Fashion Gold ವಂಚನೆ ಪ್ರಕರಣ:19.60 ಕೋಟಿ ರೂ. ಸೊತ್ತು ಜಪ್ತಿ
Team Udayavani, Aug 7, 2024, 10:46 PM IST
ಕಾಸರಗೋಡು: ಫ್ಯಾಶನ್ ಗೋಲ್ಡ್ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಪ್ರಸ್ತುತ ಸಂಸ್ಥೆಗೆ ಸೇರಿದ 19.60 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದೆ.
ಫ್ಯಾಶನ್ ಗೋಲ್ಡ್ ಗ್ರೂಪ್ ಕಂಪೆನಿಯ ಚೇರ್ಮನ್, ಮಂಜೇಶ್ವರದ ಮಾಜಿ ಶಾಸಕ ಎಂ.ಸಿ. ಖಮರುದ್ದೀನ್, ಆಡಳಿತ ನಿರ್ದೇಶಕ ಟಿ.ಕೆ. ಪೂಕೋಯ ತಂಙಳ್ ಸಹಿತ ಪ್ರಕರಣದಲ್ಲಿ ಆರೋಪಿಗಳಾಗಿರುವವರ ವಿರುದ್ಧ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 168 ಪ್ರಕರಣಗಳು ದಾಖಲಾಗಿವೆ. ಅವುಗಳ ತನಿಖೆಯನ್ನು ಕ್ರೈಂ ಬ್ರಾಂಚ್ ಕೈಗೆತ್ತಿಕೊಂಡಿತ್ತು. ಅದರ ಆಧಾರದಲ್ಲಿ ಇ.ಡಿ. ತನಿಖೆ ಆರಂಭಿಸಿತ್ತು. ಮುಂದಿನ ಕ್ರಮದ ಅಂಗವಾಗಿ ಇ.ಡಿ. ಸೊತ್ತುಗಳ ಜಪ್ತಿಗೆ ಮುಂದಾಗಿದೆ.
ಉತ್ತಮ ಲಾಭಾಂಶ ನೀಡುವ ಭರವಸೆ ನೀಡಿ ಹಲವರಿಂದ ಷೇರು ಮೂಲಕ ಠೇವಣಿ ಸಂಗ್ರಹಿಸಿ ಬಳಿಕ ಅವರನ್ನು ವಂಚಿಸಿದ್ದಾಗಿ ಆರೋಪಿಸಿ ನೀಡಲಾದ ದೂರಿನಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿತ್ತು. ಒಟ್ಟು 20 ಕೋಟಿ ರೂ. ವಂಚನೆ ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುವುದು ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.