ಕಂಟೈನರ್ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿ: ಐವರನ್ನು ಪಾರು ಮಾಡಿದ “ವಾಂತಿ ಸಮಸ್ಯೆ’
Team Udayavani, Aug 11, 2024, 6:55 AM IST
ಉಪ್ಪಿನಂಗಡಿ: ಪ್ರಯಾಣದ ಮಧ್ಯೆ ವಾಂತಿ ಮಾಡುವುದೆಂದರೆ ದೊಡ್ಡ ಕಿರಿಕಿರಿ. ಆದರೆ ಅದೇ ವಾಂತಿಯು ಇಲ್ಲಿ ಐವರ ಜೀವ ಉಳಿಸಿದೆ!
ಕಂಟೈನರ್ ಲಾರಿಯೊಂದು ಶನಿವಾರ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ಹೊತ್ತಿನಲ್ಲಿ ಕಾರಿನಲ್ಲಿ ಯಾರೂ ಇರಲಿಲ್ಲ. ಅದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ವಾಂತಿ ಬಂದ ಕಾರಣ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದಲೇ ಇವರೆಲ್ಲರೂ ಜೀವ ಉಳಿಸಿಕೊಂಡರು.
ದಾವಣಗೆರೆಯ ನಿವಾಸಿಗರಾದ ಗಣೇಶ, ಶಿವು, ಕಾವ್ಯಾ, ದಂಡ್ಯಮ್ಮ ಅವರು ಚಾಲಕ ಅಬ್ದುಲ್ ರಹಿಮಾನ್ ಮುಲ್ಲಾ ಅವರೊಂದಿಗೆ ಶುಕ್ರವಾರ ಧರ್ಮಸ್ಥಳ ಕ್ಷೇತ್ರಕ್ಕೆ ಬಂದವರು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಸಂದರ್ಶನ ಮಾಡಿ ಊರಿಗೆ ಹಿಂದಿರುಗುವ ವೇಳೆ 11.30ಕ್ಕೆ ಬರ್ಚಿನಹಳ್ಳದಲ್ಲಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಕಾವ್ಯಾ ಎಂಬವರಿಗೆ ವಾಂತಿ ಬರುತ್ತಿದೆ ಎಂದು ತಿಳಿಸಿದ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಕಾರನ್ನು ನಿಲ್ಲಿಸಿ ಕಾವ್ಯಾಳನ್ನು ಉಪಚರಿಸಲು ಎಲ್ಲರೂ ಇಳಿದಿದ್ದರು. ಚಾಲಕ ಮೂತ್ರ ವಿಸರ್ಜನೆಗೆ ಹೋಗಿದ್ದರು. ಈ ವೇಳೆ ಎಲ್ಲರ ಕಣ್ಣೆದುರೇ ಅವರ ಕಾರಿನ ಮೇಲೆ ಕಂಟೈನರ್ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.