Independence day: ಲಾಲ್ ಬಾಗ್‌ನಲ್ಲಿ 216ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಆ. 8 ರಿಂದ 19ರವರೆಗೆ ಆಯೋಜನೆ, ಈ ಬಾರಿ ಯಾವ ವಿಷಯಾಧಾರಿತ, ಪ್ರದರ್ಶನದಲ್ಲಿ ಎಷ್ಟು ಹೂಗಳ ಬಳಸಲಾಗಿದೆ ನೀವೇ ಓದಿ ?
Team Udayavani, Aug 8, 2024, 6:55 PM IST
ಬೆಂಗಳೂರು: ತೋಟಗಾರಿಕೆ ಇಲಾಖೆಯು ಲಾಲ್ ಬಾಗ್ ನ ಗಾಜಿನ ಮನೆಯ ಸಸ್ಯ ತೋಟದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಆಯೋಜಿಸಿದ್ದ “ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್” ವಿಷಯಾಧಾರಿತ 216ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾತನಾಡಿ ಭಾರತ ಸ್ವಾತಂತ್ರ್ಯೋತ್ಸವ ಅಂಗವಾಗಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಆ. 8 ರಿಂದ 19 ವರೆಗೆ ಏರ್ಪಡಿಸಲಾಗಿದೆ.
ಬಾಬಾ ಸಾಹೇಬ್ ಅಂಬೇಡ್ಕರ್‌ರ ಜೀವನ ಸಾಧನೆ, ದೇಶಕ್ಕೆ ನೀಡಿದ ಕೊಡುಗೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಬೌದ್ಧ ಮತ ಸ್ವೀಕಾರ, ಸಂವಿಧಾನ ರಚನಾ ಸಮಿತಿಯಲ್ಲಿ ಪಾತ್ರ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಆಧರಿಸಿದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳ ಅರಿಯಲು ಅಪೂರ್ವ ಅವಕಾಶ ಒದಗಿಸಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ ಎಂದರು.
ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರು ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳ ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದು ಎಂದರು.
30 ಲಕ್ಷ ಹೂವುಗಳ ಬಳಕೆ:
ತೋಟಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 12 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳ ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.