BSY 20 ಹಗರಣಗಳ ಪಾಲುದಾರ: 22 ಕಂಪೆನಿಗಳ ಗಣಿಗಾರಿಕೆಗೆ ಎಚ್ಡಿಕೆ ಅಕ್ರಮ ಅನುಮತಿ
Team Udayavani, Aug 10, 2024, 12:08 AM IST
ಮೈಸೂರು: ಯಡಿಯೂರಪ್ಪ ಅವರಿಗೆ ಮಾನ ಮರ್ಯಾದೆ ಇದೆಯೇ? 82ನೇ ವಯಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿ, ದೋಷಾರೋಪಣ ಪಟ್ಟಿ ಸಿದ್ಧವಾಗಿದೆ. ಅವರೂ ಆ. 10ರೊಳಗೆ ನಾನು ರಾಜೀನಾಮೆ ನೀಡಬೇಕು ಎಂದು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು.
ಜನಾಂದೋಲನ ಸಮಾವೇಶದಲ್ಲಿ ಮಾತನಾಡಿ, ಯಡಿಯೂರಪ್ಪ ಅವರೇ 18-20 ಹಗರಣಗಳಲ್ಲಿ ಪಾಲುದಾರರಾಗಿದ್ದಾರೆ. ಅವರ ಮಗ ವಿಜಯೇಂದ್ರ ಅನೇಕ ಹಗರಣಗಳಲ್ಲಿ ಸಿಕ್ಕಿ ಬಿದ್ದಿದ್ದಾರೆ ಎಂದು ಅವರ ಪಕ್ಷದ ಹಿರಿಯ ನಾಯಕ ಯತ್ನಾಳ್ ಅವರೇ ಹೇಳಿದ್ದಾರೆ ಎಂದರು.
ಕುಮಾರಸ್ವಾಮಿ ಜಂತಕಲ್ ಸೇರಿದಂತೆ 22 ಕಂಪೆನಿಗಳಿಗೆ ಗಣಿಗಾರಿಕೆಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದಾರೆ. ಅಶೋಕ್ ಅವರು ಬಿ.ಎಂ. ಕಾವಲ್ ಹಗರಣದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ಆದರೆ ನಾನೇನಾದರೂ ಈ ರೀತಿ ತಪ್ಪು ಮಾಡಿದ್ದೇನಾ? ಚೆಕ್ ಮೂಲಕ ಹಣ ಪಡೆದಿದ್ದೇನಾ? ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದರು.
ದ್ವೇಷದ ರಾಜಕಾರಣದಲ್ಲಿ
ಗೌಡರ ಕುಟುಂಬ ಮುಂದು
ಶೋಷಿತರು ಅಧಿಕಾರ ಮಾಡುವುದನ್ನು ಮನುವಾದಿಗಳು, ಜಾತಿವಾದಿಗಳು, ಪಾಳೆಗಾರಿಕೆ ಪ್ರವೃತ್ತಿಯವರು ಸಹಿಸುವುದಿಲ್ಲ. ಅರಸು, ಬಂಗಾರಪ್ಪ, ಮೊಯ್ಲಿ, ಧರಂಸಿಂಗ್ ಅವರನ್ನು ಸಹಿಸಿಕೊಳ್ಳಲಿಲ್ಲ. ಕರ್ನಾಟಕದಲ್ಲಿ ಡಿ. ದೇವರಾಜ ಅರಸು ಅವರನ್ನು ಬಿಟ್ಟರೆ ಸಿದ್ದರಾಮಯ್ಯ ಒಬ್ಬನೇ 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವುದು. ಹಿಂದುಳಿದ ವರ್ಗದ ನಾಯಕ 2ನೇ ಬಾರಿ ಸಿಎಂ ಆಗಿ ದ್ದನ್ನು ಸಹಿಸಲು ಆಗದೇ ವಿರೋಧ ಪಕ್ಷದವರು ಈ ರೀತಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಸೇಡಿನ ರಾಜಕಾರಣ, ದ್ವೇಷದ ರಾಜಕಾರಣ ಮಾಡುವುದರಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಮುಂದು. ಅವರು ಕೊಟ್ಟ ಮಾತನ್ನು ಎಂದೂ ಉಳಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.