Pakkinahadi-ಕಂಚುಗೋಡು ರಸ್ತೆ ತುರ್ತು ದುರಸ್ತಿಯಾಗಲಿ
ಮಣ್ಣಿನ ರಸ್ತೆ ಹದಗೆಟ್ಟು ಸಂಚಾರ ದುಸ್ತರ
Team Udayavani, Aug 9, 2024, 2:26 PM IST
ತ್ರಾಸಿ: ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ನಾಲ್ಕನೇ ವಾರ್ಡಿನ ಪಕ್ಕಿನಹಾಡಿ – ಕಂಚುಗೋಡು ಸಂಪರ್ಕಿಸುವ ಮಣ್ಣಿನ ರಸ್ತೆಯು ನಿರಂತರ ಮಳೆಗೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಜನ ಸಂಕಷ್ಟಪಡುವಂತಾಗಿದೆ. ಮಳೆ ನೀರು ಪೂರ್ತಿ ರಸ್ತೆಯಲ್ಲಿಯೇ ಹರಿದು ಹೋಗುತ್ತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಗಂಗೊಳ್ಳಿ – ತ್ರಾಸಿ ಮುಖ್ಯ ರಸ್ತೆಯ ಕೊಡಪಾಡಿ ಬಸ್ ನಿಲ್ದಾಣ ಬಳಿಯಿಂದ ಪಕ್ಕಿನಹಾಡಿಗೆ ಸಂಚರಿಸುವ ರಸ್ತೆ ಇದಾಗಿದ್ದು, ಸುಮಾರು 1 ಕಿ.ಮೀ. ದೂರದವರೆಗೆ ಮಣ್ಣಿನ ರಸ್ತೆಯಿದ್ದು, ಈಗ ಮಳೆಗೆ ತುಂಬಾ ಹಾನಿಯಾಗಿದೆ.
ಹದಗೆಟ್ಟ ರಸ್ತೆ
ರಸ್ತೆಯ ಎರಡೂ ಕಡೆಗಳಲ್ಲಿ ಚರಂಡಿಯೇ ಇಲ್ಲದ ಕಾರಣ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದ ರಸ್ತೆಯ ಮಧ್ಯೆಯೇ ಮಳೆ ನೀರು ಹರಿದು ಹೋಗಿ, ಉದ್ದಕ್ಕೂ ಹೊಂಡಗಳು ಸೃಷ್ಟಿಯಾಗಿವೆ. ಇನ್ನು ಅಲ್ಲಲ್ಲಿ ನೀರು ನಿಂತು, ಗುಂಡಿಗಳಿರುವುದು ತಿಳಿಯದಾಗಿದೆ. ಇದರಿಂದ ಸವಾರರು ಪ್ರಯಾಸಪಡುವಂತಾಗಿದೆ.
ಪಂಚಾಯತ್‌ಗೆ ಮನವಿ
ಇನ್ನು ಇಲ್ಲಿನ ರಸ್ತೆ ಅವ್ಯವಸ್ಥೆಯಿಂದ ಬೇಸತ್ತ ಗ್ರಾಮಸ್ಥರು, ಗುಜ್ಜಾಡಿ ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದು, ಶಾಲೆಗೆ ಹೋಗುವ ಮಕ್ಕಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ರಸ್ತೆಯನ್ನು ದುರಸ್ತಿ ಮಾಡಿ, ಮಳೆ ನೀರು ಹರಿದು ಹೋಗಲು ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಿ. ಈ ಮಣ್ಣಿನ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎನ್ನುವುದಾಗಿ ಪಕ್ಕಿನಹಾಡಿ ಭಾಗದ ಗ್ರಾಮಸ್ಥರು ಗ್ರಾ.ಪಂ.ಗೆ ಮನವಿ ಮಾಡಿಕೊಂಡಿದ್ದಾರೆ.
ಮಳೆಗಾಲ ಮುಗಿಯಲಿ
ಪಕ್ಕಿನಹಾಡಿ- ಕಂಚುಗೋಡು ರಸ್ತೆಯ ಮಳೆಗೆ ಹದಗೆಟ್ಟ ಬಗ್ಗೆ ಗಮನಕ್ಕೆ ಬಂದಿದ್ದು, ಅಲ್ಲಿನ ವಾರ್ಡ್ ಸದಸ್ಯರಲ್ಲಿಯೂ ಮಾತನಾಡಿದ್ದೇನೆ. ಮಳೆ ಕಡಿಮೆಯಾದ ಕೂಡಲೇ ಪಂಚಾಯತ್‌ನಿಂದ ಮಳೆ ನೀರು ಸರಾಗ ಹರಿದು ಹೋಗಲು ವ್ಯವಸ್ಥೆ ಮಾಡಿಕೊಡಲಾಗುವುದು. ಇದಲ್ಲದೆ ಸದ್ಯ ಸಂಚರಿಸಲು ಅನುಕೂಲವಾಗುವಂತಹ ವ್ಯವಸ್ಥೆ ಮಾಡಲಾಗುವುದು. ರಸ್ತೆ ಅಭಿವೃದ್ಧಿಗೆ ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಾಗುವುದು.
– ತಮ್ಮಯ್ಯ ದೇವಾಡಿಗ, ಅಧ್ಯಕ್ಷರು, ಗುಜ್ಜಾಡಿ ಗ್ರಾ.ಪಂ.
20ಕ್ಕೂ ಮಿಕ್ಕಿ ಮನೆ
15-20 ಮನೆಯವರು ಇದೇ ರಸ್ತೆಯನ್ನೇ ಆಶ್ರಯಿಸಿದ್ದಾರೆ. ಶಾಲೆಗೆ ಹೋಗುವ ಮಕ್ಕಳು, ಪೇಟೆ, ಕೆಲಸಕ್ಕೆ ಹೋಗುವ ಮಹಿಳೆಯರು, ಹಾಲಿನ ಡೇರಿಗೆ ಹೋಗುವ ಊರವರೆಲ್ಲ ನಿತ್ಯ ಈ ಕೆಸರುಮಯ ರಸ್ತೆಯಲ್ಲಿಯೇ ನಡೆದುಕೊಂಡು ಹೋಗುತ್ತಿ ದ್ದಾರೆ. ಮಳೆ ಬರುವಾಗಲಂತೂ ನಡೆದುಕೊಂಡು ಹೋಗಲು ಸಾಧ್ಯವಿಲ್ಲದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
MUST WATCH
ಹೊಸ ಸೇರ್ಪಡೆ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.