ಹೈಕೋರ್ಟ್ ನಿಂದ ಸುನಿಲ್‌ ಕುಮಾರ್‌ ಗೆ ತರಾಟೆ: ಕೊನೆಗೂ ವಾರೆಂಟ್‌ಗೆ ತಡೆಯಾಜ್ಞೆ

ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದ ಪ್ರಕರಣ

Team Udayavani, Aug 10, 2024, 9:25 PM IST

sunil kumar

ಬೆಂಗಳೂರು: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿ ಮಾಡಿರುವ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೆ ಆಕ್ರೋಶದಲ್ಲಿ ಸುನಿಲ್‌ ಕುಮಾರ್‌ ಅವರು ಮುತಾಲಿಕ್‌ ವಿರುದ್ಧ ನೀಡಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡಿದೆ.

ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮೊದಲು ತಡೆಯಾಜ್ಞೆ ನೀಡಲು ನಿರಾಕರಿಸಿತು. ಆದರೆ, ಪಕ್ಷವು ವಿಪ್‌ ಜಾರಿ ಮಾಡಿದ್ದರಿಂದ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಸುನಿಲ್‌ ಕುಮಾರ್‌ ಪರ ವಕೀಲ ವಿನೋದ್‌ ಕುಮಾರ್‌ ಪೀಠದ ಗಮನಕ್ಕೆ ತಂದ ಬಳಿಕ ನ್ಯಾಯಮೂರ್ತಿ ತಡೆಯಾಜ್ಞೆ ನೀಡಿದರು.

ವಕೀಲ ವಿನೋದ್ ಕುಮಾರ್‌ ಅವರು ಚುನಾವಣೆ ಸಂದರ್ಭದಲ್ಲಿ ‘ ದೂರುದಾರ ಪ್ರಮೋದ್‌ ಮುತಾಲಿಕ್‌ ಅರ್ಜಿದಾರರ ವಿರುದ್ಧ ಹೇಳಿಕೆ ನೀಡಿದ್ದಾರೆ. ಪ್ರಮೋದ್ ಮುತಾಲಿಕ್‌ ನೀಡಿದ ಹೇಳಿಕೆಗೆ ಪ್ರತಿ ಹೇಳಿಕೆ ನೀಡಲಾಗಿದೆ. ಹೇಳಿಕೆಗೆ ಪ್ರತಿ ಹೇಳಿಕೆ ನೀಡಿದಾಗ ಮಾನನಷ್ಟ ಪ್ರಕರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ’ ಎಂದು ಹೇಳಿದರು.

ತರಾಟೆಗೆ ತೆಗದುಕೊಂಡ ನ್ಯಾಯ ಪೀಠ ”ಸುನಿಲ್‌ ಕುಮಾರ್‌ ಅವರ ಹೇಳಿಕೆ ಮೇಲ್ನೋಟಕ್ಕೆ ಮಾನಹಾನಿಕರ ಎಂಬುದು ಸ್ಪಷ್ಟವಾಗುತ್ತದೆ. ಚುನಾವಣೆ ಸಮಯ ಎಂದು ಏನು ಬೇಕಾದರೂ ಮಾತನಾಡಬಹುದೇ ? ಅರ್ಜಿದಾರರು ನೀಡಿರುವ ಹೇಳಿಕೆಯನ್ನು ವಿಚಾರಣಾ ನ್ಯಾಯಾಲಯವು ಉಲ್ಲೇಖಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎನ್ನುವುದನ್ನು ವಿವರಿಸಿದೆ. ಹೇಳಿಕೆ ನೀಡುವುದಕ್ಕೂ ಒಂದು ಮಿತಿ ಇರಬೇಕು. ಟೈಗರ್‌ ಗ್ಯಾಂಗ್‌ ಏನು? ದೂರುದಾರರು ಆ ಟೈಗರ್‌ ಗ್ಯಾಂಗಿನ ಭಾಗವೇ? ಅರ್ಜಿದಾರರು ಹೇಗೆ ಆ ಹೇಳಿಕೆ ನೀಡಿದರು?’ ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ.

“ಇದು ನಿಜಕ್ಕೂ ಮಾನನಷ್ಟ ಪ್ರಕರಣವಾಗಿದೆ. ಮಾನಹಾನಿ ಹೇಳಿಕೆ ನೀಡುವುದು ಸಾರ್ವಜನಿಕ ಶಾಂತಿಭಂಗವನ್ನು ಉಂಟು ಮಾಡಲು ಕಾರಣವಾಗುತ್ತದೆ.ಶಾಸಕರಾದವರು ಈ ರೀತಿ ಮಾತನಾಡಬಾರದು” ಎಂದು ತರಾಟೆಗೆ ತೆಗೆದುಕೊಂಡಿತು.

ಕಿಡಿ ಕಾರಿದ್ದ ಸುನಿಲ್ ಕುಮಾರ್
ಕಳೆದ ವಿಧಾನಸಭೆ ಚುನಾವಣೆಯಲ್ಲಿ ತನ್ನ ವಿರುದ್ಧ ಸಮರ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದ ಪ್ರಮೋದ್‌ ಮುತಾಲಿಕ್‌ ವಿರುದ್ಧ ಫಲಿತಾಂಶದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ವಾಗ್ದಾಳಿ ನಡೆಸಿದ್ದ ಸುನೀಲ್‌ ಕುಮಾರ್‌ ‘ಪ್ರಮೋದ್ ಮುತಾಲಿಕರೇ ಹಣಕಾಗಿ ಉತ್ತರ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಯನ್ನು ಟೈಗರ್‌ ಗ್ಯಾಂಗಿನ ನೆಪದಲ್ಲಿ ಎಷ್ಟು ಬಾರಿ ಮಾಡಿಸಿದ್ದೀರಿ ನೀವು?’ ಎಂದು ಹೇಳಿಕೆ ನೀಡಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.