![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 11, 2024, 9:30 PM IST
ಮಾನ್ವಿ (ರಾಯಚೂರು ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಯಾವುದೇ ತಪ್ಪಾಗಿಲ್ಲ ಅವರ ಮೇಲೆ ಕೆಲವರಿಗಿರುವ ಅಸಹನೆ ಹಾಗೂ ದ್ವೇಷದ ಕಾರಣದಿಂದ ಅವರ ಮೇಲೆ ಸುಳ್ಳು ಆಪಾದನೆ ಮಾಡಲಾಗುತ್ತಿದೆ ಎಂದು ಕಲಬುರಗಿ ವಿಭಾಗದ ಕಾಗಿನೆಲೆ ಗುರು ಪೀಠದ ಶ್ರೀ ಸಿದ್ದರಾಮಾನಂದ ಪುರಿ ಸ್ವಾಮೀಜಿ ಅಭಿಪ್ರಾಯಪಟ್ಟರು.
ತಾಲೂಕಿನ ನಕ್ಕುಂದಿ ಗ್ರಾಮದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ನೂತನ ಮೂರ್ತಿ ಅನಾವರಣಗೊಳಿಸುವ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಿದ್ದರಾಮಯ್ಯ ಅವರು ಎಂದೂ ಕೂಡ ಭ್ರಷ್ಟಾಚಾರ ಮತ್ತು ಜಾತಿವಾದಕ್ಕೆ ತಮ್ಮ ರಾಜಕಾರಣದಲ್ಲಿ ಅವಕಾಶ ನೀಡಿದವರಲ್ಲ. ರಾಜ್ಯಾದ್ಯಂತ ಹಾಗೂ ನಗರ, ಪಟ್ಟಣಗಳಲ್ಲಿ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿ ಹೋರಾಟ ನಡೆಸುತ್ತಿದ್ದಾರೆ ಸಿದ್ದರಾಮಯ್ಯನವರಿಗೆ ಹಾಲುಮತ ಸಮಾಜ ಒಂದೇ ಅಲ್ಲ ರಾಜ್ಯದಲ್ಲಿನ ಎಲ್ಲಾ ಜಾತಿ, ಸಮುದಾಯಗಳು ಬೆಂಬಲ ವ್ಯಕ್ತಪಡಿಸುತ್ತಿವೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಂತ ಒಳ್ಳೆಯ ವ್ಯಕ್ತಿಯ ಮೇಲೆ ಆಪಾದನೆ ಬಂದಿರುವುದು ಬೇಸರ ತಂದಿದೆ ಅವರ ಮೇಲೆ ರಾಜ್ಯಪಾಲರು ಯಾವ ರೀತಿಯ ನಿರ್ಣಯ ಕೈಗೊಳ್ಳುತ್ತಾರೆ ಎನ್ನುವುದು ಕಾದು ನೋಡಬೇಕಾಗಿದೆ. ಅವರು ಕೂಡ ಕಾನೂನು ಹೋರಾಟಕ್ಕೆ ಮುಂದಾಗಿದ್ದು ಆಪಾದನೆಯಿಂದ ಶೀಘ್ರವೇ ಹೊರ ಬರಲಿದ್ದಾರೆ ಎಂದು ತಿಳಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.