Uorfi Javed: ಅವರು ನನ್ನ ನಗ್ನ ಫೋಟೋಗಳನ್ನು ಪೋಸ್ಟ್ ಮಾಡಿದ್ದರು.. ಆ ಘಟನೆ ನೆನೆದ ಉರ್ಫಿ
Team Udayavani, Aug 8, 2024, 12:40 PM IST
ಮುಂಬಯಿ: ನಟಿ ಕಂ ಮಾಡೆಲ್ ಉರ್ಫಿ ಜಾವೇದ್ (Uorfi Javed) ಇಂಟರ್ ನೆಟ್ ಸದಾ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಹೆಚ್ಚಾಗಿ ತನ್ನ ಚಿತ್ರ ವಿಚಿತ್ರ ಕಾಸ್ಟ್ಯೂಮ್ ಗಳಿಂದಲೇ ಅವರು ಟ್ರೆಂಡ್‌ನಲ್ಲಿರುತ್ತಾರೆ.
ಕಿರುತೆರೆ, ರಿಯಾಲಿಟಿ ಶೋಗಳಲ್ಲಿ ಆರಂಭಿಕವಾಗಿ ಕಾಣಿಸಿಕೊಂಡ ಉರ್ಫಿ ಇಂದು ಬಿಟೌನ್ ಫ್ಯಾಷನ್ ಲೋಕದಲ್ಲಿ ಮುಂದುವರೆದಿದ್ದಾರೆ. ಮಾಡೆಲಿಂಗ್ ಲೋಕದಲ್ಲಿ ಕಾಸ್ಟ್ಯೂಮ್ ಮೂಲಕವೇ ಸುದ್ದಿಯಾಗುವ ಉರ್ಫಿ, ಅದೇ ಕಾಸ್ಟ್ಯೂಮ್‌ಗಳಿಂದಲೇ ಅನೇಕ ಸಲ ಟ್ರೋಲ್‌ಗಳಿಗೆ ಆಹಾರವಾಗಿದ್ದಾರೆ.
ಟ್ರೋಲ್‌ಗಳಿಗೆ ಕ್ಯಾರೇ ಮಾಡದೇ, ದಿಟ್ಟತನದಿಂದಲೇ ಅವುಗಳನ್ನು ಎದುರಿಸಿದ್ದಾರೆ. ಸಂದರ್ಶನವೊಂದರಲ್ಲಿ ಉರ್ಫಿ ಹಿಂದಿನ ಕರಾಳ ಘಟನೆಯೊಂದರ ಬಗ್ಗೆ ಮಾತನಾಡಿದ್ದಾರೆ.
ಸಾಕ್ಷಿ ಶಿವದಾಸನಿ ಮತ್ತು ನೈನಾ ಭಾನ್ ಅವರೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಅವರು, “ನಾನು ಯಾರೊಂದಿಗೂ ಈ ಬಗ್ಗೆ ಹೆಚ್ಚು ಮಾತನಾಡಿಲ್ಲ. ಇದು ಕೋವಿಡ್ ಬಳಿಕ ನಡೆದ ಘಟನೆ. ಯಾರೋ ನನ್ನ ಸ್ನ್ಯಾಪ್ ಚಾಟ್ ಖಾತೆಯನ್ನು ಹ್ಯಾಕ್ ಮಾಡಿ, ಮೆಮೋರಿಸ್ ನಲ್ಲಿದ್ದ ನನ್ನ ನಗ್ನ ಫೋಟೋಗಳನ್ನು ತೆಗೆದಿದ್ದರು. ಇದು ನನ್ನ ತಪ್ಪು, ನಾನು ಆ ಬಗ್ಗೆ ಹೆಚ್ಚು ಗಮನ ಹರಿಸಲಿಲ್ಲ. ಆ ಫೋಟೋಗಳನ್ನು ಯಾರೋ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದರು. ನಾನು ತಕ್ಷಣ ಅದನ್ನು ಡಿಲೀಟ್ ಮಾಡಿದ್ದೆ. ಆದರೆ ಆದಾಗಲೇ ಆ ಫೋಟೋವನ್ನು ಸ್ಕ್ರೀನ್ ಶಾಟ್ ತೆಗೆದು ವೈರಲ್ ಮಾಡಲಾಗಿತ್ತು” ಎಂದು ಉರ್ಫಿ ಹೇಳಿದ್ದಾರೆ.
ಇತ್ತೀಚೆಗೆ ಉರ್ಫಿ ಏಕ್ತಾ ಕಪೂರ್ ಅವರ ʼಲವ್ ಸೆಕ್ಸ್ ಔರ್ ಧೋಖಾ 2ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದಲ್ಲದೆ ಎಂಟಿವಿಯ ಸ್ಪ್ಲಿಟ್ಸ್ವಿಲ್ಲಾ X5 (Splitsvilla X5) ನಲ್ಲಿ ‘ಮಿಸ್ಚೀಫ್ ಮೇಕರ್’ ಆಗಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.