Avinash Sable: ಟ್ರೋಲ್ ಮಾಡಬೇಡಿ, ಅಥ್ಲೀಟ್‌ಗಳು ಖನ್ನತೆಗೆ ಒಳಗಾಗುತ್ತಾರೆ; ಸಾಬ್ಲೆ
Team Udayavani, Aug 10, 2024, 9:38 PM IST
ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿರುವ ಅಥ್ಲೀಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಲೇವಡಿ ಮಾಡಬೇಡಿ. ಅವರು ಖನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಒಲಿಂಪಿಕ್ಸ್ 3000 ಮೀ. ಸ್ಟೀಪಲ್ ಚೇಸ್‌ನಲ್ಲಿ ಸ್ಪರ್ಧಿಸಿದ್ದ ಅವಿನಾಶ್ ಸಾಬ್ಳೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವಿನಾಶ್ ಸಾಬ್ಳೆ, ನನ್ನ ಜೊತೆಗಿರುವ ಕ್ರೀಡಾಪಟುಗಳು ಅವರನ್ನು ಗುರಿಯಾಗಿಸಿ ನಡೆಯುತ್ತಿರುವ ಟ್ರೋಲ್‌ಗಳನ್ನು ನೋಡಿ ಖನ್ನತೆಗೆ ಒಳಗಾಗುತ್ತಿದ್ದಾರೆ. ಈ ರೀತಿ ನೀವು ಲೇವಡಿ ಮಾಡಿದರೆ ನಾವು ಹೇಗೆ ದೇಶವನ್ನು ಪ್ರತಿನಿಧಿಸಲು ಸಾಧ್ಯ ಎಂದು ಅವರೆಲ್ಲ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲಲು ಸೆಣೆಸಾಡುತ್ತಿರುವ ಭಾರತೀಯ ಕ್ರೀಡಾಪಟುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಟ್ರೋಲ್ ಮಾಡಲಾಗುತ್ತಿದೆ. ಅದರಲ್ಲೂ ಹಿಂದಿನ 4 ಒಲಿಂಪಿಕ್ಸ್‌ಗಳಲ್ಲಿ ಭಾಗಿಯಾದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಹಾಗೂ ಕುಸ್ತಿಪಟು ಅಂತಿಮ್ ಪಂಘಲ್‌ರನ್ನು ಗುರಿಯಾಗಿಸಿ ಅಪಹಾಸ್ಯ ಮಾಡಲಾಗಿತ್ತು. ಈ ಕುರಿತೇ ಸಬ್ಲೆ ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇಲ್ಲಿ ಮೋಜು ಮಾಡಲು ನಾವು ಬಂದಿಲ್ಲ. ನಾವು ಸರ್ಕಾರದಿಂದ ಹಣ ಪಡೆದು ಇಲ್ಲಿ ಮೋಜು-ಮಸ್ತಿ ಮಾಡುತ್ತಾ ಪ್ರವಾಸಕ್ಕೆ ಬಂದಿದ್ದೇವೆ ಎಂದು ಕೆಲವರು ಭಾವಿಸಿದ್ದಾರೆ. ವಿಶ್ವವಿಜೇತ ಆಟಗಾರರೆದುರು ಗೆಲುವಿಗಾಗಿ ನಾವು ಪ್ರಯತ್ನಿಸುತ್ತಿರುವಾಗ ಕೆಲವರು ನಾವು ಸ್ಪರ್ಧೆಯಲ್ಲಿ ಕೊನೇ ಸ್ಥಾನದಲ್ಲಿರುವ ಬಗ್ಗೆ ಟ್ರೋಲ್ ಮಾಡುತ್ತಿದ್ದಾರೆ’ ಎಂದು ಸಾಬ್ಳೆ ತಮ್ಮ ಅಸಮಧಾನ ಹೊರಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.