Bangladesh ದಂಗೆ: ಭಾರತ ಕಟ್ಟೆಚ್ಚರ ; ಗಡಿಯಲ್ಲಿ ಭದ್ರತೆ ಹೆಚ್ಚಿಸಿದ ಬಿಎಸ್‌ಎಫ್
ಶೇಖ್ ಹಸೀನಾ ಆಘಾತದಲ್ಲಿದ್ದಾರೆ: ಸರ್ವಪಕ್ಷ ಸಭೆಗೆ ಸರಕಾರ ಮಾಹಿತಿ
Team Udayavani, Aug 7, 2024, 6:55 AM IST
ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿರುವಂತೆಯೇ ಭಾರತ ಕಟ್ಟೆಚ್ಚರದಲ್ಲಿದೆ. ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಬಾಂಗ್ಲಾದಲ್ಲಿರುವ ಭಾರತೀಯರ ಸುರಕ್ಷೆಗಾಗಿ ಭಾರತ ಸರಕಾರ ಅಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ.
ಬಾಂಗ್ಲಾದ ಪರಿಸ್ಥಿತಿ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದ್ದು, ಅಲ್ಲಿರುವ ಭಾರತೀಯರ ರಕ್ಷಣೆಗಾಗಿ ರಾಯಭಾರ ಕಚೇರಿ ಯೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಕೇಂದ್ರ ಹೇಳಿದೆ. ಅಲ್ಲದೆ ಗಡಿ ಭಾಗದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಗಡಿ ಪ್ರದೇಶದ ಜನರ ಜತೆ ಬಿಎಸ್‌ಎಫ್ ಮುಖ್ಯಸ್ಥರು ಮಂಗಳವಾರ ಮಾತುಕತೆ ನಡೆಸಿದ್ದಾರೆ.
20 ಸಾವಿರ ಮಂದಿಯ ರಕ್ಷಣೆಗೆ ಸಿದ್ಧತೆ
ಬಾಂಗ್ಲಾದಲ್ಲಿರುವ ಸುಮಾರು 20 ಸಾವಿರ ಮಂದಿ ಭಾರತೀಯರ ರಕ್ಷಣೆಗೆ ಸರಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲಿರುವ ವಿದ್ಯಾರ್ಥಿಗಳ ಜತೆಗೆ ಸರಕಾರ ನಿರಂತರ ಸಂಪರ್ಕದಲ್ಲಿದ್ದು, ಅಲ್ಲಿರುವ ಹಿಂದೂ ಅಲ್ಪಸಂಖ್ಯಾಕರ ರಕ್ಷಣೆಗೆ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿ ಸಿಕ್ಕಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.
ಗಡಿ ಪ್ರದೇಶದಲ್ಲಿ ಭದ್ರತೆ ಹೆಚ್ಚಳ: ಗಡಿ ದಾಟಿ ಬಾಂಗ್ಲಾದೇಶೀಯರು ಭಾರತ ಪ್ರವೇಶಿಸುವ ಸಾಧ್ಯತೆ ಇರುವ ಕಾರಣ ಗಡಿ ಭದ್ರತಾ ಪಡೆಯು ಗಡಿಯಲ್ಲಿ ಭದ್ರತೆಯನ್ನು ಗರಿಷ್ಠ ಮಟ್ಟಕ್ಕೇರಿಸಿದೆ. ರಜೆಯಲ್ಲಿರುವ ಬಿಎಸ್‌ಎಫ್ ಸಿಬಂದಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದ್ದು, 4,096 ಕಿ.ಮೀ. ಉದ್ದದ ಗಡಿಯಲ್ಲಿ ಕಟ್ಟುನಿಟ್ಟಾದ ಕಾವಲಿಗೆ ಸೂಚಿಸಲಾಗಿದೆ. ಮಂಗಳವಾರ ಗಡಿ ಪ್ರದೇಶಕ್ಕೆ ಭೇಟಿ ನೀಡಿದ ಬಿಎಸ್‌ಎಫ್ ಮುಖ್ಯಸ್ಥರು, ಭದ್ರತಾ ಸ್ಥಿತಿಯ ಪರಿಶೀಲನೆ ನಡೆಸಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ್ದಾರೆ.
ಗಡಿಯಲ್ಲಿ ಇರುವವರಿಗೆ ಕಟ್ಟೆಚ್ಚರ: ಭಾರತ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಅನಗತ್ಯವಾಗಿ ಓಡಾಡದಂತೆ ಸ್ಥಳೀಯರಿಗೆ ಬಿಎಸ್‌ಎಫ್ ಸೂಚನೆ ನೀಡಿದೆ. ಬಾಂಗ್ಲಾ ಆದ್ಯಂತ ಗಲಭೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರ ಸುರಕ್ಷೆಗಾಗಿ ಈ ಸೂಚನೆ ನೀಡಲಾಗಿದೆ. ಪಶ್ಚಿಮ ಬಂಗಾಲ, ತ್ರಿಪುರಾ, ಮೇಘಾಲಯ, ಅಸ್ಸಾಂ ಹಾಗೂ ಮಿಜೋರಾಮ್ ರಾಜ್ಯಗಳು ಬಾಂಗ್ಲಾದೊಂದಿಗೆ ಗಡಿ ಹಂಚಿಕೊಂಡಿದ್ದು, ಈ ರಾಜ್ಯಗಳಲ್ಲಿ ಎಲ್ಲ ಘಟಕಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಬಿಎಸ್‌ಎಫ್ ಹೇಳಿದೆ.
ರಾಜ್ಯಸಭೆಯಲ್ಲೂ ಚರ್ಚೆ: ಬಾಂಗ್ಲಾದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾವಿಸಲಾಗಿದೆ. ವಿದೇಶಾಂಗ ಸಚಿವ ಜೈಶಂಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತೀಯರ ಸುರಕ್ಷೆ ಬಗ್ಗೆ ಕ್ರಮ ಕೈಗೊಂಡಿರುವ ಕುರಿತು ಮಾಹಿತಿ ನೀಡಿದ್ದಾರೆ.
ರೈಲುಸೇವೆ ಬಂದ್, ವಿಮಾನ ಸಂಚಾರ ಮುಂದುವರಿಕೆ: ಭಾರತ ಮತ್ತು ಬಾಂಗ್ಲಾದೇಶದ ನಡುವಣ ಎಲ್ಲ ರೈಲು ಸಂಚಾರವನ್ನು ಭಾರತ ಸರಕಾರ ರದ್ದು ಮಾಡಿದೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದಿಲ್ಲಿಯಿಂದ ಬಾಂಗ್ಲಾ ರಾಜಧಾನಿ ಢಾಕಾಕ್ಕೆ ಮಂಗಳವಾರ ಸಂಜೆಯಿಂದ ವಿಮಾನ ಸೇವೆಯನ್ನು ಪುನಾರಂಭಿಸಿದೆ. ವಿಸ್ತಾರ ಸಂಸ್ಥೆಯು ಬುಧವಾರದಿಂದ ಸಂಚಾರ ಆರಂಭಿಸುವುದಾಗಿ ಹೇಳಿದೆ.
ಮಧ್ಯಾಂತರ ಸರಕಾರಕ್ಕೆ ಯೂನುಸ್ ನೇತೃತ್ವ
ಬಾಂಗ್ಲಾದೇಶದ ಸಂಸತ್ತನ್ನು ವಿಸರ್ಜಿಸುವುದಾಗಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಪ್ರಕಟಿಸಿದ್ದಾರೆ. ಈ ಬಗ್ಗೆ ಪ್ರಮುಖ ಪಕ್ಷಗಳ ಜತೆಗೆ ಚರ್ಚಿಸಿ ಅವರು ತೀರ್ಮಾನ ಕೈಗೊಂಡಿದ್ದಾರೆ. ಮಧ್ಯಾಂತರ ಸರಕಾರದ ನೇತೃತ್ವ ವಹಿಸಲು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್‌ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಅದಕ್ಕೆ ಅವರು ಸಮ್ಮತಿಸಿದ್ದಾರೆ.
ದೋವಲ್ ಜತೆ ಅಮಿತ್ ಶಾ ಸಭೆ
ದೇಶದಲ್ಲಿ ಭದ್ರತೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಅಲ್ಲದೆ ಅಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ರಕ್ಷಣೆಗಾಗಿ ಸರಕಾರ ಸಕಲ ವ್ಯವಸ್ಥೆ ಕೈಗೊಂಡಿದೆ.
ಸರ್ವ ಪಕ್ಷ ಸಭೆ
ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮಂಗಳವಾರ ದಿಲ್ಲಿಯಲ್ಲಿ ಸರ್ವಪಕ್ಷ ಸಭೆ ನಡೆಸಲಾಗಿದೆ. ಬಾಂಗ್ಲಾದ ಪರಿಸ್ಥಿತಿ ಹಾಗೂ ಇದರಲ್ಲಿ ಪಾಕ್ ಕೈವಾಡದ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಈ ವೇಳೆ ಸಚಿವ ಜೈಶಂಕರ್ ಹೇಳಿದ್ದಾರೆ. ಸದ್ಯ ಶೇಖ್ ಹಸೀನಾ ಅವರು ಆಘಾತದಲ್ಲಿದ್ದಾರೆ.
ಅವರು ಚೇತರಿಸಿಕೊಳ್ಳುವವರೆಗೆ ಕಾಲಾವಕಾಶ ನೀಡಿ, ಅನಂತರ ಅವರೊಂದಿಗೆ ಸರಕಾರ ಮಾತುಕತೆ ನಡೆಸಲಿದೆ. ಬಳಿಕ ಮುಂದಿನ ಕ್ರಮ ಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸರ್ವ ಪಕ್ಷಗಳಿಗೆ ಜೈಶಂಕರ್ ಮಾಹಿತಿ ನೀಡಿ ದ್ದಾರೆ. ಹಸೀನಾ ಕೊನೆಯ ಕ್ಷಣದಲ್ಲಿ ಭಾರತ ಸರಕಾರವನ್ನು ಸಂಪರ್ಕಿಸಿ, ತತ್‌ಕ್ಷಣವೇ ತಾನು ಅಲ್ಲಿಗೆ ಬರುತ್ತಿದ್ದೇನೆ ಎಂದು ಕೋರಿಕೆ ಸಲ್ಲಿಸಿ ದರು ಎಂದು ಜೈಶಂಕರ್ ತಿಳಿಸಿದ್ದಾರೆ. ಬಾಂಗ್ಲಾ ವಿಷಯದಲ್ಲಿ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಪಕ್ಷ ಒಕ್ಕೂಟ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.