Kundapra Kannada: ಬೆಂಗಳೂರಿನಲ್ಲಿ ಆ. 17-18ರಂದು ಅದ್ಧೂರಿ ಕುಂದಾಪ್ರ ಕನ್ನಡ ಹಬ್ಬ

ಅರಮನೆ ಮೈದಾನದಲ್ಲಿ ಆಯೋಜನೆ; ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಉದ್ಘಾಟನೆ

Team Udayavani, Aug 13, 2024, 4:01 PM IST

1-kundapra-kannada

ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬʼವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಆ.13ರ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.

ಆ. 17ರ ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

ಆ. 18ರ ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ.  ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್  ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಇರಲಿದ್ದಾರೆ.

ಒಂದು ಲಕ್ಷ ಜನರು ಸೇರುವ ನಿರೀಕ್ಷೆ

ಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, 2 ದಿನಗಳ ಹಬ್ಬದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅದಾಗ್ಯೂ ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2 ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ ಎಂದು ದೀಪಕ್ ಹೇಳಿದರು.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದೇ ಮೊದಲು

ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆಯಾಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ.

ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ. ಇದು ಕೂಡ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮಾಹಿತಿ ನೀಡಿದರು.

ದಿನವಿಡೀಯ ವಿಶೇಷ: ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಕುಂದಾಪುರ ಕನ್ನಡ ಹಬ್ಬದ ಇತರ ಕಾರ್ಯಕ್ರಮಗಳು

ಆಗಸ್ಟ್ 17, ಶನಿವಾರ

ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳಿಂದ ಆಗಮಿಸುವ ಜನರ ಪುರ ಮೆರವಣಿಗೆ.

ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ಗ್ರೂಪ್ನಿಂದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ.

ಸಂಜೆ 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಆಗಸ್ಟ್ 18, ಭಾನುವಾರ

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ

ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.

ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ

ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.

ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ.

ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ

ಮಧ್ಯಾಹ್ನ 2.30: ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ

ಸಂಜೆ 4.30: ರಥೋತ್ಸವ

ರಾತ್ರಿ 7.30: ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

ಟಾಪ್ ನ್ಯೂಸ್

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

CM–Suvarna-Soudha

Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.