Priyank Kharge: ಬಿಜೆಪಿ ನಾಯಕತ್ವ ಅಸಮರ್ಥವಿದ್ದಲ್ಲಿ ರಾಜ ಭವನ ದುರ್ಬಳಿಕೆ: ಖರ್ಗೆ

Team Udayavani, Aug 13, 2024, 12:00 PM IST

2

ಕಲಬುರಗಿ: ಬಿಜೆಪಿ ಯಾವ- ಯಾವ ರಾಜ್ಯಗಳಲ್ಲಿ ಅಸಮರ್ಥ ನಾಯಕತ್ವವಿದೆಯೋ ಅಲ್ಲೆಲ್ಲ ರಾಜ ಭವನ ದುರ್ಬಳಿಕೆ ಮಾಡಿಕೊಳ್ಳಲಾಗುತ್ತೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳನಾಡು, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ರಾಜ್ಯಪಾಲರು ನಡೆದುಕೊಂಡ ಬಗೆ ಅವಲೋಕಿಸಿದರೆ ಸ್ಪಷ್ಟ ಅರಿವಿಗೆ ಬರುತ್ತದೆ. ಅದರಲ್ಲಿ ಈಗ ಕರ್ನಾಟಕವೂ ಸೇರಿದೆ ಎಂದರು.

ಕೇರಳದಲ್ಲಿ ರಾಜ್ಯಪಾಲರೇ ಧರಣಿಗೆ ಕುಳಿತ್ತಿರುವುದು, ಪಶ್ಚಿಮ‌ ಬಂಗಾಳದಲ್ಲಿ ರಾಜ್ಯ ಪಾಲರೇ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಪ್ರಕರಣ ದಾಖಲಿಸುವಂತೆ ಹೇಳಿರುವುದು, ಮಹಾರಾಷ್ಟ್ರ ದಲ್ಲಿ‌ ನಸುಕಿನ ಜಾವ ಪ್ರಮಾಣ ವಚನ ಬೋಧಿಸಿರುವುದು ಹಾಗೂ ಕ‌ರ್ನಾಟಕದಲ್ಲಿ ಈಗ ಹಿಂದೆ‌ ಮುಂದೆ ಅವಲೋಕಿಸದೇ ನೋಟಿಸ್ ನೀಡಿರುವುದು ಸೇರಿದಂತೆ ಇತರ ಪ್ರಕರಣಗಳು ರಾಜ ಭವನ ಬಿಜೆಪಿ‌ ಕೈಗೊಂಬೆ ಎಂಬುದನ್ನು ನಿರೂಪಿಸುತ್ತವೆ. ಪ್ರಮುಖವಾಗಿ ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಪ್ರಾದೇಶಿಕ ಕಚೇರಿಯನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ಸಚಿವ ಖರ್ಗೆ ಬಲವಾಗಿ ಅಪಾದಿಸಿದರು.

ಜುಲೈ 5 ರಂದು ಸಿಎಂ ಗೆ ರಾಜ್ಯಪಾಲರು ಪತ್ರ ಬರೆಯುತ್ತಾರೆ. ಮತ್ತೆ 15ನೇ ತಾರೀಖಿಗೆ‌ ಮತ್ತೊಂದು ಪತ್ರ ಬರೆಯುತ್ತಾರೆ‌. 26 ರಂದು  ಈ ಬಗ್ಗೆ ಸರ್ಕಾರ ನೂರು ಪುಟಗಳ ಉತ್ತರ ಸಲ್ಲಿಸಿದೆ. ಅದೇ ದಿನ ಅಬ್ರಾಹಂ ದೂರು ದಾಖಲಿಸಿದ ಕೂಡಲೇ ರಾಜ್ಯಪಾಲರು ಸಿಎಂ ಗೆ ನೋಟಿಸು ಕೊಡುತ್ತಾರೆ. ಸರ್ಕಾರದ ಉತ್ತರವನ್ನು ಕೂಡಾ ಪರಿಶೀಲನೆ ನಡೆಸದೆ, ಕೇವಲ ಖಾಸಗಿ ದೂರು ದಾಖಲಿಸಿದ ತಕ್ಷಣ‌ ಶೋಕಾಸ್ ನೋಟಿಸು ನೀಡಲಾಗಿದೆ. ದೂರದಾರರ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರ, ಪ್ರಕರಣವೊಂದರಲ್ಲಿ‌ಅವರಿಗೆ ಸುಪ್ರಿಂ ಕೋರ್ಟ್ ದಂಡ ಹಾಕಿದೆ. ಅಂತವರ ಮಾತು ರಾಜ್ಯಪಾಲರು ಕೇಳುತ್ತಾರೆ ಎಂದರೆ ಮೇಲಿನಿಂದ ಅವರಿಗೆ ಆದೇಶ ಬಂದಿದೆ. ರಾಜ್ಯಪಾಲರು ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ರಾಜಭವನ ದುರಪಯೋಗವಾಗುತ್ತಿದೆ ಎಂದು ಆರೋಪಿಸಿದರು.

ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಪ್ರಕರಣ ಹಿನ್ನೆಲೆಯಲ್ಲಿ ಅಗತ್ಯ‌ಕ್ರಮ‌ ಕೈಗೊಳ್ಳಲಾಗುವುದು. ಡಿಸಿಎಂ ಅವರು ಭೇಟಿ‌ ನೀಡಿದ್ದಾರೆ. ಜೊತೆಗೆ ಆಣೆಕಟ್ಟುಗಳ ಗಟ್ಟಿತನದ ಸಮೀಕ್ಷೆ  ನಡೆಸಲಾಗುತ್ತದೆ ಎಂದರು.

ಈ ಹಿಂದೆ ಬಿಜೆಪಿ‌ ಅಧಿಕಾರದಲ್ಲಿ ಬೊಮ್ಮಾಯಿ ನೀರಾವರಿ‌ ಸಚಿವರಾಗಿದ್ದಾಗ ಎಷ್ಟು ಆಣೆಕಟ್ಟುಗಳಿಗೆ ಭೇಟಿ ನೀಡಿದ್ದರು ? ಗಟ್ಟಿತನದ ಸಮೀಕ್ಷೆ ನಡೆಸಿದ್ದರ? ಎಂದು ಪ್ರಶ್ನಿಸಿದ ಸಚಿವರು ತಾಂತ್ರಿಕ ಸಮಸ್ಯೆಯಿಂದ ಘಟನೆ ನಡೆದಿದೆ. ಏನಾದರೂ ಲೋಪದೋಷವಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು. ಮೊದಲ ಬೆಳೆಗೆ ನೀರಿನ ತೊಂದರೆ ಇಲ್ಲ ಎರಡನೆಯ ಬೆಳೆಗೂ ತೊಂದರೆಯಾಗದು. ತುಂಗಾಭದ್ರ ಡ್ಯಾಂಗೆ ಸಮನಾಂತರ ಸೇತುವೆ  ನಿರ್ಮಾಣಕ್ಕೆ ಸಮೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಅಗತ್ಯ ಕ್ರಮ:  ಮಹಾರಾಷ್ಟ್ರ ದಲ್ಲಿ ಆಣೆಕಟ್ಟುಗಳು ಭರ್ತಿ ಆಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ವಿಪತ್ತು ನಿರ್ವಹಣೆ ಅಧಿಕಾರಿಗಳ ಜೊತೆಗೆ ಕ್ರಮ ಕೈಗೊಂಡ ಕುರಿತು  ಚರ್ಚಿಸಲಾಗುವುದು ಎಂದು ಸಚಿವ ಖರ್ಗೆ ಹೇಳಿದರು. ಶಾಸಕ ಅಲ್ಲಮಪ್ರಭು ಪಾಟೀಲ್ ಹಾಜರಿದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.