Shivamogga: ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ; ಕಾರಣ ನಿಗೂಢ
Team Udayavani, Aug 13, 2024, 12:52 PM IST
ಶಿವಮೊಗ್ಗ: ಹಳೆಯ ಶಿವಮೊಗ್ಗ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ .
ಮೃತರನ್ನ ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಎಂದು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ.
ಭುವನೇಶ್ವರಿ ಹಾಗೂ ಅವರ ತಮ್ಮ ಹಾಗೂ ಮಗ ಸಾವನ್ನಪ್ಪಿದವರು. ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಜಯ್ ಗ್ಯಾರೇಜ್ ಬಳಿ ಇರುವ ಮನೆಯಲ್ಲಿ ಮೂವರು ವಿಷ ಸೇವಿಸಿದ್ದಾರೆ. ಇವರ ಮನೆಯ ಕಡೆಯಿಂದ ಯಾವುದೇ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಸಂಬಂಧಿಕರೊಬ್ಬರು ಮನೆಯ ಬಳಿಗೆ ವಿಚಾರಿಸಲು ಬಂದಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿರುವ ವಿಷಯ ಗೊತ್ತಾಗಿದೆ. ತಕ್ಷಣವೇ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಆಗಮಿಸಿದ್ದು ಮಹಜರ್ ನಡೆಸುತ್ತಿದ್ದಾರೆ. ಇನ್ನೂ ಆತ್ಮಹತ್ಯೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.