ED ಕಾರ್ಯಶೈಲಿ ಸುಧಾರಣೆಗೆ ಸುಪ್ರೀಂ ನಿರ್ದೇಶನ ಸಮುಚಿತ


Team Udayavani, Aug 9, 2024, 6:20 AM IST

Supreme Court

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯ ಮಹತ್ತರ ಹೊಣೆಗಾರಿಕೆಯನ್ನು ಹೊಂದಿರುವ ಜಾರಿ ನಿರ್ದೇಶನಾಲಯ (ಇ.ಡಿ.)ದ ಕಾರ್ಯವೈಖರಿಯ ಕುರಿತಂತೆ ಈಗ ಸುಪ್ರೀಂ ಕೋರ್ಟ್‌ ಒಂದಿಷ್ಟು ಗರಂ ಆಗಿದ್ದು, ಪ್ರಕರಣಗಳ ತನಿಖೆ ಮತ್ತು ವಿಚಾರಣ ಕ್ರಮದಲ್ಲಿ ಸೂಕ್ತ ಸುಧಾರಣೆಗಳನ್ನು ತರುವಂತೆ ತಾಕೀತು ಮಾಡಿದೆ. ಇ.ಡಿ. ಸುತ್ತ ಹತ್ತು ಹಲವು ವಿವಾದಗಳು, ಆರೋಪಗಳು ಸುತ್ತಿಕೊಂಡಿರುವಂತೆಯೇ ಸುಪ್ರೀಂ ಕೋರ್ಟ್‌ನ ಈ ನಿರ್ದೇಶನ ಅತ್ಯಂತ ಸಮುಚಿತ ಮತ್ತು ಬಹಳಷ್ಟು ಮಹತ್ವಪೂರ್ಣದ್ದಾಗಿದೆ.

ಇ.ಡಿ. ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದರೂ ಸ್ಥಾಪನೆಯಾದಾಗಿನಿಂದಲೂ ಈ ಸ್ವಾಯತ್ತ ಸಂಸ್ಥೆಯನ್ನು ಕೇಂದ್ರದಲ್ಲಿನ ಆಡಳಿತಾರೂಢ ಸರಕಾರಗಳು ದುರುಪಯೋಗಪಡಿಸಿಕೊಂಡು ತನ್ನ ವಿರೋಧಿಗಳ ವಿರುದ್ಧ ಛೂ ಬಿಡುತ್ತಿದೆ ಎಂಬ ಆರೋಪ ಇಂದು-ನಿನ್ನೆಯದೇನಲ್ಲ. ಇತ್ತೀಚಿನ ವರ್ಷಗಳಲ್ಲಂತೂ ಇ.ಡಿ. ಭಾರೀ ಸದ್ದು ಮಾಡುತ್ತಿದ್ದು, ಇದರ ವಿರುದ್ಧದ ಆರೋಪಗಳು ಕೂಡ ಹೆಚ್ಚುತ್ತಲೇ ಇವೆ. ಇವೆಲ್ಲದರ ನಡುವೆ ಸುಪ್ರೀಂ ಕೋರ್ಟ್‌ ನಿರ್ದಿಷ್ಟ ಪ್ರಕರಣವೊಂದರ ವಿಚಾರಣೆ ವೇಳೆ ಇ.ಡಿ.ಯ ತನಿಖೆ ಮತ್ತು ವಿಚಾರಣ ಕಾರ್ಯವಿಧಾನದ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದ್ದೇ ಅಲ್ಲದೆ ಒಟ್ಟಾರೆ ಕಾರ್ಯಶೈಲಿಯಲ್ಲಿ ಒಂದಿಷ್ಟು ಬದಲಾವಣೆ ಮಾಡಿಕೊಳ್ಳುವಂತೆ ನೇರವಾಗಿ ತಾಕೀತು ಮಾಡಿರುವುದು ಗಮನಾರ್ಹ.

ಛತ್ತೀಸ್‌ಗಢದ ಉದ್ಯಮಿಯೋರ್ವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಇ.ಡಿ. ಕಾರ್ಯವಿಧಾನದ ಬಗೆಗೆ ಕೆಲವು ಮಹತ್ವದ ಅಂಶಗಳನ್ನು ಉಲ್ಲೇಖೀಸಿ ಈ ನಿರ್ದೇಶನ ನೀಡಿದೆ. ಕಳೆದ 10 ವರ್ಷಗಳ ಅವಧಿಯಲ್ಲಿ ಇ.ಡಿ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ 5,000 ಪ್ರಕರಣಗಳನ್ನು ದಾಖಲಿಸಿದೆ. ಈ ಪೈಕಿ ಕೇವಲ 40 ಪ್ರಕರಣಗಳಲ್ಲಷ್ಟೇ ಆರೋಪ ಸಾಬೀತಾಗಿ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಸಂಸತ್‌ಗೆ ಮಾಹಿತಿ ನೀಡಿತ್ತು. ಇದೇ ಅಂಶವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಪೀಠ ಪ್ರಸ್ತಾವಿಸಿ, ಇ.ಡಿ. ಬೇಕಾಬಿಟ್ಟಿಯಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿಕೊಳ್ಳುತ್ತಿದೆಯೇ ಅಥವಾ ಈ ಪ್ರಕರಣಗಳ ತನಿಖೆ ಮತ್ತು ವಿಚಾರಣೆಯಲ್ಲಿ ಏನಾದರೂ ಲೋಪದೋಷಗಳಿವೆಯೇ ಎಂದು ಇ.ಡಿ.ಯನ್ನು ಪ್ರಶ್ನಿಸಿದೆ. ಅಷ್ಟು ಮಾತ್ರವಲ್ಲದೆ ಜಾರಿ ನಿರ್ದೇಶನಾಲಯ ದಾಖಲಿಸುವ ಪ್ರತಿಯೊಂದು ಪ್ರಕರಣ ಕೂಡ ಆರ್ಥಿಕತೆಗೆ ಸಂಬಂಧಿಸಿದ್ದಾಗಿದ್ದರಿಂದ ಇದು ನೇರವಾಗಿ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ.

ಪ್ರತಿಯೊಂದು ಪ್ರಕರಣ ದಾಖಲಿಸುವಾಗ ಸೂಕ್ತ ಪರಿಶೀಲನೆ ನಡೆಸಿ ಮುಂದಿನ ಹೆಜ್ಜೆ ಇಡಬೇಕು. ಯಾರ್ಯಾರದೋ ಹೇಳಿಕೆಯನ್ನು ಆಧರಿಸಿ ಅಕ್ರಮ ಹಣ ವರ್ಗಾವಣೆಯಂತಹ ಗಂಭೀರ ಆರ್ಥಿಕ ಅಪರಾಧ ಪ್ರಕರಣಗಳನ್ನು ದಾಖಲಿಸುವುದು ಸರಿಯಲ್ಲ. ಯಾವುದೇ ಪ್ರಕರಣವನ್ನು ದಾಖಲಿಸಿಕೊಂಡ ಬಳಿಕ ಆರೋಪವನ್ನು ಸಾಬೀತುಪಡಿಸಲು ಅಗತ್ಯವಾದ ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕುವುದು ಇ.ಡಿ.ಯ ಹೊಣೆಗಾರಿಕೆಯಾಗಿದೆ. ಇದು ಬಿಟ್ಟು ಕೇವಲ ಪ್ರಕರಣಗಳನ್ನು ದಾಖಲಿಸುವುದಕ್ಕಷ್ಟೇ ಇ.ಡಿ. ಅಧಿಕಾರಿಗಳು ಸೀಮಿತವಾಗಬಾರದು. ದಾಖಲಾದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸವನ್ನು ಇ.ಡಿ. ಅಧಿಕಾರಿಗಳು ಮಾಡಬೇಕು ಎಂದು ನ್ಯಾಯಪೀಠ ಕಿವಿಮಾತು ಹೇಳಿರುವುದು ಒಟ್ಟಾರೆ ಇ.ಡಿ.ಯ ಕರ್ತವ್ಯ ನಿರ್ವಹಣೆ, ಕಾರ್ಯಚರಣ ವಿಧಾನಗಳಲ್ಲಿ ಗಮನಾರ್ಹ ಸುಧಾರಣೆಗಳನ್ನು ತರುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್‌ನ ಈ ನಿರ್ದೇಶನ ಕೇಂದ್ರ ಸರಕಾರಕ್ಕೂ ಅದರ ಉತ್ತರದಾಯಿತ್ವವನ್ನು ನೆನಪಿಸಿಕೊಟ್ಟಿದೆ. ಅಕ್ರಮ ಹಣ ವರ್ಗಾವಣೆ, ಅಕ್ರಮ ಸಂಪತ್ತಿನ ಸಕ್ರಮ ಮತ್ತಿತರ ಆರ್ಥಿಕ ಅಪರಾಧಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇ.ಡಿ. ಸ್ವತಂತ್ರವಾಗಿ ಕಾರ್ಯನಿರ್ವಹಿಸುವಂತಾಗಲು ಅದಕ್ಕೆ ಅಗತ್ಯ ಮೂಲ­ಸೌಕರ್ಯ, ಸಹಕಾರ ನೀಡುವುದು ಕೇಂದ್ರ ಸರಕಾರದ ಜವಾಬ್ದಾರಿಯಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.