲಿಕತ್ವ, ಹಕ್ಕು ಇರುವುದಿಲ್ಲ.
- ಪಾಲಿಕೆ ನಿಗದಿ ಪಡಿಸುವ ಶುಲ್ಕ ಪಾವತಿಗೆ ಬದ್ಧ/ ವಿಳಂಬವಾದಲ್ಲಿ ದಂಡ ಪಾವತಿಸಬೇಕು
- ವ್ಯಾಪಾರಿ ಮೃತಪಟ್ಟಲ್ಲಿ, ಶಾಶ್ವತ ಅಂಗವಿಕಲತೆಗೆ ಒಳಗಾದಲ್ಲಿ ಕುಟುಂಬದ ಅವಲಂಬಿತ ಒಬ್ಬರಿಗೆ ವ್ಯಾಪಾರ ಅವಕಾಶ.
- ಪಟ್ಟಣ ವ್ಯಾಪಾರ ಸಮಿತಿಯ ಸೂಚನೆ, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು
- ನಿರ್ಬಂಧಿತ ವ್ಯಾಪಾರ ವಲಯ, ನಿಷೇಧಿತ ವಲಯ, ವಾಹನ ದಟ್ಟನೆ ಇರುವಲ್ಲಿ ವ್ಯಾಪಾರ ಮಾಡುವಂತಿಲ್ಲ.
- ಕೋರ್ಟ್ ವಾರ್ಡ್, ಸೆಂಟ್ರಲ್ ಮಾರ್ಕೆಟ್, ಬಂದರು, ಪೋರ್ಟ್, ಕಂಟೋನ್ಮೆಂಟ್, ಮಿಲಾಗ್ರಿಸ್, ಕಂಕನಾಡಿ ವಾರ್ಡ್‌ಗಳ ವಾಣಿಜ್ಯ ಪ್ರದೇಶಗಳಲ್ಲಿ ಅವಕಾಶವಿಲ್ಲ.
- ಸರಕಾರಿ ಕಚೇರಿಗಳು, ಆಸ್ಪತ್ರೆ, ರೈಲು ನಿಲ್ದಾಣ ಆಗಮನ/ನಿರ್ಗಮನ, ರೈಲ್ವೇ ಕ್ರಾಸಿಂಗ್ ಪ್ರದೇಶ, ಬಸ್ ನಿಲ್ದಾಣ ಪ್ರದೇಶ, ಶಿಕ್ಷಣ ಸಂಸ್ಥೆಗಳ ವಠಾರದಲ್ಲಿ ವ್ಯಾಪಾರ ನಿಷೇಧ
- ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ತೊಂದರೆಯಾಗದಂತೆ ವ್ಯಾಪಾರ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.