Localbody Reservation: ಸ್ಥಳೀಯಾಡಳಿತ ಸಂಸ್ಥೆಗಳು, ಜನಪ್ರತಿನಿಧಿಗಳು ಸಕ್ರಿಯರಾಗಲಿ


Team Udayavani, Aug 8, 2024, 6:00 AM IST

vidhana-Soudha

ಕಳೆದೊಂದು ವರ್ಷಕ್ಕೂ ಅಧಿಕ ಸಮಯದಿಂದ ನಾನಾ ಕಾರಣಗಳಿಂದಾಗಿ ಮುಂದೂಡುತ್ತಲೇ ಬರಲಾಗಿದ್ದ ರಾಜ್ಯದ 61 ನಗರಸಭೆ, 123 ಪುರಸಭೆ ಮತ್ತು 117 ಪಟ್ಟಣ ಪಂಚಾಯತ್‌ಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರ ಕೊನೆಗೂ ಅಧಿಸೂಚನೆ ಹೊರಡಿಸಿದೆ.

ಈ ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಚುನಾಯಿತ ಜನಪ್ರತಿನಿಧಿ ಗಳಿದ್ದರೂ ಮೀಸಲಾತಿ ನಿಗದಿ ವಿಚಾರವಾಗಿ ಕಾನೂನು ಸಮರ, ಒಬಿಸಿ ವರ್ಗದವರಿಗೆ ಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್‌ ಹೊರಡಿಸಿದ್ದ ಆದೇಶ, ಈ ಆದೇಶದ ಅನುಷ್ಠಾನಕ್ಕಾಗಿ ರಾಜ್ಯ ಸರಕಾರ ಆಯೋಗ ರಚಿಸಿದುದು, ಇವೆಲ್ಲದರ ನಡುವೆ ಎದುರಾದ ಚುನಾವಣೆಗಳು… ಹೀಗೆ ಸುದೀರ್ಘ‌ ವಿಳಂಬದ ಬಳಿಕ ಕೊನೆಗೂ ರಾಜ್ಯ ಸರಕಾರ ಅಳೆದೂ ತೂಗಿ ಮೀಸಲಾತಿ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.

ರಾಜ್ಯ ಸರಕಾರದ ಈ ನಿರ್ಧಾರದಿಂದ ಈ ಎಲ್ಲ ಸ್ಥಳೀಯಾಡಳಿತ ಮತ್ತು ನಗರಾಡಳಿತ ಸಂಸ್ಥೆಗಳು ಶೀಘ್ರದಲ್ಲಿಯೇ ಚುನಾಯಿತ ಜನಪ್ರತಿನಿಧಿಗಳು ಆಡಳಿತ ಚುಕ್ಕಾಣಿಯನ್ನು ಮರಳಿ ಹಿಡಿಯಲಿದ್ದಾರೆ. ಇದರಿಂದ ಈ ಸಂಸ್ಥೆಗಳಲ್ಲಿದ್ದ ಅಧಿಕಾರಿ ವರ್ಗದ ಕಾರುಬಾರಿಗೆ ಒಂದಿಷ್ಟು ಕಡಿವಾಣ ಬೀಳಲಿದೆ.ಇವೆಲ್ಲದಕ್ಕಿಂತ ಮುಖ್ಯವಾಗಿ ಅಧಿಕಾರ ವಿಕೇಂದ್ರೀಕರಣದ ನೈಜ ಆಶಯ ಈಡೇರಿದಂತಾಗಲಿದೆ.

ಸ್ಥಳೀಯಾಡಳಿತ ಸಂಸ್ಥೆಗಳ ಹಾಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಇನ್ನು ಒಂದು ವರ್ಷವಷ್ಟೇ ಬಾಕಿ ಉಳಿದಿರುವುದರಿಂದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಬಾಕಿ ಉಳಿದಿರುವ ಸಮಯದಲ್ಲಿ ತಮ್ಮ ಶಕ್ತಿಮೀರಿ ಕಾರ್ಯನಿರ್ವಹಿಸುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಯತ್ನ ನಡೆಸಬೇಕು.

