Udupi: ಬೈಕ್ ಕಳವು ಪ್ರಕರಣ; ಆರೋಪಿ ಬಂಧನ
Team Udayavani, Aug 7, 2024, 8:43 PM IST
ಉಡುಪಿ: ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬ್ರಹ್ಮಾವರದ ನಿವಾಸಿಯಾದ ಪ್ರಕಾಶ್ ನಾಯಕ್ ಎಂಬವನನ್ನು ಪೊಲೀಸರು ಬಂಧಿಸಿ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಪಾಸಣೆ ನಡೆಸಿದ್ದು, ಈ ವೇಳೆ ಮಣ್ಣಪಳ್ಳ ಎಂಜೆಸಿ ಕಾಲೇಜು ಬಳಿ ಬರುತ್ತಿದ್ದ ವ್ಯಕ್ತಿಯು ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದ್ದುದ ಕಂಡು ಅನುಮಾನವುಂಟಾಗಿ ಪೋಲೀಸರು ಆತನನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆತನ ಪೂರ್ವಪರ ಪರೀಕ್ಷಿಸಿದ ಪೊಲೀಸರಿಗೆ ಆತನ ಬಳಿ ಈ ಹಿಂದೆ ಕಳವು ಮಾಡಿ ತಂದ ಬೈಕ್ ಇರುವುದು ಕಂಡುಬಂದಿದೆ. ಆ ಕೂಡಲೇ ಆತನನ್ನು ಹಾಗೂ ಬೈಕ್ ಅನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ದೇವರಾಜ್ ಟಿ.ವಿ., ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ, ಸಿಬಂದಿಗಳಾದ ಇಮ್ರಾನ್, ಪ್ರಸನ್ನ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.