BBMP: ಪಿಜಿಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯ
ಪೇಯಿಂಗ್ ಗೆಸ್ಟ್‌ಗಳ ನಿರ್ವಹಣೆಗೆ ಹೊಸ ಮಾರ್ಗಸೂಚಿ ಹೊರಡಿಸಿದ ಬಿಬಿಎಂಪಿ
Team Udayavani, Aug 10, 2024, 3:46 PM IST
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಪಿಜಿ (ಪೇಯಿಂಗ್ ಗೆಸ್ಟ್) ಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಇನ್ನು ಮುಂದೆ ಪೇಯಿಂಗ್ ಗೆಸ್ಟ್‌ಗಳಲ್ಲಿನ ಎಲ್ಲಾ ಪ್ರವೇಶ, ನಿರ್ಗಮನ ದ್ವಾರ, ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿ ಗಳನ್ನು ಚಿತ್ರೀಕರಿಸಲು ಸಿ.ಸಿ ಕ್ಯಾಮೆರಾಗಳನ್ನು ಕಡ್ಡಾಯ ವಾಗಿ ಅಳವಡಿಸಬೇಕು ಎಂದು ಸೂಚಿಸಿದೆ.
ಪಾಲಿಕೆ-2020ರ ಕಾಯ್ದೆ ಯಡಿ ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಪ್ರಾರಂಭಿಸಲು ಉದ್ದೇಶಿಸಿರುವ “ಪೇಯಿಂಗ್ ಗೆಸ್ಟ್’ ಗಳಿಗೆ ‘ಪರವಾನಗಿ ಮಂಜೂರಾತಿ’, ‘ನವೀಕರಣ’ ಹಾಗೂ ಈಗಾಗಲೇ ಪರವಾನಗಿ ಪಡೆದು ಅಸ್ತಿತ್ವದಲ್ಲಿರುವ ಪೇಯಿಂಗ್‌ಗೆಸ್ಟ್‌ಗಳಿಗೆ ಸಂಬಂಧಿಸಿದಂತೆ ಪಾಲಿಕೆ ಹೊಸದಾಗಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಿಜಿ ಮಾಲೀಕರು ಪಾಲಿಸಬೇಕು. ಮಾರ್ಗಸೂಚಿಗಳನ್ನು ಉಲ್ಲಂ ಸುವ ಉದ್ದಿಮೆದಾರರ ವಿರುದ್ಧ ಅಗತ್ಯ ಕ್ರಮ ಜರುಗಿಸಲಾಗುವುದು. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ.
ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡದಲ್ಲಿ ಒದಗಿಸಲಾದ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು ಎಂದು ಮಾರ್ಗ ಸೂಚಿಯಲ್ಲಿ ತಿಳಿಸಿಲಾಗಿದೆ.
ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ಒಬ್ಬ ನೌಕರನನ್ನಾದರೂ ಕಡ್ಡಾಯವಾಗಿ 24×7 ಸೇವೆಯಡಿಯಲ್ಲಿ ನಿಯೋಜಿಸಬೇಕು. ಪ್ರತಿ ಸಿಸಿ ಕ್ಯಾಮೆರಾದ ವಿಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್ ವೇರ್ -ಸಾಫ್ಟ್‌ವೇರ್ ಬ್ಯಾಕಪ್ ಸ್ಟೋರೆಜನ್ನು ಸಂರಕ್ಷಿಸಬೇಕು.
ಸ್ವಚ್ಛ ಸ್ನಾನಗೃಹ, ಶೌಚಾಲಯ ವ್ಯವಸ್ಥೆ:
ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವತ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಿರತಕ್ಕದ್ದು. ಪೇಯಿಂಗ್ ಗೆಸ್ಟ್‌ಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು. ಪ್ರತಿಯೊಬ್ಬ ನಿವಾಸಿಗೆ 135 ಎಲ್ ಪಿಸಿಡಿ ನೀರಿನ ಲಭ್ಯತೆ ಇರುವುದನ್ನು ಮಾಲೀಕರು, ಉದ್ದಿಮೆದಾರರು ಖಚಿತಪಡಿಸಿಕೊಳ್ಳಬೇಕು. ಪೇಯಿಂಗ್ ಗೆಸ್ಟ್ ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡು ಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರ ವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಕಡ್ಡಾಯ ವಾಗಿ ಎಫ್ಎಸ್‌ಎಸ್‌ಎಐ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.
ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ-1533 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ:101ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಬೇಕು ಎಂದು ಸೂಚನೆ ನೀಡಲಾಗಿದೆ.
“ಪ್ರಥಮ ಚಿಕಿತ್ಸಾ ಪೆಟ್ಟಿಗೆ ಅಳವಡಿಸಿ‘
ಪೇಯಿಂಗ್ ಗೆಸ್ಟ್‌ಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಆಳವಡಿಸಬೇಕು. ಪೇಯಿಂಗ್ ಗೆಸ್ಟ್‌ನ ಮಾಲೀಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಿಸಲು ಕ್ರಮವಹಿಸಬೇಕು. ವಲಯ ಆರೊಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ-ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಮೇಲ್ಕಂಡ ಮಾರ್ಗಸೂಚಿಗಳ ಪಾಲನೆಯಾಗುತ್ತಿರುವ ಕುರಿತು ಪ್ರತಿ ಆರು ತಿಂಗಳಿಗೊಮ್ಮೆ ಖಚಿತಪಡಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.