TB Dam: ಸಲಹೆ ಗಂಭೀರವಾಗಿ ತೆಗೆದುಕೊಂಡಿಲ್ಲ ರಾಜ್ಯ ಸರ್ಕಾರ : ಸಂಸದ ಬೊಮ್ಮಾಯಿ
ಸರಿಯಾದ ನಿರ್ವಹಣೆ ಮಾಡದೇ ಕ್ರಸ್ಟ್‌ಗೇಟ್ ಮುರಿದು ಸಮಸ್ಯೆ ಉದ್ಭವ
Team Udayavani, Aug 12, 2024, 6:22 AM IST
ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ನಿರ್ವಹಣಾ ಸಮಿತಿ ನೀಡಿರುವ ಸಲಹೆಗಳ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳದ್ದರಿಂದ ಕ್ರಸ್ಟ್‌ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಕಾಲಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ ಎಂದರು. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ ಸಮಾನಾಂತರವಾದ ಅಣೆಕಟ್ಟು ಕಟ್ಟಬೇಕು ಎಂದು ನಮ್ಮ ಅವಧಿಯಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಮಾಡಿ ಸಿದ್ಧತೆ ಮಾಡಲಾಗಿತ್ತು. ಡ್ಯಾಂ ಮ್ಯಾನೇಜ್‌ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.
ಜನರ ಸುರಕ್ಷತೆ ಗಮನಿಸಲಿ:
ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು. ನೋಡೋಣ ಏನಾಗಿದೆ ಎಂದು ಗೊತ್ತಾಗುತ್ತದೆ ಎಂದರು.
ಡ್ಯಾಂನಲ್ಲೇ ಇಂಜಿನಿಯರ್‌ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.