MUDA Scam: ಸರಕಾರ-ರಾಜಭವನದ ಮಧ್ಯೆ ಗಾಢ ಮೌನ
ಮೈಸೂರು ಪ್ರವಾಸದಿಂದ ಏಕಾಏಕಿ ಬೆಂಗಳೂರಿಗೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Aug 8, 2024, 6:26 AM IST
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಸರಕಾರ ಮತ್ತು ರಾಜಭವನದ ಮಧ್ಯೆ ಸೃಷ್ಟಿಯಾಗಿರುವ ಬಿಕ್ಕಟ್ಟು ಕಳೆದ 2 ದಿನಗಳಿಂದ “ಗಾಢ ಕುದಿ ಮೌನ’ಕ್ಕೆ ಜಾರಿದ್ದು, ಮೈಸೂರು ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಬುಧವಾರ ಏಕಾಏಕಿ ಬೆಂಗಳೂರಿಗೆ ಆಗಮಿಸಿ ಕಡತ ವಿಲೇವಾರಿಯಲ್ಲಿ ತೊಡಗಿಕೊಂಡರು.
ಸೋಮವಾರ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ದರು. ಬುಧವಾರ ಬೆಳಗ್ಗೆ 10ಕ್ಕೆ ಸಿಎಂ ಕಚೇರಿಯಿಂದ ಅಧಿಕೃತ ಪತ್ರಿಕಾಗೋಷ್ಠಿಯ ಆಹ್ವಾನ ನೀಡಲಾಗಿತ್ತು. ಆದರೆ ಅದನ್ನು ರದ್ದುಗೊಳಿಸಿದ ಅವರು 12ಕ್ಕೆ ತುರ್ತಾಗಿ ಬೆಂಗಳೂರಿಗೆ ಆಗಮಿಸಿದ್ದು, ಮಹತ್ವದ ಕಡತ ವಿಲೇವಾರಿ ನಡೆಸಿದ್ದಾರೆ. ಗುರುವಾರ ಬೆಳಗ್ಗೆ 10ಕ್ಕೆ ಮತ್ತೆ ಮೈಸೂರಿಗೆ ತೆರಳಲಿ
ದ್ದಾರೆ. ಅಧಿವೇಶನ ಪ್ರಾರಂಭವಾದಾಗಿನಿಂದ ಮಹತ್ವದ ಕಡತಗಳು ಬಾಕಿ ಇದ್ದವು. ಅವುಗಳ ವಿಲೇವಾರಿ ತುರ್ತಾಗಿ ನಡೆಸಬೇಕಿದ್ದರಿಂದ ಸಿದ್ದರಾಮಯ್ಯ ವಾಪಸ್ ಆಗಿದ್ದರು ಎಂದು ತಿಳಿದು ಬಂದಿದೆ.
ನಿಗೂಢ ನಡೆ
ಸಿದ್ದರಾಮಯ್ಯ ವಿರುದ್ಧ ಬಂದ ದೂರು ಆಧರಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೋ, ಬೇಡವೋ ಎಂಬ ವಿಚಾರದಲ್ಲಿ ರಾಜಭವನದ ನಡೆ ಮಾತ್ರ ಇನ್ನೂ ನಿಗೂಢವಾಗಿದೆ. ರಾಜ್ಯಪಾಲರು ಕಾನೂನು ತಜ್ಞರ ಜತೆಗೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಏನೇ ಆದರೂಸಂಸತ್ ಕಲಾಪ ಮುಕ್ತಾಯವಾಗುವವರೆಗೆ ರಾಜಭವನ ಯಾವುದೇ ನಿರ್ಧಾರ ತೆಗೆದುಕೊಳ್ಳಲಾರದು ಎಂಬ ವಾದವೂ ಇದೆ.
ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ನೀಡಿದರೆ ಕಾನೂನು ಹೋರಾಟ: ಪರಮೇಶ್ವರ್
ಹೊಸಪೇಟೆ: ಸಿಎಂ ವಿರುದ್ಧ ಮುಡಾ ಹಗರಣ ಸೃಷ್ಟಿಸಲಾಗಿದೆ. ರಾಜಭವನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ವೇಳೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ನೀಡಿದರೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಪತ್ರಕರ್ತರ ಜತೆ ಮಾತನಾಡಿ, ಕೇಂದ್ರ ಸರಕಾರ ರಾಜ್ಯಪಾಲರ ಮೇಲೆ ಒತ್ತಡ ಹೇರುತ್ತಿದೆ. ಪ್ರಾಸಿಕ್ಯೂಶನ್ ನೀಡಲು ಈ ಪ್ರಕರಣದಲ್ಲಿ ಮೆಟಿರಿಯಲ್ ಇಲ್ಲ. ಒಂದು ವೇಳೆ ನೀಡಿದರೆ ರಾಜಕಾರಣ ಎಂಬುದು ಸಾಬೀತಾಗಲಿದೆ. ಇದಕ್ಕಾಗಿ ನಾವು ಕಾನೂನು ಹೋರಾಟ ನಡೆಸಲು ಸಿದ್ಧರಾಗಿದ್ದೇವೆ. ಅಕ್ರಮವಾಗಿ ನಮ್ಮ ಜಮೀನು ಸ್ವಾ ಧೀನ ಮಾಡಿಕೊಳ್ಳಲಾಗಿದೆ ಎಂದು ಮುಡಾಕ್ಕೆ ಸಿಎಂ ಅವರ ಪತ್ನಿ ಕೇಳಿಕೊಂಡಿದ್ದಾರೆ. ಇದಕ್ಕಾಗಿ ಮುಡಾದಿಂದ ಸೈಟ್ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.