Wayanad ದುರಂತ ಸ್ಥಳಗಳನ್ನು ಕಂಡು ಸಂಕಷ್ಟ ಆಲಿಸಿದ ಪ್ರಧಾನಿ ಮೋದಿ
ಈ ದುರಂತ ಸಾಮಾನ್ಯವಲ್ಲ... ವೈಮಾನಿಕ ಸಮೀಕ್ಷೆ.. ಸಂತ್ರಸ್ತರ ಭೇಟಿಯಾದ ಪ್ರಧಾನಿ
Team Udayavani, Aug 10, 2024, 5:28 PM IST
ವಯನಾಡ್: ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಆಗಸ್ಟ್ 10) ಭೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ”ಭೀಕರ ಪ್ರಕೃತಿ ವಿಕೋಪ ನಡೆದ ದಿನ ಬೆಳಗ್ಗೆ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದೆ. ನೆರವು ನೀಡುವುದಾಗಿ, ಆದಷ್ಟು ಬೇಗ ಸ್ಥಳಕ್ಕೆ ತಲುಪಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸೇನೆ, ಪೊಲೀಸರು, ವೈದ್ಯರು ಎಲ್ಲರೂ ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ರೀತಿಯಲ್ಲಿ ಸಹಾಯ ಮಾಡಲು ಪ್ರಯತ್ನಿಸಿದರು, ನಾವೆಲ್ಲರೂ ಅವರೊಂದಿಗೆ ನಿಂತಿದ್ದು, ಕೇಂದ್ರ ಸರ್ಕಾರವು ಕೇರಳ ಸರ್ಕಾರದ ಜತೆ ನಿಂತಿದೆ ಮತ್ತು ಹಣದ ಕೊರತೆಯಿಂದ ಯಾವುದೇ ಕೆಲಸಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.
“ಭೂಕುಸಿತದ ಬಗ್ಗೆ ನನಗೆ ತಿಳಿದಾಗಿನಿಂದ ನಾನು ಮಾಹಿತಿ ತೆಗೆದುಕೊಳ್ಳುತ್ತಿದ್ದೇನೆ, ದುರಂತದಲ್ಲಿ ಸಹಾಯ ಮಾಡಬಹುದಾದ ಕೇಂದ್ರ ಸರ್ಕಾರದ ಎಲ್ಲಾ ಏಜೆನ್ಸಿಗಳನ್ನು ತತ್ ಕ್ಷಣವೇ ಸಜ್ಜುಗೊಳಿಸಲಾಯಿತು. ಈ ದುರಂತ ಸಾಮಾನ್ಯವಲ್ಲ. ಸಾವಿರಾರು ಕುಟುಂಬಗಳ ಕನಸುಗಳು ಭಗ್ನಗೊಂಡಿವೆ. ನಾನು ಸ್ಥಳದಲ್ಲೇ ಪರಿಸ್ಥಿತಿ ನೋಡಿದ್ದೇನೆ. ಈ ದುರಂತವನ್ನು ಎದುರಿಸಿದ ಸಂತ್ರಸ್ತರನ್ನು ನಾನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಿದ್ದೇನೆ. ನಾನು ಆಸ್ಪತ್ರೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನೂ ಭೇಟಿ ಮಾಡಿದ್ದೇನೆ” ಎಂದು ಹೇಳಿದರು.
ಭೂಕುಸಿತ ಪೀಡಿತ ಪ್ರದೇಶಕ್ಕೂ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ತೆರವು ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.ಪರಿಹಾರ ಶಿಬಿರಕ್ಕೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಮಾತುಕಥೆ ನಡೆಸಿದರು.
#WATCH | Kerala: Prime Minister Narendra Modi holds a review meeting with officials regarding the landslide-affected area in Wayanad.
Governor Arif Mohammed Khan, CM Pinarayi Vijayan and Union Minister Suresh Gopi are also present.
(Source: DD News) pic.twitter.com/Yv6c0sU36Y
— ANI (@ANI) August 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.