Pralhad Joshi ಕೇಂದ್ರದ ಸಲಹೆ ಧಿಕ್ಕರಿಸಿ ಟಿಬಿ ಡ್ಯಾಂ ಕ್ರೆಸ್ಟ್‌ಗೇಟ್ ಹಾನಿ
ಸಿಎಂ ಸಿದ್ದರಾಮಯ್ಯ ವಾದಕ್ಕೆ ಸಚಿವ ಜೋಶಿ ತಿರುಗೇಟು
Team Udayavani, Aug 14, 2024, 1:41 AM IST
ಹುಬ್ಬಳ್ಳಿ: ಜಲಾಶಯಗಳ ಸಮರ್ಪಕ ನಿರ್ವಹಣೆಗೆ ಕೇಂದ್ರ ಸಮಿತಿ ನೀಡಿದ ಸಲಹೆಗಳನ್ನು ರಾಜ್ಯ ಸರಕಾರ ಧಿಕ್ಕರಿಸಿದೆ. ಇದರ ಪರಿಣಾಮವಾಗಿಯೇ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ಮುರಿದು ಬಿದ್ದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ತುಂಗ ಭದ್ರಾ ಜಲಾಶಯ ಬೇಸಗೆಯಲ್ಲಿ ಖಾಲಿ ಇತ್ತು. ರಾಜ್ಯ ಸರಕಾರ ಆಗಲೇ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕಿತ್ತು. ಕೇಂದ್ರ ಸರಕಾರ ನೀಡಿದ ಸಲಹೆಗಳನ್ನೂ ಪಾಲಿಸದೆ ಧಿಕ್ಕರಿಸಿತು. ಆಗ ತೋರಿದ ಔದಾಸೀನ್ಯದ ಪರಿಣಾಮ ಈಗ ಎದುರಿಸುವಂತಾಗಿದೆ ಎಂದರು.
ರಾಜ್ಯ ಸರಕಾರದ ಬಳಿ ರಸ್ತೆ ದುರಸ್ತಿಗೂ ಹಣವಿಲ್ಲ. ಇನ್ನು ಸಮಾನಾಂತರ ಜಲಾಶಯ ಹೇಗೆ ನಿರ್ಮಾಣ ಮಾಡುತ್ತಾರೆ? ಬೇಕಾಬಿಟ್ಟಿ ಆಡಳಿತ, ಭ್ರಷ್ಟಾಚಾರದ ಫಲವಾಗಿ ರಾಜ್ಯ ಸರಕಾರ ದಿವಾಳಿಯಾಗಿದೆ. ಹಿಂದೆ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಜಲಾ ಶಯಗಳ ನಿರ್ವಹಣೆಗೆ ಪ್ರತೀ ವರ್ಷ 10 ಸಾವಿರ ಕೋಟಿ ರೂ. ವೆಚ್ಚ ಮಾಡುವುದಾಗಿ ಹೇಳಿದ್ದರು. ಆದರೆ ತಮ್ಮ ಆಡಳಿತವಿದ್ದ 5 ವರ್ಷಗಳಲ್ಲೂ 10 ಸಾವಿರ ಕೋಟಿ ರೂ. ಖರ್ಚು ಮಾಡಲಿಲ್ಲ. ರಾಜ್ಯ ಸರಕಾರ ಇನ್ನಾದರೂ ರಾಜ್ಯದ ಎಲ್ಲ ಜಲಾಶಯಗಳ ನಿರ್ವಹಣೆಗೆ ಗಮನ ಹರಿಸಬೇಕು ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.