ನಗರಾಡಳಿತ ಮತ್ತು ಸ್ಥಳೀಯಾಡಳಿಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡಿದ್ದರೂ ಚುನಾವಣೆಗೆ ದಿನಾಂಕವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಆದಷ್ಟು ಶೀಘ್ರ ಚುನಾವಣ ದಿನಾಂಕವನ್ನು ಪ್ರಕಟಿಸಿ, ಚುನಾಯಿತ ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರವಹಿಸಿಕೊಳ್ಳುವಂತಾಗಲು ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು.

ಚುನಾವಣ ದಿನ ನಿಗದಿಗೆ ವಿನಾಕಾರಣ ಇನ್ನಷ್ಟು ವಿಳಂಬ ಮಾಡದೆ ಆದಷ್ಟು ಕ್ಷಿಪ್ರಗತಿಯಲ್ಲಿ ಈ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಚುನಾಯಿತ ಜನಪ್ರತಿನಿಧಿಗಳು ಅಧಿಕಾರ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಅಷ್ಟು ಮಾತ್ರವಲ್ಲದೆ ಮೀಸಲಾತಿ ನಿಗದಿ ವಿಷಯವಾಗಿ ಸುದೀರ್ಘ‌ ಕಾನೂನು ಹೋರಾಟದ ಸಂದರ್ಭದಲ್ಲಿ ಹೈಕೋರ್ಟ್‌ನ ಸ್ಪಷ್ಟ ನಿರ್ದೇಶನದ ಬಳಿಕ ರಾಜ್ಯ ಸರಕಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಪ್ರಕಟಿಸಿರುವ ಮೀಸಲಾತಿ ಪಟ್ಟಿಯ ವಿರುದ್ಧ ಆಕಾಂಕ್ಷಿಗಳು ಮತ್ತೆ ಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆ ಇರುವುದರಿಂದ ಸರಕಾರ ಈ ವಿಷಯದಲ್ಲಿ ಇನ್ನಷ್ಟು ಕಾಲಹರಣ ಮಾಡುವುದು ತರವಲ್ಲ.

ರಾಜ್ಯದ ಕೆಲವು ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯ ನಾಗರಿಕರಿಗಂತೂ ತಮ್ಮ ವಾರ್ಡ್‌ನ ಸದಸ್ಯ ಯಾರು ಎಂಬುದು ಕೂಡ ಮರೆತುಹೋಗಿರುವ ಪರಿಸ್ಥಿತಿ ಇದೆ. ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿಗಳ ಆಡಳಿತವಿದ್ದುದರಿಂದ ಈ ಸಂಸ್ಥೆಗಳ ಸದಸ್ಯರು ಕೂಡ ಹಿನ್ನೆಲೆಗೆ ಸರಿಯುವಂತಾಗಿತ್ತು. ತೀವ್ರತೆರನಾದ ಸಮಸ್ಯೆ ಬಾಧಿಸಿದಾಗಲಷ್ಟೇ ಆಗೊಮ್ಮೆ ಈಗೊಮ್ಮೆ ಎಂಬಂತೆ ಕಾಣಿಸಿಕೊಳ್ಳುತ್ತಿದ್ದ ಸದಸ್ಯರು ಈಗ ಮತ್ತೆ ಸಕ್ರಿಯವಾಗಿ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಲು ಸಜ್ಜಾಗಬೇಕು.

ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದು ಚುನಾಯಿತ ಪ್ರತಿನಿಧಿಗಳು ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರ ಸೂತ್ರ ಹಿಡಿಯುತ್ತಿದ್ದಂತೆಯೇ ಸದಸ್ಯರು ತಮ್ಮ ವಾರ್ಡ್‌ಗಳ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ದಿಸೆಯಲ್ಲಿ ಕಾರ್ಯೋನ್ಮುಖರಾಗಬೇಕು. ವರ್ಷದ ಅವಧಿಯಲ್ಲಿ ಮತ್ತೆ ಚುನಾವಣೆ ಎದುರಾಗಲಿರುವುದರಿಂದ ಹಾಲಿ ಚುನಾಯಿತ ಸದಸ್ಯರಿಗೆ ಬಾಕಿ ಉಳಿದಿರುವ ಅವಧಿ ಅಗ್ನಿ ಪರೀಕ್ಷೆಯೇ ಸರಿ.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

PM-yojana

Education: ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಬಡ ಪ್ರತಿಭಾನ್ವಿತರಿಗೆ ವರದಾನ

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.