ವಿಗ್ರಹ ನಕಲಿ ಅಲ್ಲ ಎಂದು ಪ್ರಮಾಣ ಮಾಡಲಿ:ಮುನಿಯಾಲು ಉದಯಕುಮಾರ್‌ ಶೆಟ್ಟಿ ಸವಾಲು

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ.

Team Udayavani, Aug 7, 2024, 10:10 AM IST

ವಿಗ್ರಹ ನಕಲಿ ಅಲ್ಲ ಎಂದು ಪ್ರಮಾಣ ಮಾಡಲಿ ಮುನಿಯಾಲು ಉದಯಕುಮಾರ್‌ ಶೆಟ್ಟಿ ಸವಾಲು

ಕಾರ್ಕಳ: ಬೈಲೂರಿನ ಉಮಿಕ್ಕಳ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮ ವಿಗ್ರಹ ನಕಲಿ ಅಲ್ಲ. ಅಸಲಿ ಕಂಚಿನದ್ದೆ ಎಂದು ದೇವಸ್ಥಾನ, ದೈವಸ್ಥಾನ ಅಥವಾ ಪರಶುರಾಮ ಬೆಟ್ಟದ ಮೇಲೆ ಎಲ್ಲಿ ಬೇಕಾದರೂ ಶಾಸಕ ವಿ. ಸುನಿಲ್‌ಕುಮಾರ್‌ ಬಂದು ಪ್ರಮಾಣ ಮಾಡಲಿ ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯಕುಮಾರ್‌ ಶೆಟ್ಟಿ ಹೇಳಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ್ಕಳದ ಚರಿತ್ರೆಯಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಅಂದುಕೊಂಡಿರಲಿಲ್ಲ. ಬಾಯಿ ಚಪಲಕ್ಕೆ ಮಾತನಾಡುವವರಿಗೆ ಉತ್ತರ ನೀಡುವುದು ಪ್ರಜಾಪ್ರಭುತ್ವದಲ್ಲಿ ಅನಿವಾರ್ಯ. ನಕಲಿ ಮೂರ್ತಿ ಸ್ಥಾಪಿಸಿ ಧರ್ಮದ ವಿಷಯದಲ್ಲಿ ಇಡೀ ರಾಜ್ಯಕ್ಕೆ ಕಳಂಕ ತಂದಿದ್ದಾ ರೆ. ಆಗಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದರು.

ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ
ಏನೇನೋ ಮಾತನಾಡಿದ್ದಾರೆ. ನಾನು ಧರಿಸಿದ್ದ ಉಡುಗೆಯ ಬಗ್ಗೆಯೂ ಮಾತನಾಡಿದ್ದಾರೆ. ಇನ್ನು ಮುಂದೆ ನಾನು ಬೇಕಾದರೆ ಅವರಲ್ಲಿ ಯಾವ ರೀತಿಯ ಉಡುಗೆ ಧರಿಸಬೇಕೆಂದು ಕೇಳಿಯೇ ಉಡುತ್ತೇನೆ ಎಂದರು.

ಕಾರ್ಕಳದಲ್ಲಿ ಜಾತಿಗಳ ನಡುವೆ ವೈಷಮ್ಯದ ಬೀಜ ಬಿತ್ತಿ ಕಂದಕ ಮೂಡಿಸಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ಒಳ್ಳೆಯ ಸಾಮಾಜಿಕ ಕಾರ್ಯ ನಡೆಸಲು. ಸುನಿಲ್‌ ಕುಮಾರ್‌ ಅವರ ಹಾಗೆ ಅಧಿಕಾರ, ದುಡ್ಡು ಗಳಿಸಲು ಅಲ್ಲ. ಇವರು ಕಾಂಗ್ರೆಸ್‌ನವರಿಗೆ ಮಾಡಿದ ಅನ್ಯಾಯವನ್ನು ಎಳೆಎಳೆಯಾಗಿ ಹೇಳಬಲ್ಲೆ ಎಂದರು.

ಈಗ ಬಿಜೆಪಿಯವರ ಬಾಯಿಯಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಲಿ ಹಾಗೂ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಹೆಸರು ಬರುತ್ತಿರುವುದು ಒಳ್ಳೆಯ ವಿಷಯ. ಆದರೆ ಅದೇ ಚುನಾವಣೆಯ ಸಂದರ್ಭ ಅವರ ವಿರುದ್ಧ ಏನೇನೋ ಮಾತನಾಡಿರುವುದನ್ನು ಮರೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಇಡೀ ಪ್ರತಿಮೆಯೇ ನಕಲಿ: ಶುಭದ ರಾವ್‌ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌ ಮಾತನಾಡಿ, ಬೆಂಗಳೂರಿನಿಂದ ಪರಶುರಾಮನ ಮೂರ್ತಿಯ ಭಾಗಗಳನ್ನು ಪೊಲೀಸರು ವಶಕ್ಕೆ ಪಡೆದು ತಂದ ಬಳಿಕ ಇಡೀ ಪ್ರತಿಮೆಯೇ ನಕಲಿಯಾಗಿದೆ ಎಂದು
ಜಗಜ್ಜಾಹೀರಾಗಿದೆ. ಬೆಂಗಳೂರಿನಲ್ಲಿ ಪರಶುರಾಮನ ಮೂರ್ತಿಯ ಕಾಲು ಸೇರಿದಂತೆ ಸೊಂಟದ ಕೆಳಗಿನ ಎಲ್ಲ ಭಾಗಗಳು ದೊರೆತಿರುವುದರಿಂದ ಬೆಟ್ಟದ ಮೇಲೆ ಈಗ ಇರುವ ಭಾಗವೂ ನಕಲಿ ಎಂದು ಸಾಬೀತಾಗಿದೆ.

ಶಾಸಕರು ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಹೇಳಿದ್ದ ಸುಳ್ಳು ಜಗತ್ತಿಗೆ ಗೊತ್ತಾಗಿದೆ. ಕಾರ್ಕಳ ಶಾಸಕರು ಕ್ಷಮಾಪಣೆ ಕೇಳಿ ಪ್ರಾಯಶ್ಚಿತ್ತದ ಸಲುವಾಗಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದರು. ಬಿಪಿನ್‌ಚಂದ್ರಪಾಲ್‌ ನಕ್ರೆ, ವಿವೆಕಾನಂದ ಶೆಣೈ, ದಿನೇಶ್‌, ಅಜಿತ್‌ಕುಮಾರ್‌ ಹೆಗ್ಡೆ, ತಾರಾನಾಥ ಕೋಟ್ಯಾನ್‌, ದಿನೇಶ್‌ ಶೆಟ್ಟಿ, ಶಶಿಕಲಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.