![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Aug 12, 2024, 12:44 AM IST
ಮಂಗಳೂರು: ಮಣ್ಣು ತೆರವು ಕಾರ್ಯ ಪೂರ್ಣವಾಗದ ಕಾರಣ ಆ.12, 13 ಮತ್ತು 14ರಂದು ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟನೆ ತಿಳಿಸಿದೆ.
ಆ.12, 13ರಂದು ಕೆಎಸ್‌ಆರ್ ಬೆಂಗಳೂರು- ಕಾರವಾರ ಎಕ್ಸ್ ಪ್ರಸ್, ಎಸ್‌ಎಂವಿಟಿ ಬೆಂಗಳೂರು- ಮುರುಡೇಶ್ವರ ಎಕ್ಸ್ ಪ್ರಸ್, ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್, ವಿಜಯ ಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್, ಕಣ್ಣೂರು- ಕೆಎಸ್‌ಆರ್ ಬೆಂಗ ಳೂರು, ಕೆಎಸ್‌ಆರ್ ಬೆಂಗಳೂರು-ಕಣ್ಣೂರು, ಆ.13 ರಂದು ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್, ಕಾರವಾರ -ಯಶವಂತಪುರ ಎಕ್ಸ್‌ಪ್ರೆಸ್, ಕಾರವಾರ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್. ಆ.13, 14ರಂದು ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್‌ಪ್ರೆಸ್ ರೈಲು ರದ್ದಾಗಿದೆ.
ಮಾರ್ಗ ಬದಲಾವಣೆ: ರವಿವಾರದ ನಂ.16512 ಕಣ್ಣೂರು- ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕಣ್ಣೂರಿನಿಂದ ವಯಾ ಶೋರ್ನೂರು ಜಂಕ್ಷನ್, ಪೊಡನೂರು, ಈರೋಡ್, ಸೇಲಂ ಮತ್ತು ಬಂಗಾರಪೇಟೆ ಜಂಕ್ಷನ್ ಮೂಲಕ ಸಂಚರಿಸಿದೆ. ನಂ.16511 ಕೆಎಸ್‌ಆರ್ ಬೆಂಗಳೂರು- ಕಣ್ಣೂರು ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ವಯಾ ಬಂಗಾರಪೇಟೆ ಜಂಕ್ಷನ್, ಸೇಲಂ, ಈರೋಡ್, ಶೋರ್ನೂರ್ ಜಂಕ್ಷನ್ ಮೂಲಕ ಸಂಚರಿಸಿದೆ ಎಂದು ಪ್ರಕಟನೆ ತಿಳಿಸಿದೆ.
You seem to have an Ad Blocker on.
To continue reading, please turn it off or whitelist Udayavani.