![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 10, 2024, 9:00 PM IST
ಮೈಸೂರು: ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ನನಗೆ ಅವರ ವಿಚಾರ ಗೊತ್ತಿರಲಿಲ್ಲ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನೂ ಹೊರಗೆ ತರುತ್ತೇನೆ. ಎಲ್ಲ ಬಿಚ್ಚಿಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಗುಡುಗಿದರು
ಜನಾಂದೋಲನ ಸಮಾವೇಶದಲ್ಲಿ ಮಾತನಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿಯನ್ನೇ ನಡೆಸಿದರು. ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತ ಇಲಾಖೆಯವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ ಕುಮಾರಸ್ವಾಮಿ ಯೂಟರ್ನ್ ಮಾಡಿಕೊಂಡು ಈಗ ಬಿಜೆಪಿ ಮೊರೆ ಹೋಗಿದ್ದಾರೆ. ಅವರು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಮೊದಲು ನನ್ನ ಮೇಲೆ ಆರೋಪ ಮಾಡಿದರು. ನಂತರ ಪ್ರೀತಂಗೌಡರ ಮೇಲೆ ಆರೋಪ ಮಾಡಿದ್ದಾರೆ. ಈ ಹಿಂದೆ ಯಡಿಯೂರಪ್ಪನವರಿಗೆ ಅಧಿಕಾರ ನೀಡದೇ ಬೆನ್ನಿಗೆ ಚೂರಿ ಹಾಕಿದವರು ಯಾರು? ಕುಮಾರಸ್ವಾಮಿಯೇ ಹೊರತು ಕಾಂಗ್ರೆಸಿಗರಲ್ಲ ಎಂದರು.
ಕುಮಾರಸ್ವಾಮಿ ಜೆಡಿಎಸ್ ನಾಯಕರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಇದು ಜನತಾದಳದ ಇತಿಹಾಸ. ಕೊನೆಗೆ ತನ್ನ ಮಗನಿಗೆ ರಾಜಕೀಯ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಣ್ಣನ ಮಗನ ವಿರುದ್ಧವೇ ಪಿತೂರಿ ಮಾಡಿ ಅವನ ಮೇಲೂ ಕೇಸ್ ದಾಖಲಾಗುವಂತೆ ಮಾಡಿದ್ದಾರೆ. ಅಂತಹವರು ಸಿದ್ದರಾಮಯ್ಯ ಹಾಗೂ ನನ್ನನ್ನು ಬಿಡುತ್ತಾರಾ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ಬಾಣ ಬಿಟ್ಟ ಡಿ.ಕೆ.ಶಿವಕುಮಾರ್, ನಿಮ್ಮ ತಂದೆಯವರಾದ ಯಡಿಯೂರಪ್ಪ ಅವರು ಎರಡು ಸಾರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇಕೆ? ಎನ್ನುವುದನ್ನು ಲೆಕ್ಕ ಕೊಡು. ನಾಳೆ ನೀನು ಮೈಸೂರಿಗೆ ಬಂದು ಸಭೆ ಮಾಡುವಾಗ ಲಕ್ಷ್ಮೀ ವಿಲಾಸ್ ಬ್ಯಾಂಕ್ ನಿಂದ ವಿದೇಶಕ್ಕೆ ಆರ್‌ಟಿಜಿಎಸ್ ಮೂಲಕ ಹಣ ಸಂದಾಯ ಮಾಡಿದ್ದೀಯಲ್ಲಾ, ಅದು ಯಾಕೆ? ನಿಮ್ಮ ತಂದೆ ಕಣ್ಣೀರು ಹಾಕಿದ್ದು ಏಕೆ? ಎನ್ನುವುದನ್ನು ವಿವರಿಸು. ಇಲ್ಲಿ ಯಾರು ರಾಜೀನಾಮೆ ನೀಡಬೇಕು ಎಂದು ಕಾಲ ತೀರ್ಮಾನ ಮಾಡುತ್ತದೆ ಎಂದು ಏಕವಚನದಲ್ಲೇ ಮಾತನಾಡಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.