Anantnag; ಉಗ್ರರ ಅಟ್ಟಹಾಸ: ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ
Team Udayavani, Aug 10, 2024, 8:50 PM IST
ಅನಂತ್ ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಶನಿವಾರ(ಆಗಸ್ಟ್ 10) ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಕೋಕರ್ನಾಗ್ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಅರಣ್ಯ ಪ್ರದೇಶದಲ್ಲಿ ಶೋಧ ಮತ್ತು ಕೂಂಬಿಂಗ್ ಕಾರ್ಯಾಚರಣೆಯನ್ನು ನಡೆಸಿದ್ದವು. ಶನಿವಾರ ಮುಂಜಾನೆಯಿಂದಲೇ ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಭದ್ರತಾ ಪಡೆಗಳ ತಂಡದ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಎನ್ಕೌಂಟರ್ ಆರಂಭವಾಗಿದೆ. ಕಾಡಿನಲ್ಲಿ ಅಡಗಿರುವ ಭಾರೀ ಶಸ್ತ್ರಸಜ್ಜಿತ ಉಗ್ರರು ಜಮ್ಮು ಪ್ರದೇಶದ ದೋಡಾ ಮೂಲಕ ಅನಂತನಾಗ್ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ.ಸೇನಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.