Ghataprabha Flood; ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸರ್ಕಾರ ಬದ್ಧ: ತಿಮ್ಮಾಪುರ

ರೈತರು-ಸಂತ್ರಸ್ತರು ಸರ್ಕಾರಕ್ಕೆ ಸಹಕಾರ ನೀಡಿ

Team Udayavani, Aug 11, 2024, 9:18 PM IST

Ghataprabha Flood; ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸರ್ಕಾರ ಬದ್ಧ: ತಿಮ್ಮಾಪುರ

ಮುಧೋಳ: ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೆೈತರಿಗೆ ಎನ್‌ಡಿಆರ್‌ ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ಆ. 6ರಂದು ನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ರೆೈತರು, ಸಂತ್ರಸ್ತರು ಹಾಗೂ ಅಧಿ ಕಾರಿಗಳೊಂದಿಗೆ ಸಭೆ ನಡೆಸಲಾಗಿದೆ.

ಸಭೆಯಲ್ಲಿ ರೆೈತರ ಬೇಡಿಕೆ ಆಲಿಸಲು ಮುಖ್ಯಮಂತ್ರಿಗಳನ್ನು ಮುಧೋಳ ನಗರಕ್ಕೆ ಕರೆತರಲು ಸಮಯ ಕೇಳಲಾಗುವುದು ಎಂದು ಭರವಸೆ ನೀಡಿದ್ದೆ. ಈ ಕಾರ್ಯದಲ್ಲಿ ನಾನು ನಿರತನಾಗಿದ್ದೇನೆ ಎಂದು ತಿಳಿಯಪಡಿಸುವೆ ಎಂದು ತಿಳಿಸಿದ್ದಾರೆ.

ಅಂದಿನ ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಕಿವಡಿ, ಕಾಂಗ್ರೆಸ್‌ ಮುಖಂಡ ಸದುಗೌಡ ಪಾಟೀಲ, ರೆೈತ ಮುಖಂಡರಾದ ಸುಭಾಷ ಶಿರಬೂರ, ದುಂಡಪ್ಪ ಲಿಂಗರಡ್ಡಿ, ದುಂಡಪ್ಪ ಯರಗಟ್ಟಿ, ಉಪವಿಭಾಗಾ ಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ವಿನೋದ ಹತ್ತಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಭೆಯಲ್ಲಿ ರೆೈತಮುಖಂಡರು ಸಕ್ರಿಯವಾಗಿ ಸ್ಪಂದನೆ ನೀಡಿದ್ದರು.

ಘಟಪ್ರಭಾ ಪ್ರವಾಹದಲ್ಲಿ 14 ದಿನಗಳ ಕಾಲ ನೀರು ನಿಂತ ಪರಿಣಾಮ ಕಬ್ಬು ಬೆಳೆ ಹಾನಿಯಾಗಿದೆ. ರೆೈತರ ನಷ್ಟ ತಗ್ಗಿಸುವ ಸಲುವಾಗಿ ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಪರಿಹಾರ ವಿತರಣೆ ಕುರಿತು ನೀರಾವರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾತರಕಿ-ಕಲಾದಗಿ ಸೇತುವೆಗೆ ಖುದ್ದು ಭೇಟಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾ ಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬಂದಾಗ ಪ್ರವಾಹ ಉಂಟಾಗುವುದಕ್ಕೆ ಕಾರಣವೇನು ಎಂಬುದನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ನೀರಾವರಿ ಇಲಾಖೆ ಅ ಧಿಕಾರಿಗಳು ಹಾಗೂ ಕೆಬಿಜೆಎನ್‌ಎಲ್‌ ಅಧಿ ಕಾರಿಗಳಿಗೆ ಸೂಚನೆ ನೀಡಿರುವೆ. ಶೀಘ್ರ ನೀರಾವರಿ ಸಮಿತಿ ವರದಿ ಬರಲಿದ್ದು, ಆ ಬಳಿಕ ಪ್ರವಾಹ ತಡೆಗೆ ಯಾವ ರೀತಿ ಕ್ರಮ ಕೆೈಗೊಳ್ಳಬೇಕು ಎಂಬುದರ ಕುರಿತು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕಾತರಕಿ-ನಿಂಗಾಪುರ ಬಳಿ ಬ್ಯಾರೇಜ್‌ ಅಗಲೀಕರಣ ಹಾಗೂ ಮುಧೋಳ-ಯಾದವಾಡ, ಚಿಂಚಖಂಡಿ ಸೇತುವೆ ಎತ್ತರಕ್ಕೆ ವರದಿ ಬಂದ ಬಳಿಕ ಕ್ರಮ ಕೆೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಘಟಪ್ರಭಾ ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ರೆೈತರು ಹಾಗೂ ನೆರೆ ಸಂತ್ರಸ್ತರು ಎದೆಗುಂದದೆ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ನಾಳೆ‌‌‌ (ಆ. 12ರಂದು) ಮುಧೋಳ ಬಂದ್‌

