D.K.Shivakumar ಎಷ್ಟು ಪುಣ್ಯ ಗಳಿಸಿದ್ದಾರೆ ಅನ್ನೋದು ಗೊತ್ತಿದೆ: ಎಂಎಲ್‌ಸಿ ಸಿ.ಟಿ.ರವಿ

ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತುಟಿ ಬಿಚ್ಚುತ್ತಿಲ್ಲ

Team Udayavani, Aug 9, 2024, 6:20 AM IST

Ravi

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಷ್ಟು ಪುಣ್ಯ ಗಳಿಸಿದ್ದಾರೆ ಅನ್ನುವುದು ಗೊತ್ತಿದೆ. ಆ ಪುಣ್ಯದಿಂದಾಗಿಯೇ ತಿಹಾರ್‌ ಜೈಲಿಗೆ ಹೋಗಿದ್ದು. ಇನ್ನೂ ಹಲವು ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪತ್ರಿಕಾಗೋಷ್ಠಿಯಲ್ಲಿ ವಾಗ್ಧಾಳಿ ನಡೆಸಿದರು.

ನಾವು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಭ್ರಷ್ಟಾಚಾರದ ಪರ ನಾವು ನಿಂತಿಲ್ಲ. ನಮ್ಮ ಕಡೆ ಬೊಟ್ಟು ತೋರಿರುವಶಿವಕುಮಾರ್‌ ಭ್ರಷ್ಟಾಚಾರಕ್ಕೆ ಲೈಸನ್ಸ್‌ ಸಿಕ್ಕಿದೆ ಎಂದುಕೊಂಡಿದ್ದಾರೆ. ಹೀಗಾಗಿ ಭ್ರಷ್ಟಾಚಾರ ಮಾಡಿದವರೆಲ್ಲರೂ ಒಂದಾಗಿದ್ದಾರೆ. ನಮ್ಮಿಂದ ಹಗರಣ ಆಗಿದ್ದರೆ ತನಿಖೆ ಯಾಕೆ ಮಾಡುತ್ತಿಲ್ಲ. ನಮ್ಮ ವಿರುದ್ಧ ಸಾಕ್ಷ್ಯಾ ಧಾರ ಇದ್ದರೆ ಬ್ಲಾಕ್‌ ಮೇಲ್‌ ಮಾಡಿ ಹೆದರಿಸಬೇಡಿ, ತನಿಖೆ ಮಾಡಿ ಶಿಕ್ಷೆ ಕೊಡಿಸಲಿ ಎಂದು ಪಾಪ ವಿಮೋಚನೆಗಾಗಿ ಪಾದಯಾತ್ರೆ ಎಂಬ ಡಿಕೆಶಿ ಹೇಳಿಕೆಗೆ ಸವಾಲು ಹಾಕಿದರು.

ಖರ್ಗೆ ಸೌಂಡ್‌ ಲೆಸ್‌,ರಾಹುಲ್‌ ವಾಯ್ಸ ಲೆಸ್‌: ಸಿ.ಟಿ.ರವಿ ವ್ಯಂಗ್ಯ
ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಹಾಗೂ ಎಸ್‌ಸಿ/ಎಸ್‌ಟಿ ಮೀಸಲು ಹಣ ಬೇರೆ ಉದ್ದೇಶಕ್ಕೆ ಬಳಸಿರುವ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ತುಟಿ ಬಿಚ್ಚುತ್ತಿಲ್ಲ. ಖರ್ಗೆ ಸೌಂಡ್‌ ಲೆಸ್‌, ರಾಹುಲ್‌ ವಾಯ್ಸ ಲೆಸ್‌ ಆಗಿದ್ದಾರೆ ಎಂದು ಸಿ.ಟಿ.ರವಿ ಕುಟುಕಿದರು.

ಮಲ್ಲಿಕಾರ್ಜುನ ಖರ್ಗೆ ಅವರೇ, ರಾಹುಲ್‌ ಗಾಂಧಿ  ಅವರೇ ಮಾತನಾಡಿ. ಅಲ್ಪಸಂಖ್ಯಾಕರ ಇಲಾಖೆಯಲ್ಲೂ ಲೂಟಿ ನಡೆದಿದೆ. ಕಾರ್ಮಿಕ ಇಲಾಖೆಯಲ್ಲೂ ಆರೋಗ್ಯ ತಪಾಸಣೆ ಹೆಸರಲ್ಲಿ ಹಣ ತೆಗೆಯಲಾಗಿದೆ. ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಯಲ್ಲಿ ಟೆಂಡರ್‌ ಹಗರಣ ನಡೆದಿದ್ದರೂ ಕೈ ಹೈಕಮಾಂಡ್‌ ಮಾತನಾಡದಂತಾಗಿದೆ ಎಂದರು.

“ಪ್ರೀತಂಗೌಡರನ್ನು ರಕ್ಷಿಸಿಕೊಂಡು ಮೈತ್ರಿ ಮುಂದುವರಿಸುತ್ತೇವೆ’
ಸಾವಿರಾರು ಜನ ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಎರಡೂ ಪಕ್ಷದ ಕಾರ್ಯಕರ್ತರ ಪೈಕಿ ಕೆಲವು ಜನರಷ್ಟೇ ಕೈ ಕೈ ಮಿಲಾಯಿಸಿದ್ದು, ಅವರವರ ನಾಯಕರ ಬಗ್ಗೆ ಅಭಿಮಾನದಿಂದ ಘೋಷಣೆ ಕೂಗಿದ್ದಾರೆ ಅಷ್ಟೇ. ಆ ರೀತಿಯ ಘಟನೆ ಏನೂ ನಡೆದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಸಮರ್ಥಿಸಿಕೊಂಡರು.

ಪ್ರೀತಂಗೌಡ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ನಮ್ಮ ಎನ್‌ಡಿಎ ನಾಯಕರು. ನಮ್ಮಲ್ಲಿ ಅವರಿಗೆ ಇರಬೇಕಾದ ಗೌರವ ಇದ್ದೇ ಇದೆ. ಪ್ರೀತಂಗೌಡ ಭವಿಷ್ಯದ ಬಿಜೆಪಿ ನಾಯಕರಾಗಿದ್ದು, ಅವರನ್ನು ರಕ್ಷಣೆ ಮಾಡಿಕೊಂಡು ಕುಮಾರಸ್ವಾಮಿ ಅವರಿಗೂ ಗೌರವ ನೀಡಿ ನಮ್ಮ ಮೈತ್ರಿ ಮುಂದುವರಿಸುತ್ತೇವೆ.

ವೇದಿಕೆಗೆ ಬಹಳ ಜನ ಹತ್ತಿಲ್ಲ. ವೇದಿಕೆ ದೊಡ್ಡದಿರಲಿಲ್ಲ. ಎಲ್ಲರಿಗೂ ಗೌರವ ಇದೆ. ರಾಜಕಾರಣದಲ್ಲಿ ವರ್ತಮಾನದಲ್ಲಿದ್ದು, ಭವಿಷ್ಯದ ಬಗ್ಗೆ ಯೋಚನೆ ಮಾಡಿ ರಾಜಕಾರಣ ಮಾಡಬೇಕು. ನಿನ್ನೆಯ ಬಗ್ಗೆ ಅಲ್ಲ. ಊಹಾತ್ಮಕ ಪ್ರಶ್ನೆಗೆ ಉತ್ತರಿಸಲ್ಲ ಎಂದು ಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.