Baba Siddhnath ದೇವಸ್ಥಾನದಲ್ಲಿ ಕಾಲ್ತುಳಿತ; ಏಳು ಮಂದಿ ಸಾವು, ಹಲವರಿಗೆ ಗಾಯ
Team Udayavani, Aug 12, 2024, 7:41 AM IST
ಪಾಟ್ನಾ: ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದ ಕಾರಣದಿಂದ ಏಳು ಮಂದಿ ಅಸುನೀಗಿ, ಕನಿಷ್ಠ ಒಂಬತ್ತು ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ (ಆ.12) ನಡೆದಿದೆ. ಬಾಬಾ ಸಿದ್ಧನಾಥ ದೇವಸ್ಥಾನವು ಬಿಹಾರ ರಾಜ್ಯದ ಜೆಹಾನಾಬಾದ್ ಜಿಲ್ಲೆಯಲ್ಲಿದೆ.
ಗಾಯಗೊಂಡವರನ್ನು ಜೆಹಾನಾಬಾದ್ ಮತ್ತು ಮಖ್ದುಂಪುರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಅಲಂಕೃತಾ ಪಾಂಡೆ ಹೇಳಿದ್ದಾರೆ.
ಸುದ್ದಿ ಸಂಸ್ಥೆ ಎಎನ್ ಐ ಜತೆ ಮಾತನಾಡಿದ ಜೆಹಾನಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲಂಕೃತಾ ಪಾಂಡೆ, “ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರ್ ನಲ್ಲಿರುವ ಬಾಬಾ ಸಿದ್ಧನಾಥ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ನಾವು ಎಲ್ಲವನ್ನೂ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದಿದ್ದಾರೆ.
ಕಾಲ್ತುಳಿತದ ಸುದ್ದಿ ಹೊರಬಿದ್ದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಸದ್ಯ ಕಾಲ್ತುಳಿತದಲ್ಲಿ ಮೃತಪಟ್ಟವರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.