ಮುಧೋಳ : ಘಟಪ್ರಭಾ ನದಿಯ ಪ್ರವಾಹದಲ್ಲಿ ಮುಳುಗಡೆಯಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂಬ ಕೂಗು ಜೋರಾಗತೊಡಗಿದ್ದು, ಸರ್ಕಾರ ಹೋರಾಟಗಾರರ ಕೂಗಿಗೆ ಸ್ಪಂದಿಸುತ್ತಿಲ್ಲ ಎಂದು ಸೋಮವಾರ (ಆ. 12) ಮುಧೋಳ ಬಂದ್‌ ಮಾಡಿ ಉಗ್ರ ಹೋರಾಟ ನಡೆಸುವುದಾಗಿ ಪ್ರವಾಹಕ್ಕೊಳಗಾದ 30 ಗ್ರಾಮಗಳ ಸಂತ್ರಸ್ತರು, ರೆೈತರು ಒಮ್ಮತದ ನಿರ್ಧಾರ ಪ್ರಕಟಿಸಿದರು.

ನಗರದಲ್ಲಿ ಪ್ರವಾಹ ಸಂತ್ರಸ್ತರು ಹಾಗೂ ರೆೈತರ ಸಭೆಯಲ್ಲಿ ನಿರ್ಧಾರ ವ್ಯಕ್ತಪಡಿಸಿದ ಅವರು, ಆ.7ರಂದು ಸುರಿಯುವ ಮಳೆಯಲ್ಲಿಯೇ ನೆನೆದು ಹೋರಾಟ ಮಾಡಿದರೂ ಜನಪ್ರತಿನಿ ಧಿಗಳಾಗಲಿ, ಜಿಲ್ಲಾಡಳಿತವಾಗಲಿ ನಮ್ಮ ಹೋರಾಟಕ್ಕೆ ಸ್ಪಂದಿಸುವ ಕಾರ್ಯ ಮಾಡಿಲ್ಲ. ಅದಾದ ಬಳಿಕ ಅ.10ರವೆಗೆ ನಾವು ಸರ್ಕಾರಕ್ಕೆ ಗಡುವು ನೀಡಿದ್ದೆವು. ಆದರೆ ಸರ್ಕಾರ ನಮ್ಮ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ. ಅದಕ್ಕಾಗಿ ಉಗ್ರ ಹೋರಾಟ ಅನಿವಾರ್ಯವಾಗಿದೆ.

ಸರ್ಕಾರ ಮುಂದಿನ ಅನಾಹುತಕ್ಕೆ ಎಡೆಮಾಡಿಕೊಡದೆ ನಮ್ಮ ಬೇಡಿಕೆಗೆ ಸ್ಪಂದಿಸಿ ಸಂತ್ರಸ್ತರ ಕಣ್ಣೀರು ಒರೆಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ದುಂಡಪ್ಪ ಯರಗಟ್ಟಿ, ಬಸವಂತ ಕಾಂಬಳೆ, ಮುತ್ತಪ್ಪ ಕೊಮಾರ, ಸುಭಾಸ ಶಿರಬೂರ, ಬಂಡು ಘಾಟಗೆ, ಸದಪ್ಪ ತೇಲಿ, ಮಹೇಶಗೌಡ ಪಾಟೀಲ, ಸುಗರಪ್ಪ ಅಕ್ಕಿಮರಡಿ, ತಿಮ್ಮಣ್ಣ ಬಟಕುರ್ಕಿ, ಸದಾಶಿವ ಇಟಗನ್ನವರ ಸೇರಿದಂತೆ ಇತರರು ಇದ್ದರು.

 

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.