Disqualified; ಭಾರತಕ್ಕೆ ಭಾರೀ ಶಾಕ್!!; ಚಿನ್ನದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅನರ್ಹ
Team Udayavani, Aug 7, 2024, 12:17 PM IST
ಪ್ಯಾರಿಸ್ : ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಿಂದ ವಿನೇಶ್ ಫೋಗಟ್ ಅನರ್ಹಗೊಂಡಿರುವ ಬಗ್ಗೆ ವರದಿಯಾಗಿದ್ದು, ಫೈನಲ್ ನಲ್ಲಿ ಬಂಗಾರದ ಪದಕದ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ನಿರೀಕ್ಷಿಸಲಾಗದ ಭಾರೀ ಆಘಾತ ನೀಡಿದೆ.
ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಂಡಿದೆ. ರಾತ್ರಿಯಿಡೀ ತಂಡವು ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರು ಇಂದು ಬೆಳಿಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ಹೆಚ್ಚು ತೂಕವನ್ನು ಹೊಂದಿದ್ದರು. ಈ ಸಮಯದಲ್ಲಿ ತಂಡದಿಂದ ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದೆ.
ಭಾರತ ತಂಡವು ವಿನೇಶ್ ಅವರ ಖಾಸಗಿತನವನ್ನು ಗೌರವಿಸುವಂತೆ ವಿನಂತಿಸುತ್ತದೆ. ತಂಡ ಇನ್ನು ಕೈಯಲ್ಲಿರುವ ಸ್ಪರ್ಧೆಗಳ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಲು ಬಯಸುತ್ತದೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಪ್ರಕಟಣೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.