Udupi ಶಂಕಿತ ಇಲಿ ಜ್ವರದಿಂದ ಪರ್ಕಳ ನಿವಾಸಿ ಸಾವು
Team Udayavani, Aug 8, 2024, 11:33 PM IST
ಉಡುಪಿ: ಇಲ್ಲಿನ ಪರ್ಕಳ ನಿವಾಸಿಯೊಬ್ಬರು ಶಂಕಿತ ಇಲಿಜ್ವರದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜ್ವರಕ್ಕಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಆ. 6ರ ರಾತ್ರಿ ಮೃತಪಟ್ಟಿದ್ದಾರೆ.ವೈದ್ಯರು ನೀಡಿರುವ ವರದಿಯಂತೆ ಅವರು ಶಂಕಿತ ಇಲಿಜ್ವರ ಸಹಿತ ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಳೆಗಾಲದಲ್ಲಿ ಕರಾವಳಿ ಭಾಗದಲ್ಲಿ ಇಲಿಗಳ ಮಲಮೂತ್ರಗಳ ಮೂಲಕ ವ್ಯಾಪಕವಾಗಿ ಹರಡುವ ಇಲಿಜ್ವರಕ್ಕೆ ಕಳೆದ ಜನವರಿಯಿಂದ ಇದುವರೆಗೆ ಮೂವರು ಸಾವನ್ನಪ್ಪಿದ್ದಾರೆ.
ಜನವರಿಯಲ್ಲಿ ನಿಟ್ಟೂರಿನ ಶಾಲಾ ಬಾಲಕನ ಬಳಿಕ ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ವೃದ್ಧರು ಹಾಗೂ ಸಾಯಬರಕಟ್ಟೆಯಲ್ಲಿ ಪುರುಷರೊಬ್ಬರು ರೋಗಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಇಲಿಜ್ವರದ 149 ವರದಿಯಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ನಾಗರತ್ನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi Ganesh: ಹಿರಿಯ ನಟ ಡೆಲ್ಲಿ ಗಣೇಶ್ ಇನ್ನಿಲ್ಲ
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Toxic: ಯಶ್ ಚಿತ್ರಕ್ಕೆ ಬಂದ ಹಾಲಿವುಡ್ ನ ಜೆ.ಜೆ.ಪೆರ್ರಿ
Final Verdict: ಬುಲ್ಡೋಜರ್ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್ ಅಂತಿಮ ತೀರ್ಪು
BGT: ಭಾರತ ವಿರುದ್ದದ ಮೊದಲ ಟೆಸ್ಟ್ ಗೆ ಆಸೀಸ್ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.