Gangolli ಅಂಗನವಾಡಿಗೆ ಕಿಡಿಗೇಡಿಗಳಿಂದ ಹಾನಿ: ಕೇಂದ್ರದ ಸ್ಥಳಾಂತರಕ್ಕಾಗಿ ನಡೆದ ಕೃತ್ಯ?


Team Udayavani, Aug 13, 2024, 11:47 PM IST

Gangolli ಅಂಗನವಾಡಿಗೆ ಕಿಡಿಗೇಡಿಗಳಿಂದ ಹಾನಿ: ಕೇಂದ್ರದ ಸ್ಥಳಾಂತರಕ್ಕಾಗಿ ನಡೆದ ಕೃತ್ಯ?

ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಂತ ಜೋಸೆಫರ ಶಾಲಾ ವಠಾರದಲ್ಲಿರುವ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ಕಿಟಕಿಯ ಬಾಗಿಲು ಹಾಗೂ ಮೆಸ್‌ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಅಂಗನವಾಡಿ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಬೇಕೆಂಬ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಅಂಗನವಾಡಿ ಕೇಂದ್ರದ ಕಿಟಕಿ ಬಾಗಿಲುಗಳು ಸಂಪೂರ್ಣ ಹಾಳಾಗಿರುವುದರಿಂದ ಅಂಗನವಾಡಿ ಕೇಂದ್ರದ ಒಳಗಿರುವ ಮಕ್ಕಳ ಪೌಷ್ಟಿಕ ಆಹಾರ ಇನ್ನಿತರ ಇಲಾಖೆ ದಾಖಲೆಗಳ ರಕ್ಷಣೆ ಹಾಗೂ ಭದ್ರತೆಗೋಸ್ಕರ ಕಿಟಕಿ ಬಾಗಿಲುಗಳನ್ನು ಸರಿಪಡಿಸಿಕೊಡುವಂತೆ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಮಾಡಿದ ಮನವಿ ಮೇರೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ ವತಿಯಿಂದ ಕಿಟಕಿ ಬಾಗಿಲುಗಳನ್ನು ಆ. 3ರಂದು ದುರಸ್ತಿಪಡಿಸಿ ಕಿಟಿಕಿಗೆ ಮೆಶ್‌ ಅಳವಡಿಸಲಾಗಿತ್ತು.

ಕಿಟಕಿ ಸರಿಪಡಿಸಿದ ಮರುದಿನ (ಆ. 4) ಕಿಡಿಗೇಡಿಗಳು ಬ್ಲೇಡಿನಿಂದ ಮೂರು ಕಿಟಕಿಯ ಮೆಶ್‌ಗಳನ್ನು ಕತ್ತರಿಸಿ ಅಂಗನವಾಡಿ ಒಳಗೆ ಹಾಕಿದ್ದು, ಒಂದು ಕಿಟಿಕಿ ಬಾಗಿಲಿಗೆ ಹಾನಿ ಮಾಡಿದ್ದಾರೆ. ಆ. 13ರಂದು ಅಂಗನವಾಡಿ ಕೇಂದ್ರಕ್ಕೆ ನೀರು ಸರಬರಾಜು ಮಾಡುವ ಪೈಪ್‌ ಅನ್ನು ಕಿತ್ತು ಹಾಕಿದ್ದು, ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳಿಗೆ ಮೂಲಭೂತ ಸೌಲಭ್ಯ ದೊರೆಯದಂತೆ ಮಾಡಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಆಡಳಿತ ಮಂಡಳಿ ಕೃತ್ಯ
9 ವರ್ಷಗಳಿಂದ ಗಂಗೊಳ್ಳಿಯ ಸಂತ ಜೋಸೆಫರ ಶಾಲೆಯ ಕಟ್ಟಡದ ಒಂದು ಕೊಠಡಿಯಲ್ಲಿ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರ ಕಾರ್ಯಾಚರಿಸುತ್ತಿದೆ. ಕಳೆದೆರಡು ವರ್ಷಗಳಿಂದ ಮಲ್ಯರಬೆಟ್ಟು ಅಂಗನ ವಾಡಿ ಕೇಂದ್ರವನ್ನು ಸ್ಥಳಾಂತರಿಸ ಬೇಕೆಂದು ಶಾಲೆಯ ಆಡಳಿತ ಮಂಡಳಿ ನಿರಂತರವಾಗಿ ಒತ್ತಡ ಹೇರುತ್ತಿದ್ದು, ಅಂಗನವಾಡಿ ಕಟ್ಟಡ ನಿರ್ಮಿಸಲು ನಿವೇಶನ ದೊರೆಯುವ ತನಕ ಈಗಿರುವ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರವನ್ನು ನಡೆಸಲು ಅವಕಾಶ ಮಾಡಿಕೊಡುವಂತೆ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳು ಮನವಿ ಮಾಡಿದ್ದರು. ಆದರೆ ಹೇಗಾ¨ರೂ ಮಾಡಿ ಅಂಗನವಾಡಿ ಕೇಂದ್ರವನ್ನು ತೆರವು ಗೊಳಿಸಲೇಬೇಕು ಎಂದು ಹಠಕ್ಕೆ ಬಿದ್ದಂತೆ ಅಂಗನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಮೇಲೆ ಒತ್ತಡ ಹೇರುತ್ತಿರುವ ಶಾಲೆಯ ಆಡಳಿತ ಮಂಡಳಿ ಈ ಕೃತ್ಯ ನಡೆಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕ್ರಮಕ್ಕೆ ಪೋಷಕರ ಆಗ್ರಹ
ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು, ಅಂಗನವಾಡಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಮತ್ತು ಅಂಗನವಾಡಿ ಕಟ್ಟಡದ ಕಿಟಿಕಿಗಳಿಗೆ ಹಾನಿ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿನ ಕಾನೂನು ಕ್ರಮ ಜರಗಿಸಬೇಕೆಂದು ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.