Kolkata: ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ… ಪ್ರತಿಭಟನೆ ಬೆನ್ನಲೇ ಓರ್ವನ ಬಂಧನ
Team Udayavani, Aug 10, 2024, 1:29 PM IST
ಕೋಲ್ಕತ್ತ: ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.
ಏನಿದು ಘಟನೆ:
ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ನಿಗೂಢ ರೀತಿಯಲ್ಲಿ ಕಿರಿಯ ಮಹಿಳಾ ವೈದ್ಯರೊಬ್ಬರ ಅರೆ ನಗ್ನ ಶವ ಪತ್ತೆಯಾಗಿತ್ತು, ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕಲಿಯುತ್ತಿರುವ ಇತರ ವಿದ್ಯಾರ್ಥಿಗಳು ಹಾಗೂ ತರಬೇತಿಯಲ್ಲಿದ್ದ ವೈದ್ಯರು ಸೇರಿ ವೈದ್ಯೆಯ ಹತ್ಯೆಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ ಆದರೆ ಆಡಳಿತ ಮಂಡಳಿ ಇದು ಆತ್ಮಹತ್ಯೆ ಎಂದು ಹೇಳಿತ್ತು, ಆದರೆ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ ಎನ್ನಲಾಗಿದೆ. ಅಲಲ್ದೆ ಆಕೆಯ ದೇಹದ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿತ್ತು.
ಆಸ್ಪತ್ರೆಗೆ ಸೂಕ್ತ ಭದ್ರತೆ ಇಲ್ಲ:
ಕಿರಿಯ ವೈದ್ಯೆ ಹತ್ಯೆ ಬೆನ್ನಲ್ಲೇ ಆಸ್ಪತ್ರೆಯ ವೈದ್ಯರು ಸೇರಿದಂತೆ ಇತರ ಸಿಬಂದಿಗಳು ತಮ್ಮ ಸೇವೆಯನ್ನು ಮೊಟಕುಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಅಲ್ಲದೆ ಆಸ್ಪತ್ರೆಗೆ ಯಾವುದೇ ಭದ್ರತೆ ಇಲ್ಲ ಯಾರು ಯಾವ ಸಮಯದಲ್ಲೂ ಆಸ್ಪತ್ರೆಗೆ ಭೇಟಿ ನೀಡಬಹುದು ಯಾವುದೇ ತಪಾಸಣೆ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.
ಅಗತ್ಯ ಸೇವೆ ಮಾತ್ರ:
ಸದ್ಯ ಆಸ್ಪತ್ರೆಯ ಎಲ್ಲ ಸಿಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ಸೇವೆಗಳು ನಡೆಯುತ್ತಿಲ್ಲ ಎಂದು ಹೇಳಲಾಗಿದೆ, ಅಲ್ಲದೆ ಆಸ್ಪತ್ರೆಯ ಅಧಿಕಾರಿಗಳೇ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಹತ್ಯೆಯಾದ ವೈದ್ಯೆ ಗುರುವಾರ ರಾತ್ರಿ ಕರ್ತವ್ಯದಲ್ಲಿ ಇದ್ದಳು ಎಂದು ಹೇಳಲಾಗಿದ್ದು ಇದೆ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ ಎಸಗಿ ಹಲ್ಲೆ ಮಾಡಲಾಗಿದೆ ಎಂದು ಇಲ್ಲಿನ ಸಿಬಂದಿಗಳು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
#WATCH | Medical student found dead RG Kar Medical College & Hospital in Kolkata | Students of RG Kar Medical College & Hospital take out a candle march in the city. pic.twitter.com/a5j6SIt1MG
— ANI (@ANI) August 